ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಭೇಟಿಗೆ ಅವಕಾಶ ನೀಡಿ ಹೈ ಕೋರ್ಟ್ ಆದೇಶ
ಧಾರವಾಡ, ಡಿಸೆಂಬರ್ 15: ರಾಜ್ಯದಲ್ಲಿ ಖಾಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಧಾರವಾಡದಲ್ಲಿ ಬೃಹದ್ ಪ್ರತಿಭಟನೆ ನಡೆದಿತ್ತು. ಸಾವಿರಾರು ಯುವಕನೋಳಗೊಂಡ ಧರಣಿಗೆ ಅವಕಾಶ ನೀಡಿದ ಪೊಲೀಸರ ಕ್ರಮವನ್ನು ಪ್ರಶ್ನಿಸಿದ್ದ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘ, ಧಾರವಾಡ (ಧಾರವಾಡ) ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ಸಂಘದ ಅರ್ಜಿ ಇತ್ಯರ್ಥಗೊಂಡಿದ್ದು, ಅರ್ಜಿದಾರರ ಮನವಿ ಪರಿಗಣಿಸಲು ಹೈಕೋರ್ಟ್ ಪೀಠ ಸೂಚಿಸಿದೆ.
ಮನವಿ ಸಲ್ಲಿಸಲು ಸಿಎಂ ಅಸ್ತು
ಸಿಎಂ ಭೇಟಿಗೆ ಅನುಮತಿ ಕೊಡಿಸುವಂತೆ ಸೂಚನೆ ಮೊರೆ ಹೋಗಿದ್ದ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಕ್ಕೆ (AKSA) ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ. ಸಿಎಂ ಭೇಟಿಗೆ ಅವಕಾಶ ಕೊಡುವಂತೆ ನ್ಯಾ.ನಾಗಪ್ರಸನ್ನ ಅವರ ಪೀಠ ನಿರ್ದೇಶನ ನೀಡಿದ್ದು, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಅರ್ಜಿದಾರರಿಗೆ ಸೂಚನೆ ನೀಡಿದ್ದಾರೆ.
ಖಾಲಿ ಹುದ್ದೆ ಭರ್ತಿಗಾಗಿ ಆಕಾಂಕ್ಷಿಗಳ ಹೋರಾಟ
ರಾಜ್ಯದಲ್ಲಿ ಸರ್ಕಾರಿ ನೌಕರಿಯ ಕನಸಿಟ್ಟುಕೊಂಡು, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳುತ್ತಿರುವವರು ಸಾಕಷ್ಟು ಮಂದಿಯಿದ್ದಾರೆ. ಅದರಲ್ಲಿಯೂ ಧಾರವಾಡದಲ್ಲಿ ಅಂದಾಜು 80 ಸಾವಿರ ಉದ್ಯೋಗಾಕಾಂಕ್ಷಿಗಳಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ ಸೇರಿದಂತೆ ಹಲವಾರು ಖಾಸಗಿ ವಿವಿಗಳು ಮತ್ತು ಕೋಚಿಂಗ್ ಕೇಂದ್ರಗಳಿಂದ ಕೂಡಿದ ನಗರವನ್ನರಸಿ ರಾಜ್ಯದ ಹಲವು ಭಾಗಗಳಿಂದ ವಿದ್ಯಾರ್ಥಿಗಳು ಆಗಮಿಸುತ್ತಾರೆ. ಪಾಲಕರಿಂದ ದೂರವಿದ್ದು, ಪಾರ್ಟ್ ಟೈಮ್ ಕೆಲಸ ಮಾಡಿ ತಿಂಗಳ ಖರ್ಚು ನಿಭಾಯಿಸುತ್ತಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುತ್ತಾರೆ. ಹೀಗಿರುವಾಗ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ ನಡೆಯದೆ ಉದ್ಯೋಗಾಂಕ್ಷಿಗಳು ಆಕ್ರೋಶದಿಂದ ಪ್ರತಿಭಟನೆಗಿಳಿದಿದ್ದರು.
ಇದನ್ನೂ ಓದಿ ಉದ್ಯೋಗಕಾಂಕ್ಷಿಗಳ ಪ್ರತಿಭಟನೆಯ ಹೆಡ್ ಕ್ವಾರ್ಟಸ್ ಆಗಿದ್ದೇಕೆ ವಿದ್ಯಾಕಾಶಿ ಧಾರವಾಡ?
ಧರಣಿಗಿಳಿದಿದ್ದ 30 ಸಾವಿರ ಯುವಕರು
ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು, ರಾಜ್ಯ ಆರ್ಥಿಕತೆಯಲ್ಲಿ 9,536 ಹುದ್ದೆಗಳು ಸೇರಿದಂತೆ ಎಲ್ಲ ಇಲಾಖೆಗಳ ಹುದ್ದೆಗಳು ಖಾಲಿ ಇವೆ. ಹಲವಾರು ಆಕಾಂಕ್ಷಿಗಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ಬೆಳಕಿಗೆ ಬಂದಿವೆ. ಹೀಗಿರುವಾಗ ಹುದ್ದೆಗಳನ್ನು ಭರ್ತಿ ಮಾಡುವಂತೆ ಕಾಣಿಕೆ ಡಿ. 1ರಂದೂ ಸಹ ಮತ್ತೊಂದು ಹೋರಾಟಕ್ಕೆ ಕರೆ ನೀಡಲಾಯಿತು. ಸುಮಾರು 30 ಸಾವಿರ ಉದ್ಯೋಗಾಕಾಂಕ್ಷಿಗಳು ಧರಣಿಗಿಳಿದಿದ್ದರು. ಆದರೆ ಈ ಹಿಂದಿನ ಇಂತಹದ್ದೇ ಪ್ರತಿಭಟನೆಯಲ್ಲಿ ಅಹಿತಕರ ಘಟನೆಗಳಾಗಿದ್ದ ಪೊಲೀಸರು, ಹೋರಾಟಕ್ಕೆ ನೀಡಿರಲಿಲ್ಲ. ಪೊಲೀಸರು ಈ ಕ್ರಮವನ್ನು ಪ್ರಶ್ನಿಸಿ ಮೆಟ್ಟಿಲೇರಿದ್ದ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘದ ಮನವಿಯನ್ನು ಧಾರವಾಡ ಹೈಕೋರ್ಟ್ ಪೀಠ ಪರಿಗಣಿಸಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.