ಬಗೆದಷ್ಟೂ ಬಯಲಾಗ್ತಿದೆ ಬೇಲೂರು ಸರ್ಕಾರಿ ಆಸ್ಪತ್ರೆ ಕರ್ಮಕಾಂಡ
ಹಾಸನ, ಡಿಸೆಂಬರ್ 21: ಹಾಸನದ (ಹಾಸನ) ಬೇಲೂರಿನ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಗಂಭೀರ ಅಕ್ರಮಗಳು ಒಂದೊಂದಾಗಿ ಬಯಲಾಗುತ್ತಿದ್ದು, ಆರೋಗ್ಯ ಇಲಾಖೆಗೆ ಭಾರೀ ಮುಜುಗರ ಉಂಟಾಗಿದೆ. ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿದ್ದ ರೂ. ಮೌಲ್ಯದ ಸ್ಕ್ಯಾನಿಂಗ್ ಯಂತ್ರ ಕಳವು ಪ್ರಕರಣದ ತನಿಖೆ ವೇಳೆ, ಆಕ್ಸಿಜನ್ ಸಿಲಿಂಡರ್‌ಗಳು, ಐಸಿಯು ಮಾನಿಟರ್‌ಗಳು ಸೇರಿದಂತೆ ಹಲವು ಮಹತ್ವದ ವೈದ್ಯಕೀಯ ಉಪಕರಣಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೆ ಕದ್ದೊಯ್ದ ಯಂತ್ರದಲ್ಲಿ ಭ್ರೂಣಲಿಂಗ ಪತ್ತೆ ಮಾಡಲಾಗುತ್ತಿತ್ತಾ ಎಂಬ ಶಂಕೆಯೂ ವ್ಯಕ್ತವಾಗಿದೆ.
ಯಂತ್ರ ಕಳವಿನ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ವರ್ಷಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಸ್ಕೇನಿಂಗ್ ಯಂತ್ರವು ಕೊರತೆಯಿಂದ ಬಳಲುತ್ತಿಲ್ಲ, ಇತ್ತೀಚೆಗೆ ಹೊರಗುತ್ತಿದ ಆಧಾರದಲ್ಲಿ ರೇಡಿಯಾಲಜಿಸ್ಟ್ ನೇಮಕಗೊಂಡ ನಂತರ ಯಂತ್ರ ಪರಿಶೀಲನೆಗೆ ಮುಂದಾದಾಗ ಯಂತ್ರವೇ ಆಸ್ಪತ್ರೆಯಲ್ಲಿ ಇಲ್ಲದಿರುವುದು ಕಂಡುಬಂದಿದೆ. ಸ್ಕೇನಿಂಗ್ ಮಷಿನ್ ಕದ್ದೊಯ್ದು ಭ್ರೂಣಲಿಂಗ ಪತ್ತೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸಿಸಿ ಕ್ಯಾಮೆರಾ ಪರಿಶೀಲನೆ ವೇಳೆ ಡಿ ಗ್ರೂಪ್ ನೌಕರ ಪ್ರದೀಪ್ ಹಾಗೂ ಖಾಸಗಿ ಆಂಬುಲೆನ್ಸ್ ಚಾಲಕ ಸೂಫಿಯಾನ್ ಸೇರಿ ಯಂತ್ರಕ್ಕೆ ಬಂದಿದ್ದ ದೃಶ್ಯಗಳು ಪತ್ತೆಯಾಗಿವೆ.ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯಂತ್ರದಲ್ಲಿ ಯಂತ್ರವನ್ನು ಕದ್ದು ಮನೆಯಲ್ಲಿಟ್ಟಿದ್ದಕ್ಕೆ ಸಿಬ್ಬಂದಿ ಒಪ್ಪಿಕೊಂಡಿದ್ದಾನೆ.
ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು
ಇನ್ನೊಂದೆಡೆ ಭ್ರೂಣ ಲಿಂಗ ಪತ್ತೆಗೆ ಬಳಕೆ ಮಾಡಿರುವ ಪಿಎನ್ ಡಿಟಿ ಕಾಯಿದೆಯ ಅಡಿಯಲ್ಲಿ ರಚನೆಯಾಗಿರುವ ಟೀಂ ಕೂಡ ಯಂತ್ರವನ್ನ ಪರಿಶೀಲನೆಗೆ ಒಳಪಡಿಸಿದೆ. ಈ ಬಗ್ಗೆ ಪ್ರತಿಕ್ರಯಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಅನಿಲ್, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಲ್ಲದೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಂಡಂತೆ ಹೇಳಿದ್ದಾರೆ.
ಪ್ರಕರಣದ ಗಂಭೀರತೆ ಹಿನ್ನೆಲೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅನಿಲ್ ಸೂಚನೆ ಪೊಲೀಸ್ ದೂರು ದಾಖಲಾಗಿದ್ದು, ಇಬ್ಬರು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಧಿಕಾರಿಗಳು ಶಾಮೀಲಾತಿ ಶಂಕಿಸಿ ವಿವಿಧ ಸಂಘಟನೆಗಳು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ಸಮಗ್ರ ತನಿಖೆಗೆ ಹಾಜರಾದರು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.