ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ: ಕಾಂಗ್ರೆಸ್ ಮುಖಂಡ ಅಲೀಮ್ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು, ಡಿಸೆಂಬರ್ 20: ಬಡವರ ಹೊಟ್ಟೆ ತುಂಬಿಸಬೇಕಿದ್ದ ಅನ್ನಭಾಗ್ಯ ಅಕ್ಕಿ (ಅನ್ನ ಭಾಗ್ಯ ಅಕ್ಕಿ) ದಂಧೆಕೋರರ ಬುಟ್ಟಿ ಸೇರುತ್ತಿದೆ. ಯಲಚೇನಹಳ್ಳಿ ಕಾಂಗ್ರೆಸ್ (ಕಾಂಗ್ರೆಸ್) ಮುಖಂಡ ಅಲೀಮ್ ಬಿಪಿಎಲ್ ಕಾರ್ಡ್ ದಾರರಿಂದ ಕಡಿಮೆ ಬೆಲೆಗೆ ಅಕ್ಕಿ ಕೊಂಡು ಕಾಳ ಸಂತೆಯಲ್ಲಿ ಮಾರಾಟ ನಡೆಯುತ್ತಿದೆ ಎಂದು ಕೆಆರ್ ಎಸ್ ಪಾರ್ಟಿ ಆರೋಪ ಮಾಡಿದೆ. ಸಾಗಾಟ ಮಾಡುವ ವೇಳೆಯಲ್ಲಿಯೇ ಕಾರ್ಯಾಚರಣೆ ನಡೆಸಿದ್ದ ಕೆಆರ್‌ಎಸ್ ಅಕ್ಕಿ ಅಕ್ಕಿ ಸಮೇತ ಗಾಡಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ದಂಧೆ ಹಿಂದೆ ಕಾಂಗ್ರೆಸ್ ಮುಖಂಡ ಅಲೀಮ್ ಇದ್ದಾರೆ, ಬಯಲಿಗೆ ಎಳೆದ ನಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಕೆಆರ್ ಎಸ್ ಪಕ್ಷದ ಮುಖ್ಯಸ್ಥರು ಇದನ್ನು ಹೊರಹಾಕಿದ್ದಾರೆ. ಸದ್ಯ ಅಲೀಮ್ ಸೇರಿ ನಾಲ್ವರ ವಿರುದ್ಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೀಜ್ ಮಾಡಿದ ಟೆಂಪೋದಲ್ಲಿ 45 ಚೀಲ ಅಕ್ಕಿ ಮೂಟೆ ಪತ್ತೆ
ಸೀಜ್ ಮಾಡಲಾದ ಟೆಂಪೋದಲ್ಲಿ 45 ಚೀಲ ಅಕ್ಕಿ ಮೂಟೆಗಳು ಇವೆ. ಇನ್ನು ಕೆಆರ್ ಎಸ್ ಪಕ್ಷದ ಮುಖಂಡನ ಮನೆ ಸುತ್ತಮುತ್ತ ಅಲೀಮ್ ರೌಡಿಗಳನ್ನು ಬಿಟ್ಟು ಹಲ್ಲೆ ಮಾಡಲು ಯತ್ನಿಸಿದ ವ್ಯಕ್ತಿ ಅಂತಲೂ ಆರೋಪ ಕೇಳಿಬಂದಿದೆ. ಬಿಡಿಎ ಕಚೇರಿಗಳಲ್ಲಿ ದಲ್ಲಾಳಿಯಾಗಿಯೂ ಅಲೀಮ್ ಕರಾಮತ್ತು ತೋರಿಸಲಾಗಿದೆ.
ಯಲಚೇನಹಳ್ಳಿ, ಇಲಿಯಾಸ್ ನಗರ ಸುತ್ತಮುತ್ತಲಿನ ಅಲೀಮ್ ಹಾಗೂ ಕೆಆರ್ ಎಸ್ ಪಕ್ಷದ ಮುಖಂಡರ ನಡುವೆ ಹಲವು ದಿನಗಳಿಂದ ತಕರಾರು ಇದ್ದು, ಅನ್ನಭಾಗ್ಯ ಅಕ್ಕಿ ಮಾರಾಟದ ಜಾಲವನ್ನು ಕೆಆರ್ ಎಸ್ ಪತ್ತೆ ಮಾಡಿದ ಬಳಿಕ ಜಟಾಪಟಿ ತೀವ್ರಗೊಂಡಿದೆ. ಒಟ್ಟಾರೆ ಈ ದಂಧೆಯ ಸಾರಾಂಶವನ್ನು ಬಯಲಿಗೆ ಎಳೆಯಬೇಕಾಗಿದೆ.
ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ