ಬೆಂಗಳೂರು: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಪ್ರಕಟಿಸಲಾಗಿದೆ. ಹಾಲಿ ಚಾಂಪಿಯನ್ ಭಾರತ ತಂಡದಲ್ಲಿ ಕಳೆದ ವಿಶ್ವಕಪ್‌ಗೆ ಹೋಲಿಸಿದರೆ 7 ಬದಲಾವಣೆಗಳಾಗಿವೆ. ಈ ಕುರಿತಾದ ಇಂಟ್ರೆಸ್ಟಿಂಗ್ ಡೀಟೈಲ್ಸ್ ಇಲ್ಲಿದೆ ನೋಡಿ.

ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ನೇತೃತ್ವದಲ್ಲಿ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟಿಸಲಾಗಿದೆ. ಸೂರ್ಯಕುಮಾರ್ ಯಾದವ್‌ಗೆ ನಿರೀಕ್ಷೆಯಂತೆಯೇ ನಾಯಕತ್ವ ಪಟ್ಟ ಕಟ್ಟಲಾಗಿದೆ.

ಸೂರ್ಯ ಪಡೆ ಮುಂದೆ ಹಾಲಿ ಚಾಂಪಿಯನ್ ಪಟ್ಟ ಉಳಿಸಿಕೊಳ್ಳಬೇಕಾದ ಮಹತ್ವದ ಜವಾಬ್ದಾರಿಯಿದೆ. ಅಂದಹಾಗೆ ಕಳೆದ ವಿಶ್ವಕಪ್‌ಗೆ ಹೋಲಿಸಿದರೆ ಭಾರತ ತಂಡದಲ್ಲಿ ಬರೋಬ್ಬರಿ 7 ಪ್ರಮುಖ ಬದಲಾವಣೆಗಳಾಗಿವೆ.

ಹೌದು, 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಭಾರತ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಇದರ ಬೆನ್ನಲ್ಲೇ ರೋಹಿತ್, ವಿರಾಟ್ ಕೊಹ್ಲಿ ಹಾಗೂ ಆಲ್ರೌಂಡರ್ ರವೀಂದ್ರ ಜಡೇಜಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು.

ಇನ್ನು ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಯಶಸ್ವಿ ಜೈಸ್ವಾಲ್, ಅನುಭವಿ ವೇಗಿ ಮೊಹಮ್ಮದ್ ಸಿರಾಜ್ ಹಾಗೂ ಯುಜುವೇಂದ್ರ ಚಹಲ್ ಈ ಬಾರಿಯ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ

ಇವರ ಬದಲಿಗೆ ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್, ಇಶಾನ್ ಕಿಶನ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ರಿಂಕು ಸಿಂಗ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್ (ಉಪನಾಯಕ), ರಿಂಕು ಸಿಂಗ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಇಶಾನ್ ಕಿಶನ್(ವಿಕೆಟ್ ಕೀಪರ್).

Source link
2026ರ ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 7 ಬದಲಾವಣೆ!