ಮೊದಲ ದಿನ ‘ಡೆವಿಲ್’ ಸಿಡಿಲಬ್ಬರದ ಕಲೆಕ್ಷನ್; ದರ್ಶನ್ ಫ್ಯಾನ್ಸ್ ಫುಲ್ ಖುಷ್

ಮೊದಲ ದಿನ ‘ಡೆವಿಲ್’ ಸಿಡಿಲಬ್ಬರದ ಕಲೆಕ್ಷನ್; ದರ್ಶನ್ ಫ್ಯಾನ್ಸ್ ಫುಲ್ ಖುಷ್


ನಟ ದರ್ಶನ್ ಅವರು ಜೈಲಿನಲ್ಲಿರುವಾಗಲೇ ‘ಡೆವಿಲ್’ ಸಿನಿಮಾ (ದೆವ್ವದ ಚಲನಚಿತ್ರ) ರಿಲೀಸ್ ಆಗಿದೆ. ಈ ಸಿನಿಮಾ ಮೊದಲ ದಿನ (ಡಿಸೆಂಬರ್ 11) ಎಷ್ಟು ಕೋಟಿ ಕಲೆಕ್ಷನ್ ಮಾಡಬಹುದು ಎಂಬ ಕುತೂಹಲ ಅಭಿಮಾನಿಗಳಿಗೆ ಇತ್ತು. ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಈ ಬಗ್ಗೆ ಬಾಕ್ಸ್ ಆಫೀಸ್ ಕಲೆಕ್ಷನ್ ಲೆಕ್ಕ ವರದಿ ನೀಡುವ sacnilk ಮಾಡಿದೆ. ಸದ್ಯ ಕಲೆಕ್ಷನ್ ನೋಡಿದ ಫ್ಯಾನ್ಸ್ ಫುಲ್ ಖುಷಿಯಾಗಿದ್ದಾರೆ. ‘ಕಾಂತಾರ: ಅಧ್ಯಾಯ 1’ ಬಳಿಕ ಕನ್ನಡದ ಚಿತ್ರವೊಂದು ಮೊದಲ ದಿನ ಇಷ್ಟು ದೊಡ್ಡ ಗಳಿಗೆ ಮಾಡಿದ್ದು ಇದೇ ಮೊದಲು.

ಕನ್ನಡ ಸಿನಿಮಾಗಳಿಗೆ ಜನ ಬರುವುದಿಲ್ಲ ಎಂಬ ಆರೋಪ ಮೊದಲಿನಿಂದಲೂ ಇದೆ. ಆದರೆ, ಕೆಲವು ಸ್ಟಾರ್ ಸಿನಿಮಾಗಳು ಬಂದಾಗ ಜನರು ಮುಗಿಬಿದ್ದು ಸಿನಿಮಾ ವೀಕ್ಷಿಸುತ್ತಾರೆ. ‘ಡೆವಿಲ್’ ಸಿನಿಮಾ ರಿಲೀಸ್ ಆಗುವ ಸಂದರ್ಭದಲ್ಲಿ ದರ್ಶನ್ ಜೈಲಿನಲ್ಲಿದ್ದಾರೆ. ಹೀಗಾಗಿ, ಪ್ರಚಾರದ ಕೊರತೆ ಉಂಟಾಗುತ್ತದೆ. ಆದರೆ, ಅವರ ಅಭಿಮಾನಿಗಳು ಎಲ್ಲ ಕಡೆ ಸಿನಿಮಾನ ಪ್ರಚಾರ ಮಾಡುವ ಜವಾಬ್ದಾರಿ ವಹಿಸಿದ್ದರು. ಅದರಲ್ಲಿ ಅವರು ಯಶಸ್ವಿಯಾಗಿದ್ದಾರೆ.

‘ಡೆವಿಲ್’ ಸಿನಿಮಾ ಮೊದಲ ದಿನ 10 ಕೋಟಿ ರೂಪಾಯಿ ಆಸುಪಾಸಿನಲ್ಲಿ ಬಂದಿದೆ ಎಂದು ಸ್ಯಾಕ್‌ನಿಲ್ಕ್ ವರದಿ ಮಾಡಿದೆ. ಇದು ಕರ್ನಾಟಕದ ಕಲೆಕ್ಷನ್ ಮಾತ್ರ. ವಿದೇಶದ ಗಳಿಕೆಯೂ ಸೇರಿದರೆ ಮತ್ತಷ್ಟು ಹೆಚ್ಚಲಿದೆ. ಸಿನಿಮಾ ಗಳಿಕೆ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ಡೆವಿಲ್ ವಿಮರ್ಶೆ: ‘ದಿ ಡೆವಿಲ್’ ರಾಜಕೀಯ ಸಮರದಲ್ಲಿ ದರ್ಶನ್ ವರ್ಸಸ್ ದರ್ಶನ್

ಕನ್ನಡದ ಸಿನಿಮಾ ಒಂದು ಮೊದಲು ದಿನ 10 ಕೋಟಿ ರೂಪಾಯಿ ಗಳಿಕೆ ಎಂದರೆ ಅದು ಸಣ್ಣ ವಿಷಯ ಏನು ಅಲ್ಲ. ಇಷ್ಟು ದೊಡ್ಡ ಕಲೆಕ್ಷನ್ ಆಗಲು ಚಿತ್ರದ ಟಿಕೆಟ್ ಬೆಲೆ ಕೂಡ ಕಾರಣ. ಪಿವಿಆರ್, ಐನಾಕ್ಸ್ ಸೇರಿದಂತೆ ಬಹುತೇಕ ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್ ದರ ಕನಿಷ್ಠ 500 ರೂಪಾಯಿ ಇಂದ ಆರಂಭವಾಗಿದೆ. ಏಕಪರದೆಯಲ್ಲಿ 400 ರೂಪಾಯಿ ಟಿಕೆಟ್ ದರ ನಿಗದಿಯಾಗಿದೆ. ಇದರಿಂದ ಹೆಚ್ಚಿನ ಕಲೆಕ್ಷನ್ ಆಗಿದೆ. ಕೆಲವು ಮಲ್ಟಿಪ್ಲೆಕ್ಸ್‌ಗಳಲ್ಲಿ ಜನ ಇಲ್ಲದೆ ಶೋ ಕ್ಯಾನ್ಸಲ್ ಆದ ಬಗ್ಗೆಯೂ ವರದಿಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 6:58 am, ಶುಕ್ರ, 12 ಡಿಸೆಂಬರ್ 25



Source link

Leave a Reply

Your email address will not be published. Required fields are marked *