ರಾಜ್ಯದಲ್ಲಿ ನಿಲ್ಲದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಎಚ್ಚರಿಕೆ!
ಬೆಂಗಳೂರು, ಡಿಸೆಂಬರ್ 20: ರಾಜ್ಯದೆಲ್ಲೆಡೆ ಶೀತದಲೆ (ಹವಾಮಾನ ಮುನ್ಸೂಚನೆ) ಅಬ್ಬರಿಸುತ್ತಿರುವುದು, ಚಳಿಯ ಪ್ರಭಾವದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದೆ, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ. ಕಲಬುರಗಿ, ರಾಯಚೂರು ಸೇರಿದಂತೆ 5 ಜಿಲ್ಲೆಗಳಿಗೆ ಎಚ್ಚರಿಕೆ ನೀಡಿರುವ ಇಲಾಖೆ, 10 ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.
ಯಾವ ಜಿಲ್ಲೆಗಳಿಗೆ ಎಚ್ಚರಿಕೆ?
ಬೀದರ್, ಕಲಬುರಗಿ, ರಾಯಚೂಎಯು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿದ್ದು, ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದೆ.
ಎಲ್ಲೆಲ್ಲಿ ಒಣ ಹವೆ
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರುತ್ತದೆ.
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ಹೊಂದಿದೆ.
ಬೆಂಗಳೂರಿನಲ್ಲಿ ಮುಂದುವರೆದ ಚಳಿ
ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣ ಜನರನ್ನು ಗಡ ನಡುಗಿಸುತ್ತಿದೆ. ಮಕ್ಕಳಿಂದ ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಲಾಗಿದೆ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಲಾಗಿದೆ. ಈ ಮಧ್ಯೆ ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.