ಪ್ರಿನ್ಸಿಪಾಲ್ ಗ್ರಾಮಸ್ಥರಿಂದ ಥಳಿತ
ಬೆಳಗಾವಿ, ಡಿಸೆಂಬರ್ 14: ವಿದ್ಯಾರ್ಥಿನಿ (ವಿದ್ಯಾರ್ಥಿ) ಜೊತೆಗೆ ಅಸಭ್ಯವಾಗಿ ವರ್ತಿಸಿದ ವಿಚಾರವಾಗಿ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಗರ್ಲ್ಸ್ ಹೈಸ್ಕೂಲ್ನ ಪ್ರಿನ್ಸಿಪಾಲ್ ಗ್ರಾಮಸ್ಥರಿಗೆ ಧರ್ಮದೇಟು ನೀಡಿದ್ದರು. ಘಟನೆ ಕುರಿತಾಗಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದರೆ ಇದೀಗ ಘಟನೆ ಎರಡು ದಿನದ ಬಳಿಕ ಪೋಕ್ಸೋ ಕಾಯ್ದೆಯಡಿ ನಡೆದಿದೆ (ಪೋಕ್ಸೊ ಕಾಯಿದೆ) ತನಿಖೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ.
ನಡೆದದ್ದೇನು?
ಬೆಳಗಾವಿಯ ಬೆಳಗುಂದಿ ಗ್ರಾಮದ ಗರ್ಲ್ಸ್ ಹೈಸ್ಕೂಲ್ನ ಕಲ್ಲಪ್ಪ ಬೆಳಗಾಂವಕರ್ ಎಂಬ ಪ್ರಿನ್ಸಿಪಾಲ್ ವಿದ್ಯಾಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಅಶ್ಲೀಲ ಮೆಸೇಜ್ ಮಾಡಿದ ಆರೋಪವೂ ಕೇಳಿಬಂದಿತ್ತು. ಇದಕ್ಕೆ ಸಾಕ್ಷಿಗಳು ಸಿಕ್ಕಿದ್ದವು. ಹೀಗಾಗಿ ಎರಡು ದಿನದ ಹಿಂದೆ ಗ್ರಾಮಸ್ಥರು ಶಾಲೆಗೆ ನುಗ್ಗಿ ಪ್ರಿನ್ಸಿಗೆ ಹಿಗ್ಗಾಮುಗ್ಗಾ ಥಳಿಸಿ ಬಳಿಕ ಪೊಲೀಸರಿಗೆ ಹಸ್ತಾಂತರಿಸಿದರು.
ಇದನ್ನೂ ಓದಿ: ವಿದ್ಯಾರ್ಥಿನಿ ಜತೆ ಅಸಭ್ಯ ವರ್ತನೆ: ಈ ದೂರು ದಾಖಲಿಸಿಕೊಳ್ಳದ ಪೊಲೀಸರು, ಪ್ರಾಂಶುಪಾಲ ಸಚಿವರ ಆಪ್ತ ಎಂದ ಮಾಜಿ ಶಾಸಕ
ಆದರೆ ಘಟನೆ ಬಗ್ಗೆ ಹಾಗೂ ಶಾಲಾ ವಿದ್ಯಾರ್ಥಿಗಳು ದೂರು ನೀಡಿದ್ದರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಆರೋಪಿಸಿದ್ದರು. ಸಾಕ್ಷಿಗಳಿದ್ದರೂ ಪ್ರಕರಣ ದಾಖಲಿಸಿಕೊಂಡಿರಲಿಲ್ಲ. ರಾಜಕೀಯ ಒತ್ತಡದಿಂದ ಪ್ರಕರಣ ದಾಖಲಿಸಿಕೊಳ್ಳುತ್ತಿಲ್ಲ ಎಂದು ಮಾಜಿ ಶಾಸಕ ಸಂಜಯ್ ಪಾಟೀಲ್ ಆರೋಪಿಸಿದ್ದರು.
ಇದನ್ನೂ ಓದಿ: ‘ನನಗೆ ನ್ಯಾಯ ಬೇಕು’: ಮತ್ತೊಂದು ಮದುವೆಗೆ ಸಿದ್ಧನಾಗಿದ್ದ ಶಿಕ್ಷಕನಿಗೆ ಶಾಕ್ ಕೊಟ್ಟ ಯುವತಿ
ಸದ್ಯಕ್ಕೆ ಎರಡು ದಿನಗಳ ಬಳಿಕ ಪೋಕ್ಸೋ ಕಾಯ್ದೆಯಡಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪೊಲೀಸರು, ವಿದ್ಯಾರ್ಥಿನಿ ಕುಟುಂಬಸ್ಥರು ದೂರು ಕೊಡುತ್ತಾರೆಂದು ಕಾಯುತ್ತಿದ್ದೆವು. ಆದರೆ ಯಾರು ದೂರು ನೀಡದ ಹಿನ್ನೆಲೆ ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಯಾವುದೇ ಒತ್ತಡಕ್ಕೆ ಮಣಿಯದೆ ಪ್ರಕರಣವನ್ನು ತನಿಖೆ ಮಾಡಲಾಗುವುದು ಎಂದು ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಪತ್ರಿಕಾ ಪ್ರಕಟಣೆಯಲ್ಲಿ ಪ್ರಕಟಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.