ಬೆಂಗಳೂರು, ಡಿಸೆಂಬರ್ 18: ಸಿಎಂ ಸಿದ್ದರಾಮಯ್ಯ ಪತ್ನಿಗೆ ಮುಡಾ ಸೈಟ್ ಹಂಚಿಕೆ ಪ್ರಕರಣ ಸಂಬಂಧ ಸರಿಯಾಗಿ ತನಿಖೆ ಮಾಡಿಲ್ಲ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ದಾಖಲೆ ಇದ್ದರೂ ಸರಿಯಾಗಿ ಪರಿಶೀಲನೆ ಮಾಡಿಲ್ಲ. ಉದ್ದೇಶ ಪೂರ್ವಕವಾಗಿ ವರದಿ ಸಲ್ಲಿಸಲು ಮುಂದಾಗಿದ್ದು, ದಿನಾಂಕವನ್ನು ಮುಂದೂಡುವ ತಂತ್ರವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ. ಆದರೆ ನನಗೆ ನ್ಯಾಯಾಲಯದ ಆದೇಶದ ಮೇಲೆ ಭರವಸೆ ಇದೆ, ಬಿರಿಪೋರ್ಟ್ ನ ಕೋರ್ಟ್ ತಿರಸ್ಕಾರ ಮಾಡುವ ಭರವಸೆ ಇದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.