ಬೆಳಗಾವಿ, (ಡಿಸೆಂಬರ್ 12): ಸಿದ್ದರಾಮಯ್ಯ (ಸಿದ್ದರಾಮಯ್ಯ) ಸರ್ಕಾರ ಪಂಚ ಗ್ಯಾರಂಟಿಗಳಲ್ಲಿ ಮನೆ ಯಜಮಾನಿಗೆ ಪ್ರತಿ ತಿಂಗಳ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆ (ಗೃಹಲಕ್ಷ್ಮಿ ಯೋಜನೆ) ಸೇರಿದಂತೆ. ಆದರೆ, ಕೆಲ ತಿಂಗಳ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ. ಈ ಸಂಬಂಧ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಅಧಿವೇಶನದಲ್ಲಿ ಗಮನಸೆಳೆದಿದ್ದಾರೆ. ಆದರೆ, ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (ಲಕ್ಷ್ಮಿ ಹೆಬ್ಬಾಳ್ಕರ್)ತಪ್ಪು ಲೆಕ್ಕ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗೃಹ ಲಕ್ಷ್ಮೀ ಹಣವನ್ನು ತಿಂಗಳವರೆಗೆ ನೀಡಿದ್ದೇವೆ ಎಂದು ಸಚಿವರು ಹೇಳಿದ್ದಾರೆ. ಆದರೆ, ಆಗಸ್ಟ್ ವರೆಗೂ ಹಣ ಬಿಡುಗಡೆ ಮಾಡಿಲ್ಲ. ಈ ಸಂಬಂಧ ಮಹೇಶ್ ಟೆಂಗಿನಕಾಯಿ ಅವರು ಸದನದಲ್ಲಿಂದು ಸರ್ಕಾರದ ಅಧಿಕೃತ ದಾಖಲೆ ಬಿಡುಗಡೆ ಮಾಡಿದ್ದು, ಫೆಬ್ರವರಿ, ಮಾರ್ಚ್ ತಿಂಗಳ ಹಣ ಬಿಡುಗಡೆ ಮಾಡಿಲ್ಲದಿರುವುದು ದಾಖಲೆ ಮೂಲಕ ಬಹಿರಂಗವಾಗಿದೆ. ಹಾಗಾದ್ರೆ, ಐದು ಸಾವಿರ ಕೋಟಿ ರೂಪಾಯಿ ಎಲ್ಲೋಯ್ತು ಎಂದು ವಿಪಕ್ಷ ಪ್ರಶ್ನಿಸಿದೆ.
ಈ ಬಗ್ಗೆ ಸ್ಲೀಕರ್ ಗೆ ಪತ್ರ
ಈ ಸಂಬಂಧ ಮಹೇಶ್ ಟೆಂಗಿನಕಾಯಿ ಅವರು ಸ್ಪೀಕರ್ ಯುಟಿ ಖಾದರ್ ಅವರಿಗೆ ಪತ್ರ ಬರೆದಿದ್ದು, ಆಗಸ್ಟ್ 2025 ರ ವರೆಗೆ ಗೃಹ ಲಕ್ಷ್ಮಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಉತ್ತರಿಸಿದ್ದಾರೆ. ಆದರೆ ಬಿಡುಗಡೆ ಮಾಡಿಲ್ಲ ಎಂಬುದಕ್ಕೆ ನನ್ನ ಸರ್ಕಾರಿ ದಾಖಲೆ ಇದೆ. ಸದನಕ್ಕೆ ಸಚಿವರು ತಪ್ಪು ಮಾಹಿತಿ ನೀಡುತ್ತಿದ್ದಾರೆ . ಸದನದ ಹಕ್ಕು ಮತ್ತು ಗೌರವ ತೋರಿದ ಅಗೌರವ. ಈ ವಿಚಾರವಾಗಿ ತುರ್ತಾಗಿ ಸದನದಲ್ಲಿ ಮಾತನಾಡಲು ಅವಕಾಶ ಕೊಡಿ ಎಂದು ಪತ್ರ ಬರೆದಿದ್ದಾರೆ.
ಇದನ್ನೂ ಓದಿ: Nandini Products: ಇನ್ಮುಂದೆ ಇಂದಿರಾ ಕ್ಯಾಂಟೀನ್ ನಲ್ಲಿ ಸಿಗಲಿದೆ ನಂದಿನಿ ಉತ್ಪನ್ನ! ಜಿಬಿಎ ಹೊಸ ಯೋಜನೆ
5 ಸಾವಿರ ಕೋಟಿ ಹಣ ಎಲ್ಲಿ ಹೋಯ್ತು?
ದಾಖಲೆ ಬಿಡುಗಡೆ ಮಾಡಿದ ಬಳಿಕ ಹೇಳಿಕೆ ನೀಡಿರುವ ಮಹೇಶ್ ಟೆಂಗಿನಕಾಯಿ, ಡಿಸೆಂಬರ್ 9 ರಂದು ಸದನದ ಗೃಹ ಲಕ್ಷ್ಮೀ ಹಣ ಬಿಡುಗಡೆ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಪ್ರಶ್ನೆ ಮಾಡಿದ್ದೆ. 2025ರ ಫೆಬ್ರವರಿ, ಮಾರ್ಚ್ ತಿಂಗಳ ಹಣ ಕೊಟ್ಟಿಲ್ಲ ಅಂತಾ ಕೇಳಿದ್ದೆ. ಇದಕ್ಕೆ ಸಚಿವರು ಆಗಸ್ಟ್ ತಿಂಗಳವರೆಗೂ ಕೊಟ್ಟಿದ್ದೇವೆ ಎಂದು ಹೇಳಿದ್ರು. ಮತ್ತೆ ಪರಿಶೀಲಿಸುವಂತೆ ಕೇಳಿದ್ದೆವು, ಆದ್ರೂ ಕೊಟ್ಟಿರೋದಾಗಿ ಹೇಳಿದ್ರು. ಆದರೆ, ಫೆಬ್ರವರಿ, ಮಾರ್ಚ್ ತಿಂಗಳ ‘ಗೃಹಲಕ್ಷ್ಮೀ’ ಹಣ ಬಿಡುಗಡೆ ಮಾಡಿಲ್ಲ. ಗದಗ, ಹಾವೇರಿ ಸೇರಿ ಮೂರು ಜಿಲ್ಲೆಗಳ ಬಗ್ಗೆ ದಾಖಲೆ ನೀಡಿದ್ದೇವೆ. ಫೆಬ್ರವರಿ, ಮಾರ್ಚ್ ತಿಂಗಳ ‘ಗೃಹಲಕ್ಷ್ಮೀ’ ಹಣ ಬಿಡುಗಡೆ ಮಾಡಿಲ್ಲ. ಬಿಡುಗಡೆ ಮಾಡಿದ್ರೆ 5 ಸಾವಿರ ಕೋಟಿ ಹಣ ಎಲ್ಲಿ ಹೋಯ್ತು? ಎಂದು ಪ್ರಶ್ನಿಸಿದರು.
ಈ ವಿಚಾರವನ್ನು ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಆರ್ .ಅಶೋಕ್ ಧ್ವನಿ ಎತ್ತಿದ್ದು, ಇದಕ್ಕೆ ಸಿಎಂ ಹೇಳಿಕೆ, ಬಾಕಿ ಇದ್ರೆ ಹಾಕುವುದಾಗಿ ಹೇಳಿದ್ದಾರೆ. ಸೋಮವಾರ ಸಚಿವರಿಂದ ಉತ್ತರ ಕೊಡಿಸುವುದಾಗಿ ಸಮಜಾಯಿಷಿ ನೀಡಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ