
ಹುಬ್ಬಳ್ಳಿ, (ಡಿಸೆಂಬರ್ 14):ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿರೋ ಘಟನೆ ಹುಬ್ಬಳ್ಳಿ ನಗರದ ಈಶ್ವರ ನಗರದಲ್ಲಿ ನಡೆದಿದೆ. ನಿನ್ನೆ ಸಂಜೆ ಬಡಾವಣೆಗೆ ಆಗಮಿಸಿದ್ದ ವ್ಯಕ್ತಿ, ಬಡಾವಣೆಯ ಮಹಿಳೆಯರಿಗೆ ಚುಡಾಯಿಸುವದು, ಅಸಭ್ಯವಾಗಿ ವರ್ತಿಸುತ್ತಿದ್ದನಂತೆ. ಇದನ್ನು ಗಮನಿಸಿದ ಸ್ಥಳೀಯರು, ವಿಕೃತ ಕ್ರಿಮಿಯನ್ನು ಕಂಬಕ್ಕೆ ಕಟ್ಟಿ, ಚಪ್ಪಲಿಯಿಂದ ಹೊಡೆದಿದ್ದಾರೆ. ಮುಖ ಮುಸುಡಿ ನೋಡದೆ, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆದರೆ ಈ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ, ನಂತರ ಬಿಟ್ಟು ಕಳುಹಿಸಿದ್ದಾರೆ.