ಮುಂದಿನ 3 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಶೀತದ ಅಲೆಯ ಸಾಧ್ಯತೆ
ಬೆಂಗಳೂರು, ಡಿಸೆಂಬರ್ 12: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವಿದ್ದು (ಹವಾಮಾನ ಮುನ್ಸೂಚನೆ) ಮೈಕೊರೆಯುವ ಚಳಿಯೂ ಕಂಡು ಬರುತ್ತಿದೆ. ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಒಣ ಹವೆಯ ವಾತಾವರಣವಿದ್ದು, ಇಂದೂ ಅದೇ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಇದೆ. ಬೆಳಗಾವಿ, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನಗಳಲ್ಲಿ ಶೀತದ ಅಲೆಗಳು ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಯಾವೆಲ್ಲಾ ಪ್ರದೇಶಗಳಲ್ಲಿ ಶೀತದಲೆ
ಮುಂದಿನ 3 ದಿನಗಳಲ್ಲಿ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ವಿಜಯಪುರ, ಕಲಬುರ್ಗಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೀತ ಅಲೆಗಳು ಉಂಟಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದ್ದು, ನಂತರದ ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಆಗುವುದಿಲ್ಲ.
ಎಲ್ಲೆಲ್ಲಿ ಒಣ ಹವೆ
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರುತ್ತದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ಹೊಂದಿದೆ.
ಇದನ್ನೂ ಓದಿ ಬೆಂಗಳೂರಿಗರೇ ಸಿದ್ದರಾಗಿ: ಮುಂದಿನವಾರ ರಾಜಧಾನಿಯಲ್ಲಿ ಇರಲಿದೆ ದಾಖಲೆಯ ಚಳಿ; ಕನಿಷ್ಠ ತಾಪಮಾನ ಎಷ್ಟು ಗೊತ್ತಾ?
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ
ಬೆಂಗಳೂರಿನಲ್ಲಿ ಇಂದು ಮಂಜು ಮುಸುಕಿದ ವಾತಾವರಣವಿದ್ದು, ಚಳಿಯ ಪ್ರಮಾಣ ಜಾಸ್ತಿ ಇದೆ. ಗಾಳಿಯ ವೇಗ ಪ್ರತಿ ಗಂಟೆಗೆ 11 ಕಿ.ಮೀ ಇರಲಿದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 15.°C ಇರಲಿದೆ ಎಂದು ಹವಾಮಾನ ಇಲಾಖೆ ಇದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.