ವೋಟ್ ಚೋರಿ ವಿರುದ್ಧ ಕಾಂಗ್ರೆಸ್​​ ಹೋರಾಟ: ದೆಹಲಿಯಲ್ಲಿ ಪ್ರತಿಧ್ವನಿಸಿದ ಆಳಂದ ಕ್ಷೇತ್ರದ ಮತಗಳ್ಳತನ

ವೋಟ್ ಚೋರಿ ವಿರುದ್ಧ ಕಾಂಗ್ರೆಸ್​​ ಹೋರಾಟ: ದೆಹಲಿಯಲ್ಲಿ ಪ್ರತಿಧ್ವನಿಸಿದ ಆಳಂದ ಕ್ಷೇತ್ರದ ಮತಗಳ್ಳತನ


ಬೆಂಗಳೂರು, ಡಿಸೆಂಬರ್ 14: ವೋಟ್ ಚೋರಿ (ಚೋರಿ ಮತ) ವಿರುದ್ಧವಾಗಿ ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (ರಾಹುಲ್ ಗಾಂಧಿ) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಆಳಂದ ಕ್ಷೇತ್ರದ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದಾರೆ. ಅಷ್ಟೇ ಅಲ್ಲದೆ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನರೇಂದ್ರ ಮೋದಿ ಮತ ಕಳ್ಳತನ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ: ರಾಹುಲ್ ಗಾಂಧಿ ಕಿಡಿ

ದೆಹಲಿಯಲ್ಲಿ ನಡೆದ ಬೃಹತ್ ಪ್ರತಿಭಟನೆ ವೇಳೆ ಮಾತನಾಡಿದ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ಮತಗಳ್ಳತನ ಆಗಿದ್ದು ಕಂಡುಬಂದಿದೆ. ನರೇಂದ್ರ ಮೋದಿ ಮತ ಕಳ್ಳತನ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಅಷ್ಟೇ ಅಲ್ಲದೆ ಬಿಜೆಪಿಯ ಜೊತೆ ಕೇಂದ್ರ ಚುನಾವಣಾ ಆಯೋಗ ಶಾಮೀ ಇದೆ, ಚುನಾವಣಾ ಆಯೋಗಕ್ಕಾಗಿ ಕಾನೂನನ್ನೇ ಬದಲಾವಣೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಹರಿಯಾಣದಲ್ಲಿ ಮತಗಳ್ಳತನ ಹೇಗಿದೆ ಅಂತಾ ತಿಳಿಯಬೇಕಿದೆ. ಒಂದೇ ಬೂಟ್ ನಲ್ಲಿ 200 ಸಲ ಹೇಗೆ ಮತ ಹಾಕಲು ಸಾಧ್ಯ? ಸಂಸತ್ತಿನಲ್ಲಿ ಪ್ರಸ್ತಾಪ ಮಾಡಲು ಮುಂದಾದರೆ ಅವಕಾಶ ಕೊಡಲಿಲ್ಲ. ಹಿಂಸೆಯಿಲ್ಲದೆ ನಾವು ಈ ಯುದ್ಧವನ್ನು ಗೆಲ್ಲುತ್ತೇವೆ.

ಇದನ್ನೂ ಓದಿ: ವೋಟ್ ಚೋರಿ ವಿರೋಧಿಸಿ ರಾಹುಲ್ ಗಾಂಧಿ ಪ್ರತಿಭಟನೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು ನೋಡಿ

ಸತ್ಯವು ಅತ್ಯಂತ ಮುಖ್ಯ ಎಂದು ಮಹಾತ್ಮ ಗಾಂಧೀಜಿ ಹೇಳಿದರು. ಆದರೆ ಸತ್ಯವಲ್ಲ, ಶಕ್ತಿಯೇ ಮುಖ್ಯ ಎಂದು ಭಾಗವತ ಹೇಳಿದರು. ಸತ್ಯ ಎತ್ತಿಹಿಡಿಯುವ ಮೂಲಕ ಮೋದಿ ಮತ್ತು ಆರ್‌ಎಸ್‌ಎಸ್ ಸರ್ಕಾರವನ್ನು ನಾವು ತೆಗೆದುಹಾಕುತ್ತೇವೆ. ಮೋಹನ್ ಭಾಗವತ್ ಸತ್ಯಕ್ಕೆ ಬೆಲೆಯಿಲ್ಲ ಅಂತಾರೆ, ನಾವು ಸತ್ಯದ ಹಿಂದೆ ಇರುವವರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನ್ಯಾಯಯುತ ಚುನಾವಣೆ ಎದುರಿಸಲಿ: ಸಂಸದೆ ಪ್ರಿಯಾಂಕಾ ಗಾಂಧಿ ಸವಾಲು

ಪ್ರತಿಭಟನೆಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಸಮಾವೇಶ, ಪ್ರತಿ ಚುನಾವಣೆಯಲ್ಲೂ ಇವಿಎಂ ಮಶಿನ್ ಹ್ಯಾಕ್ ಮಾಡಿದರು. ಮಹಾರಾಷ್ಟ್ರ, ಹರಿಯಾಣ ಚುನಾವಣೆಯಲ್ಲಿ ಮತಗಳ್ಳತನ ಆಗಿದೆ. ಸಂಸತ್ತಿನಲ್ಲಿ ಮತಗಳ್ಳನದ ಬಗ್ಗೆ ಚರ್ಚೆಗೆ ಅವಕಾಶವನ್ನೇ ನೀಡುತ್ತಿಲ್ಲ ಎಂದ ಪ್ರಿಯಾಂಕಾ ಗಾಂಧಿ, ನ್ಯಾಯಯುತ ಚುನಾವಣೆ ಎದುರಿಸಲಿ ಎಂದು ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ವೋಟ್ ಚೋರಿ ವಿರುದ್ಧ ದೆಹಲಿಯಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ: ಸಿಎಂ, ಡಿಸಿಎಂ ಭಾಗಿ

ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆದರೆ ಬಿಜೆಪಿ ಗೆಲ್ಲಲ್ಲ. ಬ್ಯಾಲೆಟ್ ಪೇಪರ್ ಬಳಸಿದರೆ ಗೆಲ್ಲಲ್ಲ ಎಂದು ಅವರಿಗೂ ಗೊತ್ತಿದೆ. ಬಿಹಾರ ಚುನಾವಣೆಯಲ್ಲಿ ಸೋತಿದ್ದಕ್ಕೆ ನಿರಾಸೆ ಬೇಕಾಗಿಲ್ಲ, ಏಕೆಂದರೆ ಅವರು ಕಳ್ಳತನದ ಮೂಲಕ ಗೆದ್ದಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ಅಧಿವೇಶನಕ್ಕೆ ಹಾಜರಾಗಿಲ್ಲ: ಮಲ್ಲಿಕಾರ್ಜುನ ಖರ್ಗೆ

ಇನ್ನು ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಪ್ರಧಾನಿ ಮೋದಿ ಯಾವತ್ತು ಅಧಿವೇಶನಕ್ಕೆ ಹಾಜರಾಗುವುದಿಲ್ಲ. ಅಧಿವೇಶನದ ನಂತರ ರಾಹುಲ್ ವಿದೇಶಕ್ಕೆ ಹೋಗ್ತಾರೆ ಅಂತಾರೆ. ರಾಹುಲ್ ವಿದೇಶಕ್ಕೆ ಹೋಗಿದ್ದು ಬಿಜೆಪಿಗರು ಪ್ರಶ್ನಿಸಿದ್ದಾರೆ, ಆದರೆ ಮೋದಿ ಅಧಿವೇಶನಕ್ಕೆ ಹಾಜರಾಗದೆ ವಿದೇಶಕ್ಕೆ ಹೋಗುತ್ತಾರೆ ಎಂದು ಆರೋಪಿಸಿದರು.

ತೆಲಂಗಾಣ ಸಿಎಂ ರೇವಂತ್ ಹೇಳಿದ್ದಿಷ್ಟು

ತೆಲಂಗಾಣ ಸಿಎಂ ರೇವಂತ್ ಮಾತನಾಡಿದ್ದು, ನಮ್ಮ ಮಾತು ಮೋದಿಗೆ ಕೇಳಬೇಕು, ಅವರು ನಿದ್ದೆಯಿಂದ ಏಳಬೇಕು. ಮೊದಲು ಮತದಾರರ ಪಟ್ಟಿಯಿಂದ ನಮ್ಮ ಹೆಸರನ್ನು ತೆಗೆಯುತ್ತಾರೆ. ಆಮೇಲೆ ಆಧಾರ್ ರದ್ದು ಮಾಡ್ತಾರೆ, ರೇಷನ್ ಕಾರ್ಡ್ ತೆಗೆದು ಹಾಕ್ತಾರೆ, ಅದಕ್ಕೆ ಅವಕಾಶ ನೀಡಬಾರದು ಎಂದು ಗುಡುಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *