ಅಡಿಸ್ ಅಬಾಬಾ, ಡಿಸೆಂಬರ್ 17: ಪ್ರಧಾನಿ ನರೇಂದ್ರ ಮೋದಿ ಇಥಿಯೋಪಿಯಾ ಸೇರಿದಂತೆ ಮೂರು ದೇಶಗಳ ಪ್ರವಾಸದಲ್ಲಿದ್ದಾರೆ. ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಥಿಯೋಪಿಯಾದ ಅತ್ಯುನ್ನತ ಗೌರವ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ನೀಡಿ ಗೌರವಿಸಿದ್ದಾರೆ. ಇದು ಭಾರತ-ಇಥಿಯೋಪಿಯಾ ಸಂಬಂಧಗಳಲ್ಲಿ ಮಹತ್ವದ ಮೈಲಿಗಲ್ಲಾಗಿದೆ.
ಅಡಿಸ್ ಇಂಟರ್ನ್ಯಾಷನಲ್ ಸಮಾವೇಶ ಕೇಂದ್ರದಲ್ಲಿ ಆಯೋಜಿಸಲಾದ ವಿಶೇಷ ಸಮಾರಂಭದಲ್ಲಿ, ಭಾರತ-ಇಥಿಯೋಪಿಯಾ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಅವರ ಅಸಾಧಾರಣ ಕೊಡುಗೆ ಮತ್ತು ಜಾಗತಿಕ ರಾಜಕಾರಣಿಯಾಗಿ ಅವರ ದೂರದೃಷ್ಟಿಯ ನಾಯಕತ್ವಕ್ಕಾಗಿ ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಮೋದಿ ಅವರಿಗೆ ಅತ್ಯುನ್ನತ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ