Headlines

ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಸಿಎಂ ಡಿಕೆ ಶಿವಕುಮಾರ್

ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಸಿಎಂ ಡಿಕೆ ಶಿವಕುಮಾರ್


ಕಾರವಾರ, ಡಿಸೆಂಬರ್ 19: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉತ್ತರ ಕನ್ನಡ ಜಿಲ್ಲೆ ಅಂಕೋಲದ ಆಂಡ್ಲೆ ಜಗದೀಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುರ್ಚಿ ಕಾಳಗದ ನಡುವೆ ಅವರ ಶಕ್ತಿ ದೇವತೆ ಮೊರೆ ಹೋಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಆಂಡ್ಲೇ ದೇವಸ್ಥಾನದ ಗರ್ಭಗುಡಿ ಬಾಗಿಲು ಹಾಕಿ ಡಿಕೆಶಿ ವಿಶೇಷ ಪೂಜೆ ನೆರವೇರಿಸಿದರು. ನಂತರ, ಗೋಕರ್ಣ ಮಹಾಬಲೇಶ್ವರ ದೇಗುಲಕ್ಕೆ ಭೇಟಿ ನೀಡಿ ಮಹಾಗಣಪತಿ ಮತ್ತು ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ್ದಾರೆ. ಈ ಹಿಂದೆ ಸಿಎಂ ಕುರ್ಚಿ ಕದನ ತೀವ್ರಗೊಂಡಿದ್ದ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಹಾಸನದ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆಯನ್ನು ಮನೆಗೆ ಕರೆಸಿಕೊಂಡು ಪೂಜೆ ನೆರವೇರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *