ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ?; ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕಾಪ್ರಹಾರ

ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ?; ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕಾಪ್ರಹಾರ


ಬೆಂಗಳೂರು, ಡಿಸೆಂಬರ್ 20: ಬಾಂಗ್ಲಾ ವಲಸಿಗರ ಬಗ್ಗೆ ಅತಾರ್ಕಿಕವಾಗಿ ರಾಜ್ಯ ಸರ್ಕಾರವನ್ನು ಟೀಕಿಸುವ ಬಿಜೆಪಿಗರಿಗೆ ಬಾಂಗ್ಲಾ ವಲಸಿಗರು ದೇಶದೊಳಗೆ ನುಸುಳಿದ್ದು ಹೇಗೆ? ಮತ್ತು ಯಾರ ಅಸಾಮರ್ಥ್ಯದಿಂದ? ಪ್ರಶ್ನೆಗೆ ಉತ್ತರ ಹೇಳುವ ಧೈರ್ಯವಿಲ್ಲ ಎಂದು ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಎಂಬ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (ಪ್ರಿಯಾಂಕ್ ಖರ್ಗೆ) ಟೀಕಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಅಸಮರ್ಥ ನಾಯಕ ಎಂದು ಕರೆದಿರುವ ಪ್ರಿಯಾಂಕ್ ಖರ್ಗೆ ಅದಕ್ಕೆ ಕಾರಣವನ್ನೂ ನೀಡಿದ್ದಾರೆ.

ಬಾಂಗ್ಲಾ ವಲಸಿಗರು ದೇಶದ ಗಡಿ ದಾಟಿ ಬರುತ್ತಿದ್ದಿದ್ದು ಕೇಂದ್ರ ಗೃಹ ಸಚಿವರ ವೈಫಲ್ಯವಲ್ಲವೇ? ದೆಹಲಿಯ ಕೆಂಪು ಕೋಟೆ ಬಳಿಯೇ ಸ್ಫೋಟವಾಗುತ್ತದೆ ಎಂದರೆ ಅದು ಕೇಂದ್ರ ಗೃಹ ಸಚಿವರ ಅಸಮರ್ಥ್ಯವಲ್ಲವೇ? ಪಹಲ್ಗಾಮ್ ದಾಳಿಯಾಗುವಾಗ ಅಮಿತ್ ಶಾ ಅವರ ಚಾಣಾಕ್ಷತನ ಎಲ್ಲಿ ಅಡಗಿತ್ತು? ವರ್ಷಗಳ ಕಾಲ ಮಣಿಪುರದಲ್ಲಿ ದಂಗೆ ನಡೆಯುತ್ತಿದ್ದುದನ್ನು ಸುಮ್ಮನೆ ನೋಡುತ್ತಾ ಕುಳಿತಿದ್ದನ್ನು ಅಸಾಮರ್ಥ್ಯ ಎನ್ನಬೇಕೋ ಅಥವಾ ಪರಾಕ್ರಮ ಎನ್ನಬೇಕೋ? ಮಹಿಳೆಯರ ಬೆತ್ತಲೆ ಮೆರವಣಿಗೆಯಿಂದ ಇಡೀ ಪ್ರಪಂಚದ ಎದುರು ನಮ್ಮ ದೇಶದ ಘನತೆ ಮಣ್ಣುಪಾಲಾದಾಗ ಕಣ್ಮುಚ್ಚಿ ಕುಳಿತಿದ್ದು ಅಸಾಮರ್ಥ್ಯವಲ್ಲದೆ ಇನ್ನೇನು? ಎಂದು ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ

ಅಮಿತ್ ಶಾ ಅವರ ಸಾಮರ್ಥ್ಯ, ಪರಾಕ್ರಮಗಳಿರುವುದು ಬಿಜೆಪಿಯೇತರ ಸರ್ಕಾರಗಳನ್ನು ಉರುಳಿಸುವುದರಲ್ಲಿ ಮತ್ತು ICC ಯನ್ನು ಸಮೃದ್ಧಗೊಳಿಸುವುದರಲ್ಲಿ ಮಾತ್ರವೇ? ಎಂದು ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ. ಪ್ರಮೋಷನ್ ಗಾಗಿ, ಅಸ್ತಿತ್ವಕ್ಕಾಗಿ ಅಮಿತ್ ಶಾ ಅವರ ಸ್ಪರ್ಧೆಗೆ ಬಿದ್ದವರಂತೆ ಸಮರ್ಥಿಸಿಕೊಳ್ಳುವುದು ರಾಜ್ಯದ ಬಿಜೆಪಿ ನಾಯಕರಿಗೆ ಅನಿವಾರ್ಯ ಎಂಬ ಸಂಗತಿ ನಮಗೂ, ಅದು ಜನತೆಗೂ ಮೆಚ್ಚಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಮಹಾತ್ಮ ಗಾಂಧಿ, ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಸೇರಿದಂತೆ ದೇಶ ಕಟ್ಟಿದ ನಾಯಕರ ಬಗ್ಗೆ ಅಸಂಸದೀಯ ಭಾಷೆಯ ಮೂಲಕ ನಾಲಿಗೆ ಹರಿಬಿಡುವ ಕರ್ನಾಟಕದ ಬಿಜೆಪಿ ನಾಯಕರು ಇಂದು ಅಸಮರ್ಥ ಎಂಬ ಪದವನ್ನು ಸಹಿಸಲಾಗದೆ ಒದ್ದಾಡುತ್ತಿರುವುದು ಅವರ ಶೋಚನಿಯ ಸ್ಥಿತಿಗೆ ಹಿಡಿದ ಕನ್ನಡಿ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *