ಬೆಂಗಳೂರು, ಡಿಸೆಂಬರ್ 10: ಇನ್ಮುಂದೆ ರೌಡಿಶೀಟರ್ (ರೌಡಿಶೀಟರ್) ಪೋಲೀಸ್ ಠಾಣೆಗೆ ಕರೆಸುವುದಕ್ಕೆ ಸಂಬಂಧಿಸಿದ ವಿಷಯ ನಿಗದಿಯಾಗಿದೆ. ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ಪೊಲೀಸ್ ಠಾಣೆಗೆ (ಪೊಲೀಸ್ ಠಾಣೆ) ಕರೆಸಬಹುದು ಎಂದು ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಪೀಠ ಬುಧವಾರ ಆದೇಶ ಹೊರಡಿಸಿದೆ. ಆ ಮೂಲಕ ಮೌಖಿಕವಾಗಿ ಪೊಲೀಸ್ ಠಾಣೆಗೆ ರೌಡಿಶೀಟರ್ ಕರೆಸಿಕೊಳ್ಳಲು ಬ್ರೇಕ್ ಬಿದ್ದಂತಾಗಿದೆ.
ಉನ್ನತ ಮೆಟ್ಟಿಲೇರಿದ್ದ ರೌಡಿಶೀಟರ್ ಸೈಲೆಂಟ್ ಸುನೀಲ್
ಅಲೋಕ್ ಕುಮಾರ್ ಹೆಚ್ಚುವರಿ ಆಯುಕ್ತರಾಗಿ ರೌಡಿಶೀಟರ್ ಸುನೀಲ್ ಕುಮಾರ್ ಅಲಿಯಾಸ್ ಸೈಲೆಂಟ್ ಸುನೀಲ್ ಕರೆಸಿ ಎಚ್ಚರಿಕೆ ನೀಡಿದರು. ಅಲೋಕ್ ಕುಮಾರ್ ವಾರ್ನಿಂಗ್ ನೀಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೀಗಾಗಿ ಸೈಲೆಂಟ್ ಸುನೀಲ್ ಮೆಟ್ಟಿಲೇರಿದ್ದರು. ಇದೀಗ ಸುನೀಲ್ ಕುಮಾರ್ ರಿಟ್ ಅರ್ಜಿಯ ಆದೇಶವನ್ನು ಹೊರಡಿಸಲಾಗಿದೆ.
ಇದನ್ನೂ ಓದಿ: ಕೊನೆಗೂ ಅಲೋಕ್ ಕುಮಾರ್ ಗೆ ಸಿಕ್ತು ಮುಂಬಡ್ತಿ: ಸರ್ಕಾರದ ವಿರುದ್ಧ ತೊಡೆತಟ್ಟಿ ಗೆದ್ದ ಐಪಿಎಸ್
ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ಪೊಲೀಸ್ ಠಾಣೆಗೆ ಕರೆಸಬಹುದು. ಠಾಣೆಗಳಿಗೆ ರೌಡಿಶೀಟರ್‌ಗಳು ತಮ್ಮ ಮೊಬೈಲ್ ನಂಬರ್‌ಗಳು. ಮೌಖಿಕವಾಗಿ ಕರೆಯುವ ಬದಲು SMS, ವಾಟ್ಸಾಪ್ ಸಂದೇಶ ನೀಡಲಾಗುವುದು. ಒಂದು ವೇಳೆ ಆಗಲೂ ಠಾಣೆಗೆ ಬರದಿದ್ದರೆ ರೌಡಿಶೀಟರ್ ಮನೆಗೆ ತೆರಳಬಹುದು ಎಂದು ಪೀಠ ಇದೆ.
ಇದನ್ನೂ ಓದಿ: ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್; ಜೀವಿತಾವಧಿ ಸೆರೆವಾಸ ಶಿಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ
ಇನ್ನು ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದರೆ ಈ ಆದೇಶದ ರಕ್ಷಣೆ ಸಿಗುವುದಿಲ್ಲ. ದಂಡಾಧಿಕಾರಿಯ ಅಧಿಕಾರವನ್ನು ಈ ಆದೇಶ ಕುಂಠಿತಗೊಳಿಸುವುದಿಲ್ಲ. ಸರ್ಕಾರ ಕಾನೂನು ರೂಪಿಸುವವರೆಗೆ ಈ ಪ್ರಕ್ರಿಯೆ ಪಾಲಿಸಲು ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಸೂಚನೆ ನೀಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 9:24 pm, ಬುಧವಾರ, 10 ಡಿಸೆಂಬರ್ 25