ಪೊಲೀಸ್ ಅಧಿಕಾರಿ ಮೇಲೆ ಕೈಎತ್ತಿದ್ದ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಪೊಲೀಸ್ ಅಧಿಕಾರಿ ಮೇಲೆ ಕೈಎತ್ತಿದ್ದ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್


ಬೆಂಗಳೂರು, (ಡಿಸೆಂಬರ್ 10): ಧಾರವಾಡದ (ಧಾರವಾಡ) ಎಸ್‌ಎಸ್‌ಪಿ ಆಗಿದ್ದ ನಾರಾಯಣ.ವಿ.ಭರಮನಿ (ನಾರಾಯಣ ಭರಮಣಿ) ಅವರ ಮೇಲೆ ಕೈಎತ್ತಿದ ಪ್ರಕರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬೆಳಗಾವಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ನಾರಾಯಣ ಅವರಿಗೆ ಸಾರ್ವಜನಿಕವಾಗಿ ಕೈಎತ್ತಿದ್ದು, ಈ ಸಂಬಂಧ ಸಿಎಂ ಸಿಎಂ ಸಿದ್ದರಾಮಯ್ಯ (ಸಿದ್ದರಾಮಯ್ಯ) ವಿರುದ್ಧ ಎಫ್‌ಐಆರ್ ದಾಖಲು ಕೋರಿ ಭೀಮಪ್ಪ ಗಡಾದ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ವಜಾ ಮಾಡಿದೆ.

ಕೆಲ ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶನಕ್ಕೆ ಆಕ್ರೋಶಗೊಂಡ ಸಿದ್ದರಾಮಯ್ಯ, ವೇದಿಕೆ ಮೇಲೆಯೇ ಧಾರವಾಡ ಎಸ್‌ಎಸ್‌ಪಿ ನಾರಾಯಣ.ವಿ.ಭರಮನಿ ಅವರ ಮೇಲೆ ಕೈ ಎತ್ತಿದ್ದರು. ಅವರನ್ನು ಹೇಗೆ ಒಳಗೆ ಬಿಟ್ಟಿದ್ದೀರಿ ಎಂದು ವೇದಿಕೆಯ ಮೇಲೆಯೇ ಎಸ್‌ಎಸ್‌ಪಿ ನಾರಾಯಣ ಅವರನ್ನು ಕರೆದು ಹೊಡೆಯಲು ಕೈ ಎತ್ತಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಇನ್ನು ಈ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲು ಕೋರಿ ಭೀಮಪ್ಪ ಗಡಾದ ಎಂಬವರು ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದು, ಇಂದು (ಡಿಸೆಂಬರ್ 10) ಪರಿಶೀಲನೆ ನಡೆಸಿದ ಬೆಂಗಳೂರಿನ 42ನೇ ಇಸಿಜೆಎಂ ಕೋರ್ಟ್ ಜಡ್ಜ್ ಕೆ.ಎನ್.ಶಿವಕುಮಾರ್ ಅವರು ಭೀಮಪ್ಪ ಗಡಾದ ಸಲ್ಲಿಸಿದ್ದ ಖಾಸಗಿ ದೂರು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕವಾಗಿ ಕೈ ಎತ್ತಿದ್ದ ಸಿಎಂ: ಅವಮಾನದಿಂದ ರಾಜೀನಾಮೆಗೆ ಮುಂದಾಗಿದ್ದ ಪೊಲೀಸ್ ಅಧಿಕಾರಿ ಜಾಕ್‌ಪಾಟ್

ಸ್ವಯಂ ನಿವೃತ್ತಿಗೆ ಮುಂದಾಗಿದ್ದ ಅಧಿಕಾರಿ

ಸಾರ್ವಜನಿಕ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅವಮಾನಕ್ಕೆ ಗುರಿಯಾಗಿ ಮನನೊಂದಿದ್ದ ನಾರಾಯಣ ಭರಮನಿ ಅವರು ಸ್ವಯಂ ನಿವೃತ್ತಿಗೆ ಮುಂದಾಗಿದ್ದರು. ನಾರಾಯಣ ಭರಮನಿ ಅವರ ಭಾವುಕ ಬಹಿರಂಗ ಪತ್ರ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ನೊಂದ ಅಧಿಕಾರಿ ಪರವಾಗಿ ಈಗ ಭಾರೀ ಜನಬೆಂಬಲ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ಧ ವ್ಯಾಪಕ ಟೀಕೆಗಳು ಕಂಡುಬಂದವು. ಇದರಲ್ಲೇ ಎಚ್ಚೆತ್ತ ಸಿದ್ದರಾಮಯ್ಯನವರು ತಮ್ಮ ಆಪ್ತರ ಮೂಲಕ ನಾರಾಯಣ ಭರಮನಿ ಅವರನ್ನು ಬೆನ್ನ ಮನವೊಲಿಸಿದ್ದರು.

ಮುಂಬಡ್ತಿ ನೀಡಿ ಮನವೊಲಿಸಿದ ಸಿಎಂ

ಮುಜುಗರಕ್ಕೀಡಾಗಿ ಸ್ವಯಂ ನಿವೃತ್ತಿಗೆ ಪತ್ರ ಬರೆದಿದ್ದ ನಾರಾಯಣ ಬರಮನಿ ಅವರಿಗೆ ಸಿಎಂ ಸಿದ್ದರಾಮಯ್ಯನವರು ತಮ್ಮ ಆಪ್ತರ ಮೂಲಕ ಮನವೊಲಿಸಿದ್ದರು. ಧಾರವಾಡ ಎಸ್ಪಿಯಾಗಿದ್ದ ನಾರಾಯಣ ಬರಮನಿ ಅವರಿಗೆ ಬೆಳಗಾವಿ ಕಾನೂನು ಸುವ್ಯವಸ್ಥೆ ಡಿಸಿಪಿ ಹುದ್ದೆ ನೀಡಲಾಗಿದೆ. ಇದರೊಂದಿಗೆ ನಾರಾಯಣ ಬರಮನಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು.

ಅಂದು ಬೆಳಗಾವಿಯಲ್ಲಿ ಆಗಿದ್ದೇನು?

ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಭೆ ವೇಳೆ ಸಿಎಂ ಭಾಷಣ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಇದರಿಂದ ಆಕ್ರೋಶಗೊಂಡ ಸಿದ್ದರಾಮಯ್ಯ, “ಏಯ್.. ಯಾರಲ್ಲಿ ಎಸ್‌ಪಿ?” ಬಾರಯ್ಯ ಇಲ್ಲಿ ಎಂದು ವೇದಿ ಮೇಲೆ ಕರೆದು ನಾರಾಯಣ ಭರಮನಿ ಅವರ ಮೇಲೆ ಕೈ ಎತ್ತಿದ್ದರು. ಸಿದ್ದರಾಮಯ್ಯ ಅವರ ಈ ವರ್ತನೆಗೆ ಆಕ್ಷೇಪ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದರಾಮಯ್ಯನವರ ವರ್ತನೆಗೆ ಸಾಕಷ್ಟು ಟೀಕೆ ಟಿಪ್ಪಣಿಗಳು ಕಂಡುಬಂದವು. ಸಾರ್ವಜನಿಕವಾಗಿ ಪೊಲೀಸ್ ಅಧಿಕಾರಿಯನ್ನು ಅವಮಾನಿಸುವುದು, ಅವಹೇಳನ ಮಾಡುವುದು ಸರಿಯಲ್ಲ ಟೀಕಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *