Headlines

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಯೋ ಚಳಿ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಯೋ ಚಳಿ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!


ರಾಜ್ಯದಲ್ಲಿ ಚಳಿಯೋ ಚಳಿ; 7 ಜಿಲ್ಲೆಗಳಿಗೆ ಆರೆಂಜ್ ಎಚ್ಚರಿಕೆ!

ಬೆಂಗಳೂರು, ಡಿಸೆಂಬರ್ 20: ರಾಜ್ಯದಲ್ಲಿ ತೀವ್ರ ಚಳಿಯಿಂದಾಗಿ (ಹವಾಮಾನ ಮುನ್ಸೂಚನೆ) ಜನ ಜೀವನ ತತ್ತರಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದೆ, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ. ಕಲಬುರಗಿ, ರಾಯಚೂರು ಸೇರಿದಂತೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿರುವ ಇಲಾಖೆ, ಮಂಡ್ಯ, ಮೈಸೂರು ಸೇರಿದಂತೆ 15 ಜಿಲ್ಲೆಗಳಿಗೆ ಎಲ್ಲೋ ಎಚ್ಚರಿಕೆ ನೀಡಲಾಗಿದೆ.

ಯಾವ ಜಿಲ್ಲೆಗಳಿಗೆ ಎಚ್ಚರಿಕೆ?

ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ ಬೆಳಗಾವಿ ಜಿಲ್ಲೆಗಳಲ್ಲಿ ತೀವ್ರ ಚಳಿಗಾಳಿ ಬೀಸುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಸೂಚನೆ ನೀಡಿದೆ.

ಎಲ್ಲೆಲ್ಲಿ ಒಣ ಹವೆ

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ಹೊಂದಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರುತ್ತದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮುಂದುವರೆದ ಚಳಿ

ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣದಲ್ಲಿ ಸಾಕಷ್ಟು ಏರು ಪೇರಾಗುತ್ತಿದೆ, ಚಳಿಯ ಪ್ರಮಾಣ ಹೆಚ್ಚುತ್ತಿದೆ. ಮಕ್ಕಳಿಂದ ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಲಾಗಿದೆ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಲಾಗಿದೆ. ಈ ಮಧ್ಯೆ ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *