ನವದೆಹಲಿ, (ಡಿಸೆಂಬರ್ 14): ಬಿಜೆಪಿ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಮುನ್ನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ತೀವ್ರ ಕುತೂಹಲಕ್ಕೆ ಕಾರಣವಾದ ಉತ್ತರ ಪ್ರದೇಶ ರಾಜ್ಯಾಧ್ಯಕ್ಷರಾಗಿ ಕೇಂದ್ರ ಹಣಕಾಸು ರಾಜ್ಯ ಸಚಿವರಾಗಿ ಪಂಕಜ್ ಚೌಧರಿ ಅವರನ್ನು ನೇಮಿಸಲಾಯಿತು. ಇದರ ಜೊತೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಯುವ ನಾಯಕ ನಿತಿನ್ ನಬಿನ್ (ನಿತಿನ್ ನಬಿನ್) ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಇಂದು (ಡಿಸೆಂಬರ್ 14) ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಈ ಮೂಲಕ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಕಿರಿಯ ನಾಯಕನಿಗೆ ಮಣೆ ಹಾಕಿರುವುದು ಅಚ್ಚರಿ ಮೂಡಿಸಿದೆ.
ಅಭಿನಂದನೆ ತಿಳಿಸಿದ ಪ್ರಧಾನಿ ಮೋದಿ
ನಿತಿನ್ ನಬಿ ಆಯ್ಕೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಪಕ್ಷದ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ನಾಯಕ ನಿತಿನ್ ನಬಿನ್ ಅವರಿಗೆ ಅಭಿನಂದನೆಗಳು. ಯುವ ನಾಯಕ ತನ್ನ ಕಠಿಣ ಪರಿಶ್ರಮದ ಮೂಲಕ ಪಕ್ಷದಲ್ಲಿ ಅಪಾರ ಅನುಭವ ಪಡೆದಿದ್ದಾರೆ. ಬಿಹಾರದಲ್ಲಿ ಶಾಸಕರಾಗಿ, ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಜನರ ಆಶೋತ್ತರಗಳು, ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಪ್ರಾಮಾಣಿಕ ಪ್ರಯತ್ನಗಳು. ಪ್ರತಿಯೊಬ್ಬರ ಗೌರವದಿಂದ ಕಾಣುವ ನಿತಿನ್ ನಬಿ ಕಾರ್ಯಾಧ್ಯಕ್ಷತೆಯಲ್ಲಿ ಬಿಜೆಪಿ ಮತ್ತಷ್ಟು ಉತ್ತುಂಗಕ್ಕೆ ಏರಲಿದೆ. ನಿತಿನ್ ನಬಿನ್ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಪ್ರಧಾನಿ ಮೋದಿ ಸಮಾಜಿ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಶ್ರೀ ನಿತಿನ್ ನಬಿನ್ ಜೀ ಅವರು ಶ್ರಮಜೀವಿ ಕಾರ ್ಯಕರ್ತರಾಗಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಅವರು ಶ್ರೀಮಂತ ಸಂಘಟನಾ ಅನುಭವವನ್ನು ಹೊಂದಿರುವ ಯುವ ಮತ್ತು ಶ್ರಮಶೀಲ ನಾಯಕರಾಗಿದ್ದಾರೆ ಮತ್ತು ಬಿಹಾರದಲ್ಲಿ ಬಹು ಅವಧಿಗೆ ಶಾಸಕರಾಗಿ ಮತ್ತು ಸಚಿವರಾಗಿ ಪ್ರಭಾವಶಾಲಿ ದಾಖಲೆಯನ್ನು ಹೊಂದಿದ್ದಾರೆ. ಅವರು ಶ್ರದ್ಧೆಯಿಂದ ಜನರ ಈಡೇರಿಕೆಗಾಗಿ ಕೆಲಸ ಮಾಡಿದ್ದಾರೆ…
– ನರೇಂದ್ರ ಮೋದಿ (@narendramodi) ಡಿಸೆಂಬರ್ 14, 2025
ನಿತಿನ್ ನಬಿನ್ ಯಾರು?
ನಿತಿನ್ ನಬಿನ್ ಕುಟುಂಬ ರಾಜಕೀಯ ಹಿನ್ನಲೆಯಲ್ಲಿದೆ. ನಿತಿನ್ ನಬಿನ್ ತಂದೆ ನಬಿನ್ ಕಿಶೋರ್ ಪ್ರಸಾದ್ ಸಿನ್ಹ ಬಿಜೆಪಿಯ ಹಿರಿಯ ನಾಯಕ. ಶಾಸಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ತಂದೆ ನಿಧನದ ಬಳಿಕ ಬಿಜೆಪಿಯಲ್ಲಿ ನಿತಿನ್ ನಬಿನ್ ಸಕ್ರಿಯರಾಗಿದ್ದರು, ಹಂತ ಹಂತವಾಗಿ ಬಿಜೆಪಿಯಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ. ಕಾರ್ಯಕರ್ತನಾಗಿ, ಮುಖಂಡನಾಗಿ, ಶಾಸಕನಾಗಿ ಬಳಿಕ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ನಿತೀಶ್ ಕುಮಾರ್ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
- 1980ರ ಮೇ 23ರಂದು ಜಾರ್ಖಂಡ್ನ ರಾಂಚಿಯಲ್ಲಿ ಜನಿಸಿದ ನಿತಿನ್ ನಬಿನ್ ರಾಜಕೀಯ ಹಿನ್ನೆಲೆ ಹೊಂದಿರುವ ಕುಟುಂಬದಿಂದ ಬಂದವರು.
- ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಶಾಸಕ ದಿವಂಗತ ನಬಿನ್ ಕಿಶೋರ್ ಪ್ರಸಾದ್ ಸಿನ್ಹಾ ಅವರ ಮಗ. ನಬಿನ್ ತಮ್ಮ ತಂದೆಯ ನಿಧನದ ನಂತರ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದರು
- 2006ರಲ್ಲಿ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ರಾಜಕೀಯ ಪ್ರವೇಶಿಸಿದ್ದಾರೆ, ನಂತರ ಅವರು 2010, 2015, 2020 ಮತ್ತು 2025 ರಲ್ಲಿ ಬಂಕಿಪುರ ಕ್ಷೇತ್ರದಿಂದ ಸತತ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಗೆದ್ದಿದ್ದಾರೆ.
- 2008ರಲ್ಲಿ ಬಿಜೆಪಿಯಲ್ಲಿ ಅವರು ಭಾರತೀಯ ಜನತಾ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮತ್ತು ಯುವ ವಿಭಾಗ ಸಹ-ಪ್ರಭಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
- 2010-2013 ರಲ್ಲಿ ಅವರು ಯುವ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದರು.
- 2016-19ರ ವರೆಗೆ ಬಿಹಾರ ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷ.
- 2019ರಲ್ಲಿ ಸಿಕ್ಕಿಂನಲ್ಲಿ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿದ್ದರು. ಜೂನ್ 2019 ರಲ್ಲಿ, ಅವರನ್ನು ಸಿಕ್ಕಿಂ ರಾಜ್ಯ ಬಿಜೆಪಿ ಸಂಘಟನಾ ಉಸ್ತುವಾರಿಯನ್ನಾಗಿ ಮಾಡಲಾಗಿದೆ.
ರಂದು ಪ್ರಕಟಿಸಲಾಗಿದೆ – 9:51 pm, ಭಾನುವಾರ, 14 ಡಿಸೆಂಬರ್ 25