ಬೆಂಗಳೂರು, ಡಿಸೆಂಬರ್ 14: ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಇರಬಹುದೆಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಜನಪ್ರಿಯ ಬ್ರ್ಯಾಂಡ್‌ಗಳ ಮೊಟ್ಟೆಗಳಲ್ಲಿ AOZ (ನೈಟ್ರೋಫ್ಯುರಾನ್) ಎಂಬ ಕ್ಯಾನ್ಸರ್ ಕಾರಕ ಅಂಶವಿದೆ ಎಂದು ಹೇಳಲಾಗಿದೆ. ಈ ವಿಷಯವು ಮೊಟ್ಟೆ ಸೇವಿಸುವವರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಹಿಂದೆ ನಡೆಸಿದ ಪರೀಕ್ಷೆಗಳಲ್ಲಿ ಹಾನಿಕಾರಕ ಅಂಶಗಳು ಕಂಡುಬಂದಿಲ್ಲ. ಆದಾಗ್ಯೂ, ಈ ಹೊಸ ಆರೋಪಗಳು ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಲಂಕುಷ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.