Headlines

‘ಧುರಂದರ್’ ಸಿನಿಮಾದ ‘ರಾಜಕೀಯ’ದ ಬಗ್ಗೆ ಹೃತಿಕ್ ರೋಷನ್ ಅಸಮಾಧಾನ

‘ಧುರಂದರ್’ ಸಿನಿಮಾದ ‘ರಾಜಕೀಯ’ದ ಬಗ್ಗೆ ಹೃತಿಕ್ ರೋಷನ್ ಅಸಮಾಧಾನ


ರಣ್ವೀರ್ ಸಿಂಗ್ (ರಣವೀರ್ ಸಿಂಗ್) ನಟಿಸಿರುವ ‘ಧುರಂದರ್’ ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆ ಆಗಿದ್ದು ದೊಡ್ಡ ಹಿಟ್ ಆಗಿದೆ. ದಿನದಿಂದ ದಿನಕ್ಕೆ ಸಿನಿಮಾದ ಕಲೆಕ್ಷನ್ ಸಾಗುತ್ತಿದೆ. ಭಾರತೀಯ ಸೈನಿಕನೊಬ್ಬ ಪಾಕಿಸ್ತಾನಕ್ಕೆ ಹೋಗಿ ಐಎಸ್ ಐ ಅಲ್ಲಿನ ಅಲ್ಲಿನ ಮಾಹಿತಿಯನ್ನು ಭಾರತಕ್ಕೆ ವರ್ಗಾಯಿಸುವ ಹಾಗೂ ಐಎಸ್ ಐನ ಮುಖ್ಯಸ್ಥರ ಬಂಧನಕ್ಕೆ, ಸಾವಿಗೆ ಕಾರಣವಾಗುವ ಕಥೆ ‘ಧುರಂದರ್’ ಸಿನಿಮಾ ಒಳಗೊಂಡಿದೆ. ಸಿನಿಮಾ ನೋಡಿದವರು ಮೆಚ್ಚಿದ್ದಾರೆ. ಇದೀಗ ಖ್ಯಾತ ನಟ ಹೃತಿಕ್ ರೋಷನ್, ‘ಧುರಂದರ್’ ಬಗ್ಗೆ ಇನ್ಸ್‌ಟಾಗ್ರಾಂ ಸ್ಟೋರಿ ಹಂಚಿಕೊಂಡಿದ್ದು, ‘ಸಿನಿಮಾದ ರಾಜಕೀಯ’ ಇಷ್ಟವಾಗಲಿಲ್ಲ.

ಸಿನಿಮಾದ ಬಗ್ಗೆ ಇನ್ಸ್ಟಾಗ್ರಾಮ್ ಸ್ಟೋರಿ ಹಂಚಿಕೊಂಡಿರುವ ಹೃತಿಕ್ ರೋಷನ್, ‘ನನಗೆ ಸಿನಿಮಾ ತುಂಬಾ ಇಷ್ಟವಾಯ್ತು, ಸಿನಿಮಾಕ್ಕಾಗಿ ಎಂಥಹ ಸಾಹಸ ಬೇಕಾದರೂ ಮಾಡುವ, ಕಥೆ ತಾವಂದುಕೊಂಡಂತೆ ಹೇಳಲು ಪ್ರಯತ್ನಿಸುವ ವ್ಯಕ್ತಿಗಳೆಂದರೆ ನನಗೆ ತುಂಬಾ ಪ್ರೀತಿ. ‘ಧುರಂಧರ’ ನಲ್ಲಿ ಹಾಗೆಯೇ ಆಗಿದೆ. ಅಂಥಹ ಅದ್ಭುತ ಸಾಹಸಕ್ಕೆ ಧುರಂಧರ ಒಂದು ಉದಾಹರಣೆ. ಕಥೆ ಹೇಳಿರುವ ರೀತಿ ತುಂಬಾ ಇಷ್ಟವಾಯಿತು’ ಹೃತಿಕ್ ರೋಷನ್.

ಆದರೆ ಹೃತಿಕ್ ಅವರ ಮುಂದಿನ ಸಾಲುಗಳು ಈಗ ಚರ್ಚೆಗೆ ಕಾರಣವಾಗಿವೆ. ‘ಸಿನಿಮಾದ ರಾಜಕೀಯವನ್ನು ನಾನು ಒಪ್ಪದೇ ಇರಬಹುದು, ಮತ್ತು ನಾವು ಚಲನಚಿತ್ರ ಕಾರ್ಮಿಕರು ವಿಶ್ವದ ನಾಗರಿಕರಿಗೆ ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ ಚರ್ಚಿಸಬಹುದು. ಆದಾಗ್ಯೂ, ನಾನು ಒಬ್ಬ ಸಿನಿಮಾ ವಿದ್ಯಾರ್ಥಿಯಾಗಿ ಇದನ್ನು ಹೇಗೆ ಪ್ರೀತಿಸಿದೆ ಮತ್ತು ಕಲಿತಿದ್ದೇನೆ ಎಂದು ನಿರ್ಲಕ್ಷಿಸಲು ಸಾಧ್ಯವಿಲ್ಲ. ಇದೊಂದು ಅದ್ಭುತ ಸಿನಿಮಾ’ ಹೃತಿಕ್ ರೋಷನ್.

ಇದನ್ನೂ ಓದಿ:’ಪುಷ್ಪ’ ನಿರ್ದೇಶಕನ ಕೊಂಡಾಡಿದ ಬಾಲಿವುಡ್ ಬೆಡಗಿ ಕೃತಿ ಸನೋನ್

‘ಧುರಂದರ್’ ಸಿನಿಮಾದಲ್ಲಿನ ಕೆಲವು ವಿಷಯಗಳು ರಾಜಕೀಯ ಪಕ್ಷವೊಂದರ ಪರವಾಗಿವೆ, ಒಬ್ಬ ರಾಜಕೀಯ ನಾಯಕನನ್ನು ಹೊಗಳುವ ರೀತಿಯಲ್ಲಿ ಇದು ಸಹ ಪ್ರಪೋಗಾಂಡ ಸಿನಿಮಾ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದೀಗ ಹೃತಿಕ್ ರೋಷನ್ ಸಹ ಪರೋಕ್ಷವಾಗಿ ಇದೇ ವಿಷಯದ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಹಿಂದಿನ ಸರ್ಕಾರ ಅಸಮರ್ಥ ಸರ್ಕಾರ ಎಂಬ ರೀತಿಯ ಸಂಭಾಷಣೆಗಳು ಸಿನಿಮಾದಲ್ಲಿವೆಯಂತೆ. ‘ಹಿಂದೂಗಳಿಗೆ ಪ್ರಥಮ ಶತ್ರು ಹಿಂದೂ, ಪಾಕಿಸ್ತಾನ ಎರಡನೇ ಸ್ಥಾನದಲ್ಲಿ ಬರುತ್ತದೆ’ ಎಂಬ ಸಂಭಾಷಣೆ ಸಿನಿಮಾದಲ್ಲಿದೆ. ಅದರ ಜೊತೆಗೆ ‘ಎಷ್ಟು ಸಾಧ್ಯವೋ ಅಷ್ಟು ಸಾಕ್ಷ್ಯ ಸಂಗ್ರಹಿಸು, ಮುಂದೊಂದು ದಿನ ದೇಶದ ಬಗ್ಗೆ ನಿಜವಾದ ಕಾಳಜಿ ಇರುವವರು ಬರಬಹುದು. ನಮ್ಮ ವೇಳೆ ಬರುವವರೆಗೂ ಕಾಯಬೇಕು’ ಎಂಬ ಸಂಭಾಷಣೆ ಸಿನಿಮಾದಲ್ಲಿದೆ. ಈ ಕಾರಣಗಳಿಗಾಗಿ ಸಿನಿಮಾವನ್ನು ಪ್ರೊಪೊಗಂಡ ಸಿನಿಮಾ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *