ಬೆಂಗಳೂರಿನಲ್ಲೊಂದು ಘೋರ ದುರಂತ: ನಿರ್ಮಾಣ ಹಂತದ ಕಟ್ಟಡದಿಂದ ಬ್ರಿಕ್ಸ್ ಬಿದ್ದು ಮಗು ಸಾವು

ಬೆಂಗಳೂರಿನಲ್ಲೊಂದು ಘೋರ ದುರಂತ: ನಿರ್ಮಾಣ ಹಂತದ ಕಟ್ಟಡದಿಂದ ಬ್ರಿಕ್ಸ್ ಬಿದ್ದು ಮಗು ಸಾವು


ಬೆಂಗಳೂರು, ಡಿಸೆಂಬರ್ 18: ನಿರ್ಮಾಣ ಕಟ್ಟಡದ 4ನೇ ಮಹಡಿಯಿಂದ ಸಿಮೆಂಟ್ ಇಟ್ಟಿಗೆ ಬಿದ್ದು ಮಗು (ಮಗು) ಇರುವಂತಹ (ಸಾವು) ಘಟನೆ ಗುರುವಾರ ಮಧ್ಯಾಹ್ನ ಬೆಂಗಳೂರಿನ ಹೆಚ್‌ಎಎಲ್‌ನ ಚಿನ್ನಪ್ಪನಹಳ್ಳಿಯಲ್ಲಿ ಸಂಭವಿಸಿದೆ. ಮನಸ್ವಿ(4) ಸಾವನ್ನಪ್ಪಿರುವ ಮಗು. ಮತ್ತಿಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯ. ಹೆಚ್.ಎಲ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ವಿಜಯಪುರ ಜಿಲ್ಲೆಯವರು. ನಿರ್ಮಾಣ ಕಟ್ಟಡದ ಪಕ್ಕದಲ್ಲಿ ಸಿಮೆಂಟ್ ಶೀಟ್ನ ಶೆಡ್ನಲ್ಲಿ ಕುಟುಂಬ ವಾಸವಾಗಿತ್ತು. ಇನ್ನು ಗಾಯಾಳುಗಳಾದ ಶ್ರಿಯನ್ (6) ಮತ್ತು ಶೇಖರ್(5)ರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಿರ್ಲಕ್ಷ್ಯ ಆರೋಪ

ನಿರ್ಮಾಣ ಕಟ್ಟಡ ಸುಬ್ಬರಾವ್ ಎಂಬುವವರಿಗೆ ಸೇರಿದೆ. ನಿರ್ಮಾಣ ವೇಳೆ ಅಗತ್ಯವಾದ ಸುರಕ್ಷತಾ ಕ್ರಮಗಳು ಹಾಗೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. 4ನೇ ಮಹಡಿ ಮೇಲಿಂದ ಸಿಮೆಂಟ್ ಇಟ್ಟಿಗೆ ಬಿದ್ದಿವೆ. ಇಟ್ಟಿಗೆ ಬಿದ್ದ ರಭಸಕ್ಕೆ ಮನೆಯ ಶೀಟ್ ಸಂಪೂರ್ಣ ಧ್ವಂಸವಾಗಿದೆ. ಮನೆಯಲ್ಲಿದ್ದ ಮಗುವಿನ ಮೇಲೆ ಬಿದ್ದಿದ್ದು, ಕಾಣಿಸಿಕೊಂಡಿದೆ. ಐದಾರು ಸಿಮೆಂಟ್ ಇಟ್ಟಿಗೆಗಳು ಮಂಚದ ಮೇಲೆ ಬಿದ್ದಿವೆ.

ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಸವಾರಿ ಸ್ಥಳದಲ್ಲೇ ಸಾವು

ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಸವಾರಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ನಗರ ಆನೇಕಲ್ ಸಮೀಪದ ವಣಕನಹಳ್ಳಿ ಸಮೀಪ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಆಕಾಶ್(23) ದುರ್ಮರಣ.

ಇದನ್ನೂ ಓದಿ: ಧಾರವಾಡ: ರೈಲಿಗೆ ತಲೆಕೊಟ್ಟು ಪ್ರಾಣಬಿಟ್ಟ ಯುವತಿ; ಸಿಕ್ಕಿದ್ದು ಎರಡೆರಡು ಡೆತ್ ನೋಟ!

ಆಕಾಶ ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಸ್ಥಳಕ್ಕೆ ಆನೇಕಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಶವವನ್ನು ಆನೇಕಲ್ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಆನೇಕಲ್ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.

ಹತ್ತು ಅಡಿ ಹಾರಿದ ಕಾರು: ಇಬ್ಬರು ಅದೃಷ್ಟವಶಾತ್ ಪಾರು

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೌಡಿಯಾಳ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರೊಂದು ಹತ್ತು ಅಡಿ ಹಾರಿ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಮಿತ್ರ ದ್ರೋಹ: ತಂಗಿ ಜೊತೆ ಲವ್ವಿಡವ್ವಿ; ಗೆಳೆಯನಿಗೆ ಚಟ್ಟ ಕಟ್ಟಿದ ಸ್ನೇಹಿತರು

ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಕಾರಿಗೆ ಬೈಕ್ ಅಡ್ಡ ಬಂದಿದೆ. ಬೈಕ್ ಸವಾರನನ್ನ ಬಚಾವು ಮಾಡಿ ಡಿವೈಡರ್ ಗೆ ಡಿಕ್ಕಿಯಾಗಿ ಹತ್ತು ಅಡಿ ಕಾರು ಹಾರಿದೆ. ಕಾರಿನ ರಸ್ತೆ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *