ಲೋಕಾಯುಕ್ತ ಸಿಬ್ಬಂದಿ​​ ಕಂಡು ಕಕ್ಕಾಬಿಕ್ಕಿ: ಧಾರವಾಡದಲ್ಲಿ ಕಮೋಡ್‌ಗೆ ಹಣ ಸುರಿದ ಅಧಿಕಾರಿ

ಲೋಕಾಯುಕ್ತ ಸಿಬ್ಬಂದಿ​​ ಕಂಡು ಕಕ್ಕಾಬಿಕ್ಕಿ: ಧಾರವಾಡದಲ್ಲಿ ಕಮೋಡ್‌ಗೆ ಹಣ ಸುರಿದ ಅಧಿಕಾರಿ


ಬೆಂಗಳೂರು, ಡಿಸೆಂಬರ್ 16: ರಾಜ್ಯದ ವಿವಿಧೆಡೆ ಅಧಿಕಾರಿಗಳಿಗೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಶಾಕ್ ಕೊಟ್ಟಿದೆ. ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಸೇರಿ ವಿವಿಧೆಡೆ ಶೋಧ ನಡೆಸಿರುವ ಲೋಕಾಯುಕ್ತ ಸಿಬ್ಬಂದಿ ಕೆಲವೆಡೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಧಾರವಾಡ, ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು ಸೇರಿ ವಿವಿಧೆಡೆ ದಾಳಿ ನಡೆದಿದೆ.

ಅರ್ಧಗಂಟೆ ಬಳಿಕ ಮನೆ ಬಾಗಿಲು ತೆಗೆದ ಅಧಿಕಾರಿ

ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ರಾಜಶೇಖರ್ ಅವರ ಧಾರವಾಡದ ಸಿಲ್ವರ್ ಬಡಾವಣೆಯ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ರಾಜಶೇಖರ್ ಅವರು ಆರ್.ಎಸ್.ಗೆ ಸೇರಿದ ಒಟ್ಟು ಮೂರು ಕಡೆ ರೆಡ್ ನಡೆದಿದೆ. ರಾಣಿ ಚೆನ್ನಮ್ಮ ನಗರದಲ್ಲಿರುವ ರಾಜಶೇಖರ್ ಗೆ ಸೇರಿದ ಖಾಸಗಿ ಕಚೇರಿ, ಯರಿಕೊಪ್ಪ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೂ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಸಿಬ್ಬಂದಿ ಕಂಡು ಬೆದರಿದ ರಾಜಶೇಖರ್ ಸುಮಾರು 50 ಸಾವಿರ ರೂ. ಹಣವನ್ನು ಕಮೋಡ್‌ಗೆ ಸುರಿದು ಫ್ಲಶ್ ಮಾಡಲಾಗಿದೆ. ಸುಮಾರು ಅರ್ಧಗಂಟೆ ಕಾಲ ಲೋಕಾಯುಕ್ತ ಪೊಲೀಸರನ್ನು ಮನೆ ಹೊರಗೆ ಕಾಯಿಸಿ ಬಳಿಕ ಬಾಗಿಲು ತೆಗೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರು, ಮೈಸೂರು ಸೇರಿ ರಾಜ್ಯದ 10 ಕಡೆ ಲೋಕಾಯುಕ್ತ ರೆಡ್; ದಾಳಿ ವೇಳೆ ಸಿಕ್ಕಿದ್ದೇನು?

ಆದಾಯದ ಹೆಚ್ಚಿನ ಆಸ್ತಿ ದಾಖಲೆ ಪತ್ತೆ

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ರೂಪಾ ನಾಯ್ಕ ಅವರ ಮನೆ, ಕಚೇರಿ ಸೇರಿ ವಿವಿಧೆಡೆ ಲೋಕಾಯುಕ್ತ ರೆಡ್ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬೆಂಗಳೂರಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ ಬಸವನಗುಡಿ ಮತ್ತು ಕೆಂಗೇರಿಯ ಮನೆ, ಶಿವಮೊಗ್ಗ ಕಚೇರಿ, ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣದ ನಿವಾಸದಲ್ಲಿ ಪರಿಶೀಲನೆ ನಡೆದಿದೆ. ದಾಳಿಯ ವೇಳೆ ಆದಾಯ ಹೆಚ್ಚಿನ ಆಸ್ತಿ ಹೊಂದಿರುವ ದಾಖಲೆಗಳು ಇವೆ.

ಮಂಡ್ಯ ಪಿಆರ್ ಇಡಿ ಸೂಪರ್ಡೆಂಟ್ ಬೈರೇಶ್ ಗೂ ಲೋಕಾಯುಕ್ತ ಶಾಕ್ ಕೊಟ್ಟಿದ್ದು, ಏಕಕಾಲದಲ್ಲಿ ಮಂಡ್ಯದ ನಿವಾಸ, ಮದ್ದೂರಿನ ಅತ್ತೆ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಬೈರೇಶ್ ಮೇಲೆ ಸಾರ್ವಜನಿಕರಿಂದ ಹಲವು ದೂರುಗಳು ಬಂದಿದ್ದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಆಸ್ಪತ್ರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *