ಮೈಸೂರು, ಡಿಸೆಂಬರ್ 11: ಮೈಸೂರು ಅರಮನೆಯ ಮುಖ್ಯದ್ವಾರದ ಮೇಲ್ಚಾವಣಿಯ ಗಾರೆ ಕುಸಿತವಾಗಿದೆ, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಅರಮನೆಯ ವರಾಹ ಗೇಟ್ ಮುಖ್ಯದ್ವಾರದ ಮೇಲ್ಚಾವಣಿಯ ಗಾರೆ ಸ್ವಲ್ಪ ಪ್ರಮಾಣದಲ್ಲಿ ಕುಸಿದಿದೆ. ಸಿಬ್ಬಂದಿ ನಿಲ್ಲಿಸಿದ್ದ ಬೈಕ್ ಮೇಲೆಯೇ ಬಿದ್ದಿದೆ. ಜನರು ಇಲ್ಲದ ವೇಳೆ ಕುಸಿದಿದ್ದರೆ ಅನಾಹುತ ತಪ್ಪಿದೆ. ಘಟನೆ ಬಳಿಕ ಗೇಟ್ ಬಳಿ ಸಿಬ್ಬಂದಿ ಬ್ಯಾರಿಕೇಡ್ ಅಳವಡಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ