Headlines

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಮತ್ತಷ್ಟು ಪಾತಾಳಕ್ಕೆ ಕುಸಿದ ಟೀಂ ಇಂಡಿಯಾ! | Team India Slips To 6th Spot In World Test Championship 2025 27 Kvn

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಮತ್ತಷ್ಟು ಪಾತಾಳಕ್ಕೆ ಕುಸಿದ ಟೀಂ ಇಂಡಿಯಾ! | Team India Slips To 6th Spot In World Test Championship 2025 27 Kvn


16

6ನೇ ಸ್ಥಾನಕ್ಕೆ ಕುಸಿದ ಭಾರತ

Image Credit : ANI

6ನೇ ಸ್ಥಾನಕ್ಕೆ ಕುಸಿದ ಭಾರತ

ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲೇ ವೈಟ್‌ವಾಶ್‌ ಮುಖಭಂಗಕ್ಕೆ ಒಳಗಾಗಿದ್ದ ಭಾರತ ತಂಡ, 2025-27ರ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದಿದೆ.

26

9 ಪಂದ್ಯದಲ್ಲಿ 4ರಲ್ಲಷ್ಟೇ ಗೆಲುವು

Image Credit : ANI

9 ಪಂದ್ಯದಲ್ಲಿ 4ರಲ್ಲಷ್ಟೇ ಗೆಲುವು

ಶುಭ್‌ಮನ್ ಗಿಲ್ ನೇತೃತ್ವದ ಭಾರತ ತಂಡ 9 ಪಂದ್ಯಗಳ ಪೈಕಿ 4ರಲ್ಲಿ ಗೆದ್ದು, 4ರಲ್ಲಿ ಸೋತಿದೆ. ಒಂದು ಪಂದ್ಯ ಡ್ರಾಗೊಂಡಿದೆ. ಶೇ.48.15 ಗೆಲುವಿನ ಪ್ರತಿಶತ ಹೊಂದಿದೆ.

36

ಐದನೇ ಸ್ಥಾನದಲ್ಲಿದ್ದ ಭಾರತ

Image Credit : ANI

ಐದನೇ ಸ್ಥಾನದಲ್ಲಿದ್ದ ಭಾರತ

ಆಫ್ರಿಕಾ ವಿರುದ್ಧ ಸರಣಿ ಸೋಲಿನ ಬಳಿಕ ಭಾರತ ತಂಡವು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿತ್ತು.

46

ನಾಲ್ಕನೇ ಸ್ಥಾನಕ್ಕೇರಿದ ಕಿವೀಸ್

Image Credit : X/BLACKCAPS

ನಾಲ್ಕನೇ ಸ್ಥಾನಕ್ಕೇರಿದ ಕಿವೀಸ್

ಆದರೆ ಶುಕ್ರವಾರ ವೆಸ್ಟ್‌ಇಂಡೀಸ್‌ ವಿರುದ್ಧ ಟೆಸ್ಟ್‌ ಪಂದ್ಯದಲ್ಲಿ 9 ವಿಕೆಟ್‌ ಜಯಗಳಿಸಿದ ನ್ಯೂಜಿಲೆಂಡ್‌, ಅಂಕಪಟ್ಟಿಯಲ್ಲಿ ಭಾರತವನ್ನು ಹಿಂದಿಕ್ಕಿ 4ನೇ ಸ್ಥಾನಕ್ಕೇರಿತು.

56

7ನೇ ಸ್ಥಾನಕ್ಕೆ ಕುಸಿಯುವ ಭೀತಿಯಲ್ಲಿ ಭಾರತ

Image Credit : Getty

7ನೇ ಸ್ಥಾನಕ್ಕೆ ಕುಸಿಯುವ ಭೀತಿಯಲ್ಲಿ ಭಾರತ

ಆರಂಭಿಕ 2 ಆವೃತ್ತಿಗಳಲ್ಲಿ ರನ್ನರ್‌-ಅಪ್‌ ಆಗಿದ್ದ ಭಾರತ, ಅಂಕಪಟ್ಟಿಯಲ್ಲಿ ಇನ್ನಷ್ಟು ಕುಸಿಯುವ ಸಾಧ್ಯತೆಯಿದೆ. ಆಸ್ಟ್ರೇಲಿಯಾ ಸರಣಿಯಲ್ಲಿ ಇಂಗ್ಲೆಂಡ್‌(ಸದ್ಯ 7ನೇ ಸ್ಥಾನ) ಉತ್ತಮ ಪ್ರದರ್ಶನ ನೀಡಿ ಗೆದ್ದರೆ, ಭಾರತ 7ನೇ ಸ್ಥಾನಕ್ಕೆ ಕುಸಿಯಬಹುದು.

66

ಅಗ್ರಸ್ಥಾನದಲ್ಲಿರುವ ಆಸ್ಟ್ರೇಲಿಯಾ

Image Credit : Getty

ಅಗ್ರಸ್ಥಾನದಲ್ಲಿರುವ ಆಸ್ಟ್ರೇಲಿಯಾ

ಮಾಜಿ ಚಾಂಪಿಯನ್‌ ಆಸ್ಟ್ರೇಲಿಯಾ ಪಟ್ಟಿಯಲ್ಲೀಗ ಅಗ್ರಸ್ಥಾನದಲ್ಲಿದೆ. ತಂಡ ಆಡಿರುವ 5 ಪಂದ್ಯಗಳಲ್ಲೂ ಗೆದ್ದಿದೆ. ದ.ಆಫ್ರಿಕಾ 2ನೇ, ಶ್ರೀಲಂಕಾ 3ನೇ, ನ್ಯೂಜಿಲೆಂಡ್‌ 4ನೇ, ಪಾಕಿಸ್ತಾನ 5ನೇ ಸ್ಥಾನದಲ್ಲಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.



Source link

Leave a Reply

Your email address will not be published. Required fields are marked *