ನಾಳೆಯ ಹವಾಮಾನ: ಉತ್ತರ ಒಳನಾಡನ್ನು ಬೆಂಬಿಡದ ಚಳಿ; ಕಲ್ಯಾಣ ಕರ್ನಾಟಕದ 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​​

ನಾಳೆಯ ಹವಾಮಾನ: ಉತ್ತರ ಒಳನಾಡನ್ನು ಬೆಂಬಿಡದ ಚಳಿ; ಕಲ್ಯಾಣ ಕರ್ನಾಟಕದ 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​​


ಬೆಂಗಳೂರು, ಡಿಸೆಂಬರ್ 16: ಕಳೆದೊಂದು ವಾರದಿಂದ ಬೆಂಗಳೂರು ಸೇರಿ ರಾಜ್ಯಾದ್ಯಂತ ವಿಪರೀತ ಚಳಿ ಜನರ ನಿದ್ದೆಗೆಡಿಸಿದೆ. ಈ ನಡುವೆ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಶೀತಗಾಳಿ ಎಚ್ಚರಿಕೆಯನ್ನು ಹವಮಾನ ಇಲಾಖೆ ನೀಡಿದೆ. ಇನ್ನು ಕನಿಷ್ಠ ತಾಪಮಾನಕ್ಕೆ ಫೆಸಿಪಿಕ್ ಮಹಾಸಾಗರದಲ್ಲಿನ ಲ್ಯಾನಿನೋ ಪರಿಣಾಮ. ಲ್ಯಾನಿನೋ ಎಂದರೆ ಪೆಸಿಫಿಕ್ ಮಹಾಸಾಗರದ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗುವ ಹವಾಮಾನವಾಗಿದೆ.

ಕರ್ನಾಟಕದ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ನಾಳೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ, ಚಳಿಯ ಪ್ರಮಾಣ ಅಧಿಕವಾಗಿರಲಿದೆ. ಈ ಭಾಗದ ಉಳಿದ ಜಿಲ್ಲೆಗಳ ಜೊತೆ ಉತ್ತರ ಮತ್ತು ಮಧ್ಯ ಕರ್ನಾಟಕದ ಪ್ರದೇಶದ ಜನರಿಗೆ ಚಳಿಯ ಅನುಭವ ಆಗಲಿದೆ. ಉತ್ತರ ಒಳನಾಡ ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಯಾದಗಿರಿ, ರಾಯಚೂರು, ಗದಗ, ಧಾರವಾಡ, ಹಾವೇರಿ ಮತ್ತು ಕೊಪ್ಪಳದಲ್ಲಿ ಒಣ ಹವೆ ಅಥವಾ ಸಾಧಾರಣ ಚಳಿಗಳಿವೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ ಮತ್ತು ಕೊಡಗು ಜಿಲ್ಲೆಗಳ ಜನರಿಗೆ ಚಳಿಯ ಅನುಭವ ಆಗಲಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 8 ವರ್ಷಗಳಲ್ಲಿ ಮೊದಲ ಬಾರಿಗೆ ಕನಿಷ್ಠ ತಾಪಮಾನ

ನಿನ್ನೆ ಬೀದರ್ ನಲ್ಲಿ ಕನಿಷ್ಠ ತಾಪಮಾನ

ಬಾಗಲಕೋಟೆ 13.8 ಡಿಗ್ರಿ ಸೆಲ್ಸಿಯಸ್, ಬಳ್ಳಾರಿ 13.7 ಡಿಗ್ರಿ ಸೆಲ್ಸಿಯಸ್, ಬೆಳಗಾವಿ 13 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ಗ್ರಾಮಾಂತರ 14 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ನಗರ 15.8 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ದಕ್ಷಿಣ 14.7 ಡಿಗ್ರಿ ಸೆಲ್ಸಿಯಸ್, ಬೀದರ್ 11 ಡಿಗ್ರಿ ಸೆಲ್ಸಿಯಸ್, ಬೀದರ್ 11 ಡಿಗ್ರಿ ಸೆಲ್ಸಿಯಸ್, ಚಾಮ. 14.3 ಡಿಗ್ರಿ ಸೆಲ್ಸಿಯಸ್, ಚಿಕ್ಕಮಗಳೂರು 13.4 ಡಿಗ್ರಿ ಸೆಲ್ಸಿಯಸ್, ಚಿತ್ರದುರ್ಗ 14.6 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಕನ್ನಡ 18.4 ಡಿಗ್ರಿ ಸೆಲ್ಸಿಯಸ್, ದಾವಣಗೆರೆ 14.2 ಡಿಗ್ರಿ ಸೆಲ್ಸಿಯಸ್, ಧಾರವಾಡ 13.2 ಡಿಗ್ರಿ ಡಿಗ್ರಿ ಸೆಲ್ಸಿಯಸ್, ಹಾಸನ, ಗದಗ 13.9 ಡಿಗ್ರಿ ಸೆಲ್ಸಿಯಸ್.1. ಡಿಗ್ರಿ ಸೆಲ್ಸಿಯಸ್, ಕಲಬುರಗಿ 12.3 ಡಿಗ್ರಿ ಸೆಲ್ಸಿಯಸ್, ಕೊಡಗು 15.2 ಡಿಗ್ರಿ ಸೆಲ್ಸಿಯಸ್, ಕೋಲಾರ 15.5 ಡಿಗ್ರಿ ಸೆಲ್ಸಿಯಸ್, ಕೊಪ್ಪಳ 13.4 ಡಿಗ್ರಿ ಸೆಲ್ಸಿಯಸ್, ಮಂಡ್ಯ 13.9 ಡಿಗ್ರಿ ಸೆಲ್ಸಿಯಸ್, ಮೈಸೂರು 14 ಡಿಗ್ರಿ ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗ ರಾಯಚೂರು 14 ಡಿಗ್ರಿ ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗ ರಾಯಚೂರು ಇಂದು ಸೆಲ್ಸಿಯಸ್, ತುಮಕೂರು 18.1 ಡಿಗ್ರಿ ಸೆಲ್ಸಿಯಸ್, ಉಡುಪಿ 16.6 ಡಿಗ್ರಿ ಸೆಲ್ಸಿಯಸ್, ಉತ್ತರ ಕನ್ನಡ 16.6 ಡಿಗ್ರಿ ಸೆಲ್ಸಿಯಸ್, ವಿಜಯಪುರ 13.4 ಡಿಗ್ರಿ ಸೆಲ್ಸಿಯಸ್, ವಿಜಯನಗರ 12.9 ಡಿಗ್ರಿ ಸೆಲ್ಸಿಯಸ್ ಮತ್ತು ಬೆಳಿಗ್ಗೆ ಯಾದಗಿರಿಯಲ್ಲಿ 14.7 ಡಿಗ್ರಿ ಸೆಲ್ಸಿಯಸ್ 8.3 ಡಿಗ್ರಿ ಸೆಲ್ಸಿಯಸ್ ಬೆಳಿಗ್ಗೆ 8.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.





Source link

Leave a Reply

Your email address will not be published. Required fields are marked *