ಅಸ್ಸಾಮ್​ನಲ್ಲಿ ಡಬಲ್ ಎಂಜಿನ್ ಸರ್ಕಾರ ಇದ್ದರೂ ಎಲ್ಲಾ ಸಮಸ್ಯೆಗಳಿಗೆ ವಿಪಕ್ಷಗಳನ್ನೇ ಹೊಣೆ ಮಾಡುವುದೇಕೆ? ಖರ್ಗೆ ಪ್ರಶ್ನೆ

ಅಸ್ಸಾಮ್​ನಲ್ಲಿ ಡಬಲ್ ಎಂಜಿನ್ ಸರ್ಕಾರ ಇದ್ದರೂ ಎಲ್ಲಾ ಸಮಸ್ಯೆಗಳಿಗೆ ವಿಪಕ್ಷಗಳನ್ನೇ ಹೊಣೆ ಮಾಡುವುದೇಕೆ? ಖರ್ಗೆ ಪ್ರಶ್ನೆ


ಜುಲೈ, ಡಿಸೆಂಬರ್ 21: ಸುದೀರ್ಘ ಕಾಲ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಪಕ್ಷ ಅಸ್ಸಾಂ ಹಾಗೂ ಈಶಾನ್ಯ ಪ್ರದೇಶಗಳನ್ನು ಕಡೆಗಣಿಸಿದೆ. ವಲಸಿಗರನ್ನು ಬರಲು ಬಿಟ್ಟು ಪ್ರಾದೇಶೀಕ ಭದ್ರತೆಗೆ ಧಕ್ಕೆ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ (ನರೇಂದ್ರ ಮೋದಿ) ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (ಮಲ್ಲಿಕಾರ್ಜುನ ಖರ್ಗೆ) ಭಾನುವಾರ ತಿರುಗೇಟು ನೀಡಿದ್ದಾರೆ. ಅಸ್ಸಾಂನಲ್ಲಿ ಡಬಲ್ ಇಂಜಿನ್ ಸರ್ಕಾರ ಹೊಂದಿರುವ ಬಿಜೆಪಿ, ಆ ರಾಜ್ಯದಲ್ಲಿ ಆಗಿರುವ ತನ್ನ ವೈಫಲ್ಯಕ್ಕೆ ಜವಾಬ್ದಾರಿ ಹೊರುವುದು ಬಿಟ್ಟು ವಿಪಕ್ಷಗಳಲ್ಲೇ ಬೊಟ್ಟು ಮಾಡುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಅವರು ಅದ್ಹೇಗೆ ವಿಪಕ್ಷಗಳ ಮೇಲೆ ಆಪಾದಿಸುತ್ತಾರೆ? ಕೇಂದ್ರದಲ್ಲಿ ಅವರ ಸರ್ಕಾರ ಇದೆ. ಅಸ್ಸಾಂನಲ್ಲೂ ಅವರದ್ದೇ ಸರ್ಕಾರ. ಡಬಲ್ ಎಂಜಿನ್ ಸರ್ಕಾರ ಆಗಿದೆ. ಅವರು ರಾಜ್ಯವನ್ನು ರಕ್ಷಿಸಲು ವಿಫಲರಾಗಿದ್ದಾರೆ, ವಿಪಕ್ಷಗಳನ್ನು ಹೇಗೆ ದೂಷಿಸುತ್ತಾರೆ? ನಾವಾ ಅಲ್ಲಿ ಆಡಳಿತ ನಡೆಸುತ್ತಿದೆ?’ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಬಿಜೆಪಿಯನ್ನು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ; ಚಿತ್ತಗಾಂಗ್‌ನಲ್ಲಿ ಅನಿರ್ದಿಷ್ಟಾವಧಿ ವೀಸಾ ಸೇವೆ ನಿಲ್ಲಿಸಿದ ಭಾರತ

ಪ್ರಧಾನಿ ಮೋದಿ ತಮ್ಮ ಸರ್ಕಾರ ವಿಫಲವಾದಾಗೆಲ್ಲಾ ಎಲ್ಲಾ ಸಮಸ್ಯೆಗಳಿಗೆ ವಿಪಕ್ಷಗಳನ್ನು ದೂಷಿಸುವುದನ್ನೇ ಪರಿಪಾಠವಾಗಿ ಹೋಗಿದೆ ಎಂದು ಅವರಿಗೆ ಆರೋಪ ಮಾಡಿದ್ದಾರೆ.

‘ಅವರು ವಿಫಲರಾದಾಗ ಎಲ್ಲವನ್ನೂ ವಿಪಕ್ಷಗಳ ತಲೆ ಮೇಲೆ ಹಾಕುತ್ತಾರೆ. ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ದೇಶದ್ರೋಹಿಗಳು ಅವರೇ ಹೊರತು ನಾವಲ್ಲ. ನಾವ್ಯಾರನ್ನೂ ರಕ್ಷಿಸುವುದಿಲ್ಲ. ದೇಶದ ಹಿತಕ್ಕೆ ಏನು ಒಳ್ಳೆಯದೋ ಅದನ್ನು ಮಾಡುತ್ತದೆ. ಭಯೋತ್ಪಾದಕರನ್ನೂ ಅಥವಾ ನುಸುಳುಕೋರರನ್ನೋ ಅಥವಾ ಇನ್ನಾರನ್ನೋ ನಾವು ಬೆಂಬಲಿಸುವುದಿಲ್ಲ. ಇವರನ್ನು ನಿಗ್ರಹಿಸಲು ವಿಫಲರಾದವರಿಗೆ ನಮ್ಮನ್ನು ದೂಷಿಸುತ್ತಿದ್ದಾರೆ ಅಷ್ಟೇ’ ಎಂದು ಕಾಂಗ್ರೆಸ್ ಅಧ್ಯಕ್ಷರು ಖಾರವಾಗಿ ಹೇಳಿದ್ದಾರೆ.

ಇದನ್ನೂ ಓದಿ: ದೇವರ ಹಾಡು ಹಾಡಿದ್ದಕ್ಕೆ ಕ್ರುದ್ಧಗೊಂಡ ಶಾಲಾ ಸಹ-ಮಾಲೀಕ; ಬಂಗಾಳಿ ಗಾಯಕಿ ಮೇಲೆ ಹಲ್ಲೆಗೆ ಯತ್ನ?

ನರೇಂದ್ರ ಮೋದಿ ನೀಡಿದ ಹೇಳಿಕೆ ಏನು?

ನರೇಂದ್ರ ಮೋದಿ ಅವರು ನಿನ್ನೆ ಶನಿವಾರ (ಡಿ. 20) ಅಸ್ಸಾಮ್ ರಾಜಧಾನಿ ಗುವಾಹಟಿಯ ಏರ್‌ಪೋರ್ಟ್‌ನ ಹೊಸ ಟರ್ಮಿನಲ್ ಉದ್ಘಾಟನೆ ಮಾಡಿ ಮಾತನಾಡುತ್ತಾ, ಅಸ್ಸಾಮ್ ಹಾಗೂ ಈಶಾನ್ಯವನ್ನು ಕಾಂಗ್ರೆಸ್ ಪಕ್ಷ ನಿರ್ಲಕ್ಷಿಸುತ್ತಾ ಬಂದಿತ್ತೆಂದು ಆಪಾದಿಸಿದ್ದರು.

ಕಾಲ ಈಶಾನ್ಯ ಪ್ರದೇಶಗಳಿಗೆ ನುಸುಳುಕೋರರನ್ನು ಬರಲು ಬಿಟ್ಟು ಅಲ್ಲಿನ ಭದ್ರತೆ ಮತ್ತು ಸಾಂಸ್ಕೃತಿಕ ಗುರುತನ್ನು ದುರ್ಬಲಗೊಳಿಸಲಾಗಿದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಮೋದಿ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *