ಚಿಕ್ಕಮಗಳೂರು, ಡಿಸೆಂಬರ್ 16: ಮನೆ ಭೋಗ್ಯ ಸಂಬಂಧ ಇಬ್ಬರ ನಡುವೆ ನಡೆದ ಗಲಾಟೆಗೆ ಸಾಕ್ಷಿಯಾಗಿದ್ದ ಮಹಿಳೆ ಮತ್ತು ಆಕೆಯ ಪುತ್ರಿ ಮೇಲೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ಸಮೀಪದ ಬೀಜವಳ್ಳಿಯಲ್ಲಿ ನಡೆದಿದೆ. ಆರೋಪಿ ಅರುಣ್ ಎಂಬಾತ ಹಲ್ಲೆ ನಡೆಸಿರುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಬೀನ ಎಂಬುವವರು ಅರುಣ್ ತಾಯಿಯಿಂದ ಮನೆ ಭಾಗ್ಯಕ್ಕೆ ಪಡೆದಿದ್ದರು. ಈ ಸಂಬಂಧ ಹಣದ ವಿಚಾರವಾಗಿ ಸಬೀನ ಮತ್ತು ಅರುಣ್ ನಡುವೆ ನಿತ್ಯವೂ ಗಲಾಟೆ ನಡೆಯುತ್ತಿತ್ತು. ಈ ಸಂಬಂಧ ಸಾಕ್ಷಿಯಾಗಿ ಬೇಬಿ ಮತ್ತು ಆಕೆಯ ಪುತ್ರಿ ಸಹಿ ಮಾಡಿದ್ದರು. ಸಬೀನ ಅವರ ಮನೆ ಪಕ್ಕವೂ ಇವರೂ ವಾಸವಿದ್ದು, ಮನೆಯ ಮುಂದೆ ನಿಂತಿದ್ದ ಯುವತಿಯನ್ನ ಎಳೆದು ಚರಂಡಿಗೆ ಹಾಕಿರುವ ಅರುಣ್, ಅಟ್ಟಾಡಿಸಿ ಹೊಡೆದಿದ್ದಾನೆ. ಸಬೀನಾ ಅವರ ಮೇಲೂ ಹಲ್ಲೆ ನಡೆದಿದ್ದು, ಒಟ್ಟು ಮೂವರು ಯುವಕರು ದಾಳಿ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಮಹಿಳೆಯರನ್ನು
ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.