ಬೆಂಗಳೂರು, ಡಿಸೆಂಬರ್ 17: ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಪಬ್ ಮೇಲೆ ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಪರಿಶೀಲನೆ ನಡೆಸಿ. ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿರುವ ಜನಪ್ರಿಯ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ ನಡೆದಿದೆ. ಈ ದಾಳಿಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಹಲವು ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಈ ಐಟಿ ದಾಳಿಯು ಆ ಹಿಂದಿನ ಪ್ರಕರಣಗಳ ಮುಂದುವರಿದ ಭಾಗವೇ ಅಥವಾ ಪಬ್ಗೆ ಸಂಬಂಧಿಸಿದ ಇತರ ವಿವಾದಗಳಿಗೆ ಸಂಬಂಧಿಸಿದ ಪ್ರಶ್ನೆಗಳು ಮೂಡಿವೆ. ಬ್ಯಾಸ್ಟಿಯನ್ ಪಬ್ ಬೆಂಗಳೂರಿನ ಅತ್ಯಂತ ದುಬಾರಿ ಪಬ್ಗಳಲ್ಲಿ. ಐಟಿ ಅಧಿಕಾರಿಗಳು ಸದ್ಯ ಪಬ್ನಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ