16

Image Credit : stockPhoto
ನೀವು ಕರಾವಳಿಯವರು ಬೆಂಕಿ ಹಚ್ಚುವವರು
ಬೆಳಗಾವಿ (ಡಿ.18): ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ‘ನೀವು ಕರಾವಳಿಯವರು ಬೆಂಕಿ ಹಚ್ಚುವವರು’ ಎಂಬ ಹೇಳಿಕೆ ನೀಡುವ ಮೂಲಕ ಹೊಸ ವಿವಾದವನ್ನು ಸೃಷ್ಟಿಸಿದ್ದು, ಇದು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಯಿತು. ಕರಾವಳಿ ಭಾಗದ ಬಿಜೆಪಿ ಶಾಸಕರು ಸಚಿವರ ವಿರುದ್ಧ ತಿರುಗಿಬಿದ್ದು, ಕ್ಷಮೆಯಾಚನೆಗೆ ಪಟ್ಟು ಹಿಡಿದ ಘಟನೆ ಕಲಾಪದ ದಿಕ್ಕನ್ನೇ ಬದಲಿಸಿತು.
26
Image Credit : stockPhoto
ವಿವಾದದ ಕಿಡಿ
ಸದನದಲ್ಲಿ ಚರ್ಚೆಯ ವೇಳೆ ಸಚಿವ ಭೈರತಿ ಸುರೇಶ್ ಅವರು ಬಿಜೆಪಿ ಶಾಸಕರನ್ನು ಉದ್ದೇಶಿಸಿ, ‘ನೀವು ಕರಾವಳಿಯವರು ಬೆಂಕಿ ಹಚ್ಚುವವರು’ ಎಂದು ನೀಡಿದ ಹೇಳಿಕೆ ಸದನದಲ್ಲಿ ಕಿಚ್ಚು ಹಚ್ಚಿತು.
36
Image Credit : stockPhoto
ಕರಾವಳಿ ಸಂಸ್ಕೃತಿಗೆ ಅಪಮಾನ
ಈ ಮಾತಿನಿಂದ ಕೆರಳಿದ ಬಿಜೆಪಿ ಶಾಸಕರಾದ ಸುನಿಲ್ ಕುಮಾರ್, ವೇದವ್ಯಾಸ ಕಾಮತ್ ಮತ್ತು ಚನ್ನಬಸಪ್ಪ ಅವರು ಸಚಿವರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ‘ಕರಾವಳಿ ಸಂಸ್ಕೃತಿಗೆ ನೀವು ಅಪಮಾನ ಮಾಡಿದ್ದೀರಿ, ಕೂಡಲೇ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದರು.
46
Image Credit : stockPhoto
ಸ್ಪೀಕರ್ ಖಾದರ್ ವಿರುದ್ಧ ಆಕ್ರೋಶ
ಈ ಸಂದರ್ಭದಲ್ಲಿ ಶಾಸಕ ಸುನಿಲ್ ಕುಮಾರ್ ಅವರು ಸಭಾಧ್ಯಕ್ಷ ಯು.ಟಿ. ಖಾದರ್ ಅವರನ್ನೇ ಪ್ರಶ್ನಿಸಿ, ‘ನೀವೂ ಕರಾವಳಿಯವರಲ್ಲವೇ? ಸಚಿವರು ಇಡೀ ಕರಾವಳಿಗೆ ಬೆಂಕಿ ಹಚ್ಚುವವರು ಎಂದು ಹಣೆಪಟ್ಟಿ ಕಟ್ಟುತ್ತಿದ್ದರೂ ನೀವು ಸುಮ್ಮನೆ ಕುಳಿತಿದ್ದೀರಲ್ಲಾ? ಪೀಠದಿಂದ ಹೊರಗೆ ಬನ್ನಿ’ ಎಂದು ಸವಾಲು ಹಾಕಿದರು. ಸ್ಪೀಕರ್ ಅವರು ವಿವಾದಾತ್ಮಕ ಮಾತನ್ನು ಕಡತದಿಂದ ತೆಗೆದುಹಾಕುವುದಾಗಿ (Expunge) ಹೇಳಿದರೂ ಬಿಜೆಪಿ ಶಾಸಕರು ಸಮಾಧಾನಗೊಳ್ಳದೆ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
56
Image Credit : stockPhoto
ಗದ್ದಲದ ನಡುವೆಯೇ ಬಿಲ್ ಪಾಸ್
ಬಿಜೆಪಿ ಶಾಸಕರ ಪ್ರತಿಭಟನೆ ಮತ್ತು ಗದ್ದಲದ ನಡುವೆಯೇ ಸಭಾಧ್ಯಕ್ಷರು ‘ದ್ವೇಷ ಭಾಷಣ ತಡೆ ವಿಧೇಯಕ’ವನ್ನು (Hate Speech Bill) ಅಂಗೀಕರಿಸಿದರು. ಈ ಕ್ರಮದಿಂದ ತೀವ್ರ ಆಕ್ರೋಶಗೊಂಡ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸದನದಲ್ಲೇ ವಿಧೇಯಕದ ಪ್ರತಿಯನ್ನು ಹರಿದು ಹಾಕಿದರು. ‘ಇದು ದ್ವೇಷ ಭಾಷಣ ವಿರೋಧಿ ಬಿಲ್ ಅಲ್ಲ, ಬದಲಿಗೆ ವಿರೋಧ ಪಕ್ಷಗಳ ಧ್ವನಿ ಅಡಗಿಸುವ ಬಿಲ್’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದರು.
66
Image Credit : stockPhoto
ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ
ಸಚಿವ ಭೈರತಿ ಸುರೇಶ್ ಅವರ ಕ್ಷಮೆಗೆ ಪಟ್ಟು ಮತ್ತು ವಿಧೇಯಕದ ಮರುಪರಿಶೀಲನೆಗೆ ಆಗ್ರಹಿಸಿ ಬಿಜೆಪಿ ಸದಸ್ಯರು ಪಟ್ಟು ಹಿಡಿದಿದ್ದರಿಂದ ಸಭಾಧ್ಯಕ್ಷರು ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ