ನಟರಾದ ರಾಜ್ ಬಿ. ಶೆಟ್ಟಿ, ಉಪೇಂದ್ರ, ಶಿವರಾಜ್ ಕುಮಾರ್ (ಶಿವ ರಾಜ್‌ಕುಮಾರ್) ಅವರು ಒಟ್ಟಿಗೆ ನಟಿಸಿದ ’45’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಟ್ರೇಲರ್ (45 ಚಲನಚಿತ್ರ ಟ್ರೇಲರ್) ರಿಲೀಸ್ ಮಾಡಲಾಗಿದೆ. ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಸೇರಿದಂತೆ ಇಡೀ ಚಿತ್ರತಂಡ ಭಾಗಿ ಆಗಿದೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮವನ್ನು ಹಲವು ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ನೇರಪ್ರಸಾರ ಮಾಡಲಾಯಿತು. ಸಿನಿಮಾದ ಬಗ್ಗೆ ಉಪೇಂದ್ರ, ಶಿವರಾಜ್ ಕುಮಾರ್, ರಾಜ್ ಬಿ. ಶೆಟ್ಟಿ ಅವರು ಸಿನಿಮಾದ ಬಗ್ಗೆ ವೇದಿಕೆಯಲ್ಲಿ ಮಾತನಾಡಿದ್ದಾರೆ. ಕ್ರಿಸ್ಮಸ್ ಪ್ರಯುಕ್ತ ಡಿಸೆಂಬರ್ 25 ರಂದು ’45’ ಸಿನಿಮಾ (45 ಚಲನಚಿತ್ರ) ರಿಲೀಸ್ ಆಗಲಿದೆ. ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ಸಿನಿಮಾ ಎಂಬ ಕಾರಣಕ್ಕೆ ’45’ ಚಿತ್ರದ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.