ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ


ಭಾರತ ಮತ್ತು ನ್ಯೂಜಿಲೆಂಡ್ ನಡುವಣ 8 ಪಂದ್ಯಗಳ ಸರಣಿಯು ಜನವರಿ 11 ರಿಂದ ಆರಂಭವಾಗಿದೆ. ಈ ಸರಣಿಯಲ್ಲಿ ಏಕದಿನ ಪಂದ್ಯಗಳನ್ನಾಡಲಾಗುತ್ತಿದ್ದು, ಇದಾದ ಬಳಿಕ ಟಿ20 ಸರಣಿ ನಡೆಯಲಿದೆ. ಇದೀಗ ಟಿ20 ಸರಣಿಗಾಗಿ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡರೆ, ಉಪನಾಯಕನಾಗಿ ಅಕ್ಷರ್ ಪಟೇಲ್ ಕಣಕ್ಕಿಳಿಯಲಿದ್ದಾರೆ.

ಇದಕ್ಕೂ ಮುನ್ನ ನಡೆದ ಸೌತ್ ಆಫ್ರಿಕಾ ಶುಭದ ವಿರುದ್ಧ ಟಿ20 ಸರಣಿಯಲ್ಲಿ ಮನ್ ಗಿಲ್ ಉಪನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಅವರನ್ನು ಟಿ20 ತಂಡದಿಂದ ಕೈ ಬಿಡಲಾಗಿದೆ, ಅವರ ಬದಲಿಗೆ ಇಶಾನ್ ಕಿಶನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಬದಲಿಗೆ ಜಿತೇಶ್ ಶರ್ಮಾ ರಿಂಕು ಸಿಂಗ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಕಿವೀಸ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಈ ಕೆಳಗಿನಂತಿವೆ…

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ಸಿಂಗ್ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾಶನ್, ವಾಷಿಂಗ್ಟನ್ ಸುಂದರ್, ಕುಲ್ದೀಪ್.

ಇನ್ನು ಈ ತಂಡವೇ ಫೆಬ್ರವರಿ 7 ರಿಂದ ಶುರುವಾಗಲಿರುವ ಟಿ20 ನಿಂದ ನಲ್ಲೂ ಕಣಕ್ಕಿಳಿಯಲಿದೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಸರಣಿಯ ಮೂಲಕ 15 ಸದಸ್ಯರ ಬಳಗವು T20 ಗೆ ಸಿದ್ಧತೆಗಳನ್ನು ನಡೆಸಲಿದೆ.

ಭಾರತ vs ನ್ಯೂಝಿಲೆಂಡ್ ಏಕದಿನ ಸರಣಿ

  • ಮೊದಲ ಏಕದಿನ ಪಂದ್ಯ – ಜನವರಿ 11 – ವಡೋದರಾ – ಮಧ್ಯಾಹ್ನ 1:30
  • ಎರಡನೇ ಏಕದಿನ ಪಂದ್ಯ – ಜನವರಿ 14 – ರಾಜ್‌ಕೋಟ್ – ಮಧ್ಯಾಹ್ನ 1:30
  • ಮೂರನೇ ಏಕದಿನ ಪಂದ್ಯ – ಜನವರಿ 18 – ಇಂದೋರ್ – ಮಧ್ಯಾಹ್ನ 1:30

ಇದನ್ನೂ ಓದಿ: ಆಸ್ಟ್ರೇಲಿಯಾ ದಾಂಡಿಗರ ಸಿಡಿಲಬ್ಬರ… ಟಿ20 ದಾಖಲೆಗಳು ಧೂಳೀಪಟ

ಭಾರತ vs ನ್ಯೂಝಿಲೆಂಡ್ ಟಿ20 ಸರಣಿ

  • ಮೊದಲ ಟಿ20 ಪಂದ್ಯ – ಜನವರಿ 21 – ನಾಗ್ಪುರ – ರಾತ್ರಿ 7:00
  • ಎರಡನೇ ಟಿ20 ಪಂದ್ಯ – ಜನವರಿ 23 – ರಾಯಪುರ – ರಾತ್ರಿ 7:00
  • ಮೂರನೇ ಟಿ20 ಪಂದ್ಯ – ಜನವರಿ 25 – ಗುವಾಹಟಿ – ರಾತ್ರಿ 7:00
  • ನಾಲ್ಕನೇ ಟಿ20 ಪಂದ್ಯ – ಜನವರಿ 28 – ವಿಶಾಖಪಟ್ಟಣ – ರಾತ್ರಿ 7:00
  • ಐದನೇ ಟಿ20 ಪಂದ್ಯ – ಜನವರಿ 31 – ತಿರುವನಂತಪುರಂ – ರಾತ್ರಿ 7:00



Source link

Leave a Reply

Your email address will not be published. Required fields are marked *