ಬೆಂಗಳೂರು: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಹೊಡಿಬಡಿಯಾಟಕ್ಕೆ ಹೆಸರುವಾಸಿಯಾಗಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್-5 ಬ್ಯಾಟರ್ಗಳು ಯಾರು ಎನ್ನುವುದನ್ನು ನೋಡೋಣ ಬನ್ನಿ.

2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ಹಾಗೂ ಶ್ರೀಲಂಕಾ ಜಂಟಿ ಆತಿಥ್ಯ ವಹಿಸಿದ್ದು, 2026ರ ಫೆಬ್ರವರಿ 07ರಿಂದ ಮಾರ್ಚ್ 08ರ ವರೆಗೆ ನಡೆಯಲಿದೆ.

ಬ್ಯಾಟರ್ಗಳ ಪಾಲಿನ ಸ್ವರ್ಗ ಎನಿಸಿರುವ ಈ ಮಾದರಿಯಲ್ಲಿ ಹಲವು ಬ್ಯಾಟರ್ಗಳು ಸಿಕ್ಸರ್ ಮಳೆ ಸುರಿಸಿದ್ದಾರೆ. ನಾವಿಂದು ಚುಟುಕು ಕ್ರಿಕೆಟ್ ವಿಶ್ವಕಪ್ನಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್ 5 ಬ್ಯಾಟರ್ಗಳು ಯಾರು ಎನ್ನುವುದನ್ನು ನೋಡೋಣ ಬನ್ನಿ.

ಯೂನಿವರ್ಸಲ್ ಬಾಸ್ ಖ್ಯಾತಿಯ ಬಿಗ್ ಹಿಟ್ಟರ್ ಕ್ರಿಸ್ ಗೇಲ್, ಟಿ20 ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ 63 ಸಿಕ್ಸರ್ ಸಿಡಿಸುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ.

ಹಿಟ್ಮ್ಯಾನ್ ಖ್ಯಾತಿಯ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ 50 ಸಿಕ್ಸರ್ ಸಿಡಿಸುವ ಮೂಲಕ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್ ಮಾಜಿ ನಾಯಕ ಜೋಸ್ ಬಟ್ಲರ್ ಟಿ20 ವಿಶ್ವಕಪ್ನಲ್ಲಿ 43 ಬಾರಿ ಸಿಕ್ಸರ್ ಬಾರಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಬಟ್ಲರ್ ಸದ್ಯ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಆಡುತ್ತಿರುವ ಈ ಪಟ್ಟಿಯಲ್ಲಿರುವ ಏಕೈಕ ಹಾಲಿ ಆಟಗಾರ ಎನಿಸಿದ್ದಾರೆ.

ಆಸೀಸ್ ಮಾಜಿ ಸ್ಪೋಟಕ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್, ಟಿ20 ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ 40 ಸಿಕ್ಸರ್ ಸಿಡಿಸುವ ಮೂಲಕ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿಹೆಚ್ಚು ರನ್ ಬಾರಿಸಿದ ಆಟಗಾರ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ, ಒಟ್ಟು 35 ಸಿಕ್ಸರ್ ಸಿಡಿಸುವ ಮೂಲಕ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.

Source link
ಟಿ20 ವಿಶ್ವಕಪ್ನಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್-5 ಬ್ಯಾಟರ್ಗಳಿವರು! ಈ ಪಟ್ಟಿಯಲ್ಲಿದ್ದಾರೆ ಏಕೈಕ ಸಕ್ರಿಯ ಅಟಗಾರ