Headlines

ವಿದ್ಯಾರ್ಥಿನಿ ಜತೆ ಅಸಭ್ಯ ವರ್ತನೆ: ಇನ್ನೂ ದೂರು ದಾಖಲಿಸಿಕೊಳ್ಳದ ಪೊಲೀಸರು, ಪ್ರಾಂಶುಪಾಲ ಸಚಿವರ ಆಪ್ತ ಎಂದ ಮಾಜಿ ಶಾಸಕ

ವಿದ್ಯಾರ್ಥಿನಿ ಜತೆ ಅಸಭ್ಯ ವರ್ತನೆ: ಇನ್ನೂ ದೂರು ದಾಖಲಿಸಿಕೊಳ್ಳದ ಪೊಲೀಸರು, ಪ್ರಾಂಶುಪಾಲ ಸಚಿವರ ಆಪ್ತ ಎಂದ ಮಾಜಿ ಶಾಸಕ


ಬೆಳಗಾವಿ, ಡಿ.13: ಬೆಳಗಾವಿ (ಬೆಳಗಾವಿತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ನೆನ್ನೆ (ಡಿ.12) ಗರ್ಲ್ಸ್‌ ಹೈಸ್ಕೂಲ್‌ನ ಪ್ರಾಂಶುಪಾಲ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಗ್ರಾಮಸ್ಥರು ಧರ್ಮದೇಟು ನೀಡಿದ್ದಾರೆ. ಕೆಲವು ದಿನಗಳಿಂದ ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರ್ ವಿದ್ಯಾರ್ಥಿನಿಯರ ಜೊತೆಗೆ ಅಸಭ್ಯವಾಗಿ ವರ್ತಿಸುವುದು ಎಂಬ ದೂರು ಕೇಳಿ ಬರುತ್ತಿತ್ತು. ಈ ಬಗ್ಗೆ ಪೋಷಕರು ಹಾಗೂ ಶಾಲೆಯ ಸ್ಥಳೀಯ ನಾಯಕರಿಗೆ ದೂರು ನೀಡಿದ್ದರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ತಿಳಿಸಲಾಗಿದೆ. ಇದರಿಂದ ಆಕ್ರೋಶಗೊಂಡು ವಿದ್ಯಾರ್ಥಿನಿಯರ ಪೋಷಕರ ಶಾಲೆಗೆ ಧಾವಿಸಿ ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರ್‌ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಆವರಣ ಹಾಗೂ ಗ್ರಾಮಸ್ಥರು ಶಾಲೆ ಬಂದು ಪ್ರಾಂಶುಪಾಲನ್ನು ಕೊಠಡಿಯಿಂದ ಹೊರಗೆ ಎಳೆದುಕೊಂಡು ಬಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ಕಲ್ಲಪ್ಪ ಬೆಳಗಾಂವಕರ್ ಅವರಿಗೆ ಧರ್ಮದೇಟು ನೀಡಿದ್ದಾರೆ. ಜೊತೆಗೆ ವಿದ್ಯಾರ್ಥಿಗಳು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲಿ ಕೆಲಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ವಿಷಯ ತಿಳಿಯದೆ ಶಾಲೆ ಬಂದು ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರ್ ಅವರನ್ನು ರಕ್ಷಿಸಿದ್ದಾರೆ.

ಇನ್ನು ಈ ಘಟನೆ ನಡೆದ ಒಂದು ದಿನ ಕಳೆದರು ಪೊಲೀಸ್ ಘಟನೆ ಪ್ರಾಂಶುಪಾಲನ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಇದೀಗ ಈ ಪ್ರಕರಣಕ್ಕೆ ಸಾಕ್ಷಿಯಾಗಿ ವಿದ್ಯಾರ್ಥಿನಿ ಜೊತೆಗೆ ಅಶ್ಲೀಲಾ ಮೆಸೇಜ್ ಮಾಡಿದ ಚಾಟಿಂಗ್ ಕೂಡ ಸಿಕ್ಕಿದೆ. ಇನ್ನು ಈ ಬಗ್ಗೆ ಖುದ್ದು ವಿದ್ಯಾರ್ಥಿನಿಯೇ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾಳೆ.ಅದರೂ ಪೊಲೀಸರು ಕ್ರಮ ಕೈಗೊಂಡಿಲ್ಲ. ಇದೀಗ ಈ ಪ್ರಕರಣ ರಾಜಕೀಯ ತಿರುವು ಹೊಂದಿದೆ. ಪೊಲೀಸರ ನಡೆಯ ಬಗ್ಗೆ ಮಾಜಿ ಶಾಸಕ ಸಂಜಯ್ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಿನ್ಸಿಪಲ್ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಚಿವರ ಆಪ್ತ ಹೇಳಿದ್ದಾರೆ. ಪರೋಕ್ಷವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಎಂದು ಶಾಸಕ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಇಬ್ಬರು ಗಂಡಂದಿರ ಮುದ್ದಿನ ಮಡದಿ ಪೊಲೀಸಪ್ಪನ ಜತೆ ಪರಾರಿ

ಸಚಿವರ ಆಪ್ತ ಎಂಬ ಕಾರಣಕ್ಕೆ ಒತ್ತಡ ಹಾಕಿ ದೂರು ದಾಖಲಿಸಿಲ್ಲ, ವಿಚಾರಣೆ ಮಾಡಿ ಬಿಟ್ಟು ಕಳಿಸಿದ್ದಾರೆ. ಹೆಣ್ಣು ಮಗುವಿನ ದೃಷ್ಟಿಯಿಂದ ರಾಜಕಾರಣ ಮಾಡಲ್ಲ. ಆದ್ರೇ ತಪ್ಪು ಮಾಡಿದ ಪ್ರಿನ್ಸಿಪಲ್ ಗೆ ಶಿಕ್ಷೆಯಾಗಬೇಕು. ಅಂದು ಸ್ಥಳೀಯ ಶಾಸಕಿ ಸಾರಾಯಿ ಕುಡಿತಾರೆ ಅಂದಿದ್ದಕ್ಕೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಈಗ ಎಲ್ಲಿಗೆ ಹೋಗಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಬಿಜೆಪಿ ಎಂದು ರಾಜಕಾರಣ ಮಾಡೋದು ಬೇಡ, ಸಚಿವರ ಬಳಿಯೂ ಮನವಿ ಮಾಡುತ್ತೇನೆ. ವಿದ್ಯಾರ್ಥಿನಿಗೆ ನ್ಯಾಯ ಸಿಗಲಿ ಪ್ರಿನ್ಸಿಪಲ್ ಗೆ ಶಿಕ್ಷೆ ಕೊಡಿಸಿ. ನೀವು ನ್ಯಾಯ ಕೊಡಿಸದಿದ್ದರೆ ನಿಮ್ಮ ತಂಗಿಗೆ ಅನ್ಯಾಯ ಮಾಡಿದಂತೆ ಎಂದು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *