Headlines

ಕರ್ನಾಟಕ ರೈತರಿಗೆ ಗುಡ್​​ ನ್ಯೂಸ್: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ಕೇಂದ್ರ ಅಸ್ತು

ಕರ್ನಾಟಕ ರೈತರಿಗೆ ಗುಡ್​​ ನ್ಯೂಸ್: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ಕೇಂದ್ರ ಅಸ್ತು


ಬೆಂಗಳೂರು, (ಡಿಸೆಂಬರ್ 10): ಒಂದೆಡೆ ಮಳೆ ಹೊಡೆತ ಮತ್ತೊಂದೆಡೆ ಸೂಕ್ತ ಬೆಲೆ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದ ತೊಗರಿ ಬೇಳೆ ಬೆಳೆದಿದ್ದ ಕರ್ನಾಟಕ (ಕರ್ನಾಟಕ) ರೈತರ ನೇರವಿಗೆ ಸರ್ಕಾರ ಧಾವಿಸಿದ್ದು, ಕರ್ನಾಟಕದಲ್ಲಿ 9.67 ಲಕ್ಷ ಟನ್ ತೊಗರಿ ಬೇಳೆ (ತೂರ್ ದಾಲ್) ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ(MSP) ನಲ್ಲಿ ನಫೆಡ್ (NAFED) ಮತ್ತು ಎನ್‌ಸಿಸಿಎಫ್ (NCCF) ಮೂಲಕ ಆದ್ಯತೆ ಮೇಲೆ ತೊಗರಿ ಖರೀದಿಗೆ ತ್ವರಿತ ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (ಪ್ರಹ್ಲಾದ ಜೋಶಿ) ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ರೈತರ ಹಿತರಕ್ಷಣೆಗೆ ಸದಾ ಬದ್ಧವಾಗಿರುವ ಕೇಂದ್ರ ಸರ್ಕಾರ, ತಮ್ಮ ವಿಶೇಷ ಮನವಿಗೆ ತಕ್ಷಣ ಸ್ಪಂದಿಸಿದೆ.

ಕರ್ನಾಟಕದಲ್ಲಿ ತೊಗರಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಈ ಕೂಡಲೇ ಬೆಂಬಲ ಬೆಲೆಯಲ್ಲಿ ಖರೀದಿಗೆ ಮುಂದಾಗುವಂತೆ ಕೋರಿ ಮೊನ್ನೆ ಮೊನ್ನೆಯಷ್ಟೇ (ಡಿಸೆಂಬರ್ 4) ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಪತ್ರ ಬರೆದು ಗಮನ ಸೆಳೆದಿದ್ದಾರೆ. ಇದಕ್ಕೆ ತ್ವರಿತ ಸ್ಪಂದನೆ ನೀಡಿರುವ ಕೃಷಿ ಸಚಿವರು ಐದಾರು ದಿನದಲ್ಲೇ ತೊಗರಿ ಖರೀದಿಗೆ ಅನುಮೋದನೆ ನೀಡಲಾಗಿದೆ.

ಇದನ್ನೂ ಓದಿ: ಹೋಗಿ ಮೋದಿ, ಅಮಿತ್ ಶಾನ ಕೇಳು: ತೊಗರಿ ಬೆಳೆ ಹಾಳಾಯ್ತು ಎಂದಿದ್ದಕ್ಕೆ ರೈತ ಯುವಕನ ಮೇಲೆ ಮಲ್ಲಿಕಾರ್ಜುನ ಖರ್ಗೆ ಗರಂ

2025-26ರ ಖಾರಿ ವಾರ್ಷಿಕ ತೊಗರಿ ಖರೀದಿಗಾಗಿ ಬೆಲೆ ಬೆಂಬಲ ಯೋಜನೆ (PSS) ಅನುಷ್ಠಾನಕ್ಕೆ ಡಿ.10ರಂದು ರಾಜ್ಯ ಸರ್ಕಾರಕ್ಕೆ ಆದೇಶ ಹೊರಡಿಸಲಾಗಿದೆ. ಖರೀದಿ ಪ್ರಾರಂಭದ ದಿನಾಂಕದಿಂದ 90 ರಾಜ್ಯದಲ್ಲಿ PSS ಅಡಿಯಲ್ಲಿ ಒಟ್ಟು 9,67,000 MT ತೊಗರಿ ಖರೀದಿಗೆ ಅನುಮೋದನೆ ನೀಡಲಾಗಿದೆ ಎಂದು ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಪತ್ರ ಬರೆದಿದ್ದಾರೆ.

2025-26ಕ್ಕೆ ಅಂದಾಜು 12.60 LMT ಉತ್ಪಾದನೆಯಲ್ಲಿ ಕರ್ನಾಟಕ ಪ್ರಮುಖ ತೊಗರಿ ಬೆಳೆ ಉತ್ಪಾದನೆ ರಾಜ್ಯವಾಗಿದೆ. ಸಾಮಾನ್ಯ ಮಾದರಿ ಬೆಲೆ ಕ್ವಿಂಟಾಲ್‌ಗೆ ₹ 5,830 ರಿಂದ 6, 700ರ ನಡುವಿದೆ. 2025-26ಕ್ಕೆ ತೊಗರಿ ಬೆಳೆಗೆ ಘೋಷಿಸಲಾದ MSP ಕ್ವಿಂಟಾಲ್‌ಗೆ ₹. 8,00 ಆಗಿದೆ. ಆದರೆ ಮಾರುಕಟ್ಟೆ ಬೆಲೆ MSP ದರಕ್ಕಿಂತ ಕಡಿಮೆಯಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಈ ಕೂಡಲೇ ಬೆಂಬಲ ಬೆಲೆಯಲ್ಲಿ ಖರೀದಿಗೆ ಮುಂದಾಗಿ ರೈತರ ನೆರವಿಗೆ ಬರುವಂತೆ ಸಚಿವ ಜೋಶಿ ಕೇಂದ್ರದ ಗಮನ ಸೆಳೆದಿದ್ದರು.

ಪ್ರಸಕ್ತ ಖಾರಿಫ್ ವಾರ್ಷಿಕದಲ್ಲಿ (2025-26) ಆದ್ಯತೆಯ ಆಧಾರದ ಮೇಲೆ NAFED ಮತ್ತು NCCF ಮೂಲಕ ತೊಗರಿ ಖರೀದಿಗೆ ಅನುಮೋದಿಸುವ ಅವಶ್ಯಕತೆಯಿದೆ. ಇದರಿಂದ ತೊಗರಿ ಮಾರಾಟ ತೊಂದರೆ ತಡೆಗಟ್ಟಿ, ರೈತರಿಗೆ ನ್ಯಾಯಯುತ ಬೆಲೆ ಕಲ್ಪಿಸಲು ಸಾಧ್ಯ ಎಂದು ಜೋಶಿ ಕೃಷಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ಚವ್ಹಾಣ ಅವರು ಕರ್ನಾಟಕದ ತೊಗರಿ ಬೆಳೆಗಾರರ ​​ಸಂಕಷ್ಟದ ಬೆಲೆಯಲ್ಲಿ ಖರೀದಿಗೆ ಅನುಮೋದನೆ ನೀಡುವ ಮೂಲಕ ರೈತರ ಬೆನ್ನಿಗೆ ನಿಂತಿದ್ದಾರೆ. ಇದಕ್ಕಾಗಿ ಈರ್ವರೂ ರೈತಪರ ನಾಯಕರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಸಚಿವ ಪ್ರಲ್ಹಾದ ಜೋಶಿ.

ರಾಜ್ಯದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *