ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ ಪರಿಶೀಲನೆ.
ಆನೇಕಲ್, ಡಿಸೆಂಬರ್ 15: ಬಂದಿಖಾನೆ ಡಿಜಿಪಿಯಾಗಿ ನೇಮಕಗೊಂಡ ಬಳಿಕ ಮೊದಲ ಬಾರಿ ಪರಪ್ಪನ ಅಗ್ರಹಾರ ಜೈಲಿಗೆ ಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದರು. ಜೈಲಿನ ಚೆಕ್ ಪೋಸ್ಟ್ ಬಳಿ ಸಿಬ್ಬಂದಿಯಿಂದ ಮಾಹಿತಿ ಪಡೆದ ಡಿಜಿಪಿ, ಅಧಿಕಾರಿಗಳು ಸೆಂಟ್ರಲ್ ಜೈಲಿನ ಸುತ್ತಮುತ್ತಲಿನ ಪರಿಶೀಲನೆ. ಬ್ಯಾರಕ್‌ಗೂ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.
ಪೊಲೀಸ್ ಸಿಬ್ಬಂದಿಗೆ ತರಾಟೆಗೆ
ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಪೊಲೀಸ್ ಸಿಬ್ಬಂದಿ ಇದ್ದರೆ ಡಿಜಿಪಿ ಅಲೋಕ್ ಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟು ಜಾಗವಿದ್ರೂ ಯಾಕೆ ಸಮರ್ಪಕವಾಗಿ ಅದನ್ನು ಬಳಕೆ ಮಾಡಿಕೊಳ್ಳುತ್ತಿಲ್ಲ? ಜಾಗ ಖಾಲಿ ಮಾಡಿ ವಾಹನಗಳ ಪಾರ್ಕಿಂಗ್‌ಗೆ ಸರಿಯಾಗಿ ಕ್ರಮ ಕೈಗೊಳ್ಳಿ ಎಂದು ಸೂಚಿಸಲಾಗಿದೆ.
ಇದನ್ನೂ ಓದಿ: ಕಾರಾಗೃಹ ಇಲಾಖೆ ಡಿಜಿಪಿಯಾಗಿ ಅಲೋಕ್ ಕುಮಾರ್ ಅವರ ಅಧಿಕಾರ ಸ್ವೀಕಾರ
‘ಎಲ್ಲ ಬಂದ್ ಆಗಬೇಕು’
ಜೈಲಿನ ಪ್ರತಿ ಬ್ಯಾರಕ್ ಭೇಟಿ ಮಾಡಿರುವ ಅಲೋಕ್ ಕುಮಾರ್, ಕೈದಿಗಳ ಬಳಿ ಮಾಹಿತಿ ಕಲೆ ಹಾಕಿದ್ದಾರೆ. ಊಟ, ತಿಂಡಿ, ಶೌಚಾಲಯ ವ್ಯವಸ್ಥೆ ಬಗ್ಗೆ ಕೈದಿಗಳಿಗೆ ಡಿಜಿಪಿ ಪ್ರಶ್ನೆ ಕೇಳಿದ್ದು, ಮೊಬೈಲ್ ಬಳಕೆ ಮಾಡ್ತಿದ್ರೆ ಸಿಬ್ಬಂದಿ ವಶಕ್ಕೆ ನೀಡುವಂತೆ ತಾಕೀತು ಮಾಡಿದ್ದಾರೆ. ಕಳ್ಳಾಟ ಆಡಿದ್ರೆ ಕಠಿಣ ಕ್ರಮ ಎದುರಿಸಲು ಸಜ್ಜಾಗಿ ಎಚ್ಚರಿಕೆ ಕೂಡ ನೀಡಿದೆ. ಗಾಂಜಾ, ಬಿಡಿ ಸಿಗರೇಟ್ ಇನ್ಮೇಲೆ ಸಿಗಲ್ಲ. ಎಲ್ಲಾ ಬಂದ್ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಿಂಚಿನ ಸಂಚಾರ ನಡೆಸುತ್ತಿರುವ ಡಿಜಿಪಿ ಅಡುಗೆ ಮನೆ, ಆಸ್ಪತ್ರೆಗೆ ಭೇಟಿ ನೀಡಲಾಗಿದೆ. ವೈದ್ಯರು ಚಿಕಿತ್ಸೆ ಮಾತ್ರ ಕೊಡಬೇಕು. ಅದನ್ನು ಬಿಟ್ಟು ಮೊಬೈಲ್, ಗಾಂಜಾ ಸಾಗಾಣೆ ಮಾಡಿದ್ರೆ ಕ್ರಮ ಕೈಗೊಳ್ಳುತ್ತೇನೆ ಎಂದು ನೇರವಾಗಿ ಹೇಳಿದ್ದಾರೆ. ಅಡುಗೆ ಮನೆಯ ಸಿಬ್ಬಂದಿಗಳು ಗಮನಹರಿಸಿರುವ ಅವರು, ಎಡಿಷನಲ್ ಆ್ಯಕ್ಟಿವಿಟಿಗಳು ಬಂದ್ ಆಗಬೇಕು. ಜೈಲಿನ ಬೇಕರಿಗೂ ಡಿಜಿಪಿ ಭೇಟಿ ನೀಡಿದ್ದು, ಯೀಸ್ಟ್ನಿಂದ ವೈನ್ ತಯಾರಿಸಿದ್ರೆ ವೈಲೆಂಟ್ ಆಗಬೇಕಾಗುತ್ತೆ ಎಂದು ಗರಂ ಆದ ಪ್ರಸಂಗ ಕೂಡ ನಡೆದಿದೆ. ಸುಮಾರು 50ಕ್ಕೂ ಅಧಿಕ ಅಧಿಕಾರಿಗಳ ಜೊತೆ ಅವರು ಜೈಲ್ ರೌಂಡ್ಸ್ ನಡೆಸಿದ್ದು, ಐಜಿಪಿ ದಿವ್ಯಾ, ಡಿಸಿಪಿ ನಾರಾಯಣ, ಮುಖ್ಯ ಅಧೀಕ್ಷಕ ಅಂಶುಕುಮಾರ್, ಕಮಾಂಡರ್ ವೀರೇಶ್ ಕುಮಾರ್, ಸಹಾಯಕ ಕಮಾಂಡರ್ ಮಾದೇಶ ಸೇರಿದಂತೆ ಇತರ ಅಧಿಕಾರಿಗಳು ಈ ವೇಳೆ ಇದ್ದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.