ಗದಗ ಆಯ್ತು, ಮಂಗಳೂರು ಆಯ್ತು ಈಗ ಭಟ್ಕಳದ ತಹಶೀಲ್ದಾರ್ ಕಚೇರಿಗೂ ಬಾಂಬ್ ಬೆದರಿಕೆ!
ಉತ್ತರ ಕನ್ನಡ, ಡಿಸೆಂಬರ್ 19: ಇತ್ತೀಚೆಗೆ ಸರ್ಕಾರಿ ಕಚೇರಿ ಸೇರಿ ಹಲವು ಕಡೆ ಬಾಂಬ್ ಬೆದರಿಕೆಗಳು (ಬಾಂಬ್ ಬೆದರಿಕೆಗಳು) ಕೇಳಿಬರುತ್ತಿವೆ. ಬೆದರಿಕೆ ಹುಸಿಯಾಗಿರಲಿ ಇಲ್ಲವೇ ಸತ್ಯವಾಗಿರಲಿ ಜನರಲ್ಲಿ ಇದರಿಂದ ಕಳವಳ ಉಂಟಾಗುವುದಂತೂ ಸತ್ಯ. ಹೀಗಿರುವಾಗ ಉತ್ತರ ಕನ್ನಡದ ಭಟ್ಕಳ ತಹಶೀಲ್ದಾರ್ ಕಚೇರಿ ಹಾಗೂ ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಸ್ಫೋಟದ ಬೆದರಿಕೆ ಬಂದಿರುವುದು ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ. ನಿನ್ನೆಯಷ್ಟೇ (ಡಿ.15) ಗದಗ, ಮಂಗಳೂರು ಸರ್ಕಾರಿ ಕಚೇರಿಗಳಲ್ಲಿಯೂ ಬಾಂಬ್ ಸ್ಫೋಟಿಸುವ ಬೆದರಿಕೆಗಳು ಬಂದಿವೆ. ಇದೀಗ ಮತ್ತೊಮ್ಮೆ ಇಂತಹದ್ದೇ ಇ-ಮೇಲ್ ಬಂದಿರುವುದು ಕಳವಳಕಾರಿಯಾಗಿದೆ.
ಎಲ್ಲರನ್ನೂ ತಕ್ಷಣ ಕಚೇರಿಯಿಂದ ಎಂದು ಇ-ಮೇಲ್
ಭಟ್ಕಳ ತಹಶೀಲ್ದಾರ್ ಕಚೇರಿಗೆ ಬೆಳಿಗ್ಗೆ 7.25 ರ ಸುಮಾರಿಗೆ “ಗೈನಾ ರಮೇಶ್@ಔಟ್ಲುಕ್ ಡಾಟ್ ಕಾಂ” ಎಂಬ ಇ-ಮೇಲ್ ಐಡಿಯಿಂದ ಬೆದರಿಕೆಯ ಸಂದೇಶ ರವಾನೆ, ಕಚೇರಿಯಲ್ಲಿ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಬೆದರಿಕೆ ಹಾಕಲಾಗಿದೆ. “ಎಲ್ಲರನ್ನೂ ತಕ್ಷಣ ತಹಶೀಲ್ದಾರ್ ಕಚೇರಿಯಿಂದ” ಎಂಬ ಹೆಡ್ಡಿಂಗ್‌ನೊಂದಿಗೆ ಕನ್ನಡಕ್ಕೆ ಸಂದೇಶ ಕಳುಹಿಸಲಾಗಿದೆ.
ಇ-ಮೇಲ್ ಬಾಡಿಯಲ್ಲಿ , ಪ್ರಶಾಂತ್ ಕಿಶೋರ್ ಹಾಗೂ ಸುನೀಲ್ ಕನುಗೋಲು ಮುಂತಾದವರ ಸೂಚನೆಯಂತೆ ತಮಿಳುನಾಡಿನ ಡಿಎಂಕೆ ಸರಕಾರ 2001ರಲ್ಲಿ ಮಾಧ್ಯಮವನ್ನು ಬುಡಮೇಲು ಮಾಡಲು ಯತ್ನಿಸಿತ್ತು. ಇದು ಹತೋಟಿ ತಪ್ಪಿದಾಗ ರಾಧಾಕೃಷ್ಣನ್ ಐಪಿಎಸ್ ಹಾಗೂ ಜಾಫರ್ ಸೆಟ್ ಮೂಲಕ ಗೆಲಿಲಿಯೋ ಆಯಪ್ ಮೂಲಕ ಕನ್ನಡದವರ ಮೇಲೆ ಗೂಡಾಚಾರಿಕೆ ಮಾಡಿದರು. ಡಿಎಂಕೆ ಉದಯನಿಧಿಯ ಉದ್ದೇಶದಿಂದ ಹಣಗಳಿಸಲು ಹೆಚ್ಚಿನದೇ ಇದೆ ಎಂದು ತಲೆಬುಡವಿಲ್ಲದ ಆರೋಪಗಳನ್ನು ಮಾಡಲಾಗಿದೆ.
ಕಚೇರಿ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್
ಇ-ಮೇಲ್‌ನಲ್ಲಿ ಅನಾಥಾಶ್ರಮಗಳ ಬಾಲಕಿಯರ ದುರುಪಯೋಗ ಸೇರಿದಂತೆ ಹಲವು ಅಸಂಬದ್ಧ ವಿಷಯಗಳು ಸೇರಿವೆ, ಈ ಬೆದರಿಕೆಯನ್ನು ಸಮಾಜದೊಳಗೆ ಗೊಂದಲ ಸೃಷ್ಟಿಸುವ ಪ್ರಯತ್ನವು ಬೆಳಕಿಗೆ ಬಂದಿದೆ. ಬಾಂಬ್ ಬೆದರಿಕೆ ಹಿನ್ನೆಲೆ ಭಟ್ಕಳ ತಹಶೀಲ್ದಾರ್ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಲಾಗಿದೆ, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದಿಂದ ಸಂಪೂರ್ಣ ತಪಾಸಣೆ ನಡೆಸಲಾಗಿದೆ.
ಇದನ್ನೂ ಓದಿ 13 ವರ್ಷದ ಬಾಲಕಿಯಿಂದ ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ: ಕಾರಣ ಕೇಳಿ ಶಾಕ್ ಆದ ಅಧಿಕಾರಿಗಳು!
ತುಮಕೂರಿನ ಡಿಸಿ ಕಚೇರಿಗೂ ಬೆದರಿಕೆ ಇ-ಮೇಲ್
ಇದೇ ವೇಳೆ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರ ಅಧಿಕೃತ ಇ-ಮೇಲ್ ಐಡಿಗೂ ಬೆಳಿಗ್ಗೆ 7 ಗಂಟೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ತಕ್ಷಣ ಪೊಲೀಸ್ ಡಿಸಿ ಕಚೇರಿಗೆ ಧಾವಿಸಿ ಒಳಭಾಗದಲ್ಲಿ ತೀವ್ರ ತಪಾಸಣೆ. ಸದ್ಯ ಯಾವುದೇ ಅನುಮಾನಾಸ್ಪದ ವಸ್ತುವಿಲ್ಲ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.
ಒಂದೇ ವಾರದಲ್ಲಿ ಹಲವೆಡೆ ಬಾಂಬ್ ಥ್ರೆಟ್ಸ್
ಡಿ.12ರಂದು ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಂದ ಬಾಂಬ್ ಬೆದರಿಕೆ ಇಮೇಲ್ ಕೆಲಕಾಲ ಆತಂಕ ಸೃಷ್ಟಿಸಿತ್ತು. ಆರೋಪಿ ಹಾಗೂ ತಕ್ಷಣ ಕಾರ್ಯಪ್ರವೃತ್ತರಾಗಿ ಶೋಧ ನಡೆಸಿದ್ದು, ತಮಿಳುನಾಡಿನ 13 ವರ್ಷದ ಬಾಲಕಿಯಿಂದ ಬಂದ ಹುಸಿ ಬೆದರಿಕೆ ಎಂದು ತಿಳಿದು ಬಂದಿದೆ. ನಿನ್ನೆಯಷ್ಟೆ ಗದಗ ಆಪರೇಷನ್ ಭವನ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಹಾಕಿದೆ, ಪಾಕ್ನ ಐಎಸ್ ಐ ಮತ್ತು ಎಲ್ ಟಿಟಿಐ ಕಾರ್ಯಕರ್ತರ ಜೊತೆ ಸೇರಿ 5 ಬಾಂಬ್ ಗಳಿಂದ ಕಟ್ಟಡ ಭವನ ಸ್ಫೋಟಿಸಲು ಕಿಡಿಗೇಡಿಗಳು ಧಮ್ಕಿ ಹಾಕಿದ್ದರು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.