Headlines

ಕೊರೆಯುವ ಚಳಿಗೆ ನಡುಗಿದ ವಿಜಯಪುರ: ಶಾಲೆ ಸಮಯ ಬದಲಾವಣೆ, ಡಿಸಿ ಆದೇಶಕ್ಕೂ ಕಿಮ್ಮತ್ತಿಲ್ಲ

ಕೊರೆಯುವ ಚಳಿಗೆ ನಡುಗಿದ ವಿಜಯಪುರ: ಶಾಲೆ ಸಮಯ ಬದಲಾವಣೆ, ಡಿಸಿ ಆದೇಶಕ್ಕೂ ಕಿಮ್ಮತ್ತಿಲ್ಲ


ವಿಜಯಪುರ, ಡಿಸೆಂಬರ್ 22: ರಾಜ್ಯದಲ್ಲಿ ಚಳಿ (ಶೀತ) ಹೆಚ್ಚಾಗಿರುತ್ತದೆ. ಅದರಲ್ಲೂ ಬಿಸಿಲು ನಾಡು ವಿಜಯಪುರ ಜಿಲ್ಲೆಯಲ್ಲಿ ಇತರೆ ಜಿಲ್ಲೆಗಳಿಂದ ಚಳಿ ಅಧಿಕ ಪ್ರಮಾಣವಿದೆ. ದಾಖಲೆ ಪ್ರಮಾಣದಲ್ಲಿ ದಾಖಲಾಗಿದೆ. ಈ ಹಿನ್ನಲೆ ಡಿಸೆಂಬರ್ 31ರವರೆಗೆ ಎಲ್ಲಾ ಶಾಲೆಗಳು (ಶಾಲೆಗಳು) ಆರಂಭ ಸಮಯ ಬದಲಾವಣೆ ಮಾಡಿ ಆದೇಶ ಜಾರಿ ಮಾಡಿದೆ. ಆದರೆ ಈ ಆದೇಶ ಪಾಲನೆಯಾಗಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ಧಾರೆ.

ಶಾಲೆಗಳ ಸಮಯ ಬದಲಾವಣೆಗೆ ಆದೇಶ

ವಿಜಯಪುರ ಜಿಲ್ಲೆಯಲ್ಲಿ ಈ ಬಾರಿ ಕನಿಷ್ಠ ಪ್ರಮಾಣದ ಉಷ್ಣಾಂಶ ದಾಖಲಾಗಿದೆ. 20ವರ್ಷಗಳಲ್ಲಿ 3ನೇ ಕನಿಷ್ಠ ತಾಪಮಾನ ಹಾಗೂ 10 ವರ್ಷಗಳಲ್ಲಿ 4ನೇ ಬಾರಿ ಅತೀ ಕಡಿಮೆ ತಾಪಮಾನ ದಾಖಲಾಗಿದೆ. ಚಳಿಯ ತೀವ್ರತೆ ಶಾಲಾ ಮಕ್ಕಳು, ವೃದ್ಧರು ಹಾಗೂ ವಿವಿಧ ಖಾಯಿಲೆಗಳಿಂದ ಬಳಲುತ್ತಿರುವವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಕಾರಣ ಎಲ್ಲಾ ಶಾಲೆಗಳ ಆರಂಭಿಕ ಸಮಯ ಬದಲಾವಣೆಯ ಕೂಗು ಕೇಳಿಬಂದಿತ್ತು. ಜೊತೆಗೆ ರಾಜ್ಯ ವಿಪತ್ತು ನಿರ್ವಹಣಾ ಹಾಗೂ ಐಎಂಡಿ ಬೆಂಗಳೂರು ಪ್ರಕಾರ ರಾಜ್ಯದಲ್ಲಿ ಶೀತಗಾಳಿ ಬೀಸುತ್ತಿರುವ ಹಿನ್ನಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕೆಂದು ತಿಳಿಸಿದ್ದರು. ಈ ಹಿನ್ನಲೆ ವಿಜಯಪುರ ಜಿಲ್ಲಾಧಿಕಾರಿ ಕೆ. ಆನಂದ ಎಲ್ಲಾ ಶಾಲೆಗಳ ಸಮಯ ಬದಲಾವಣೆ ಮಾಡಿ ಡಿಸೆಂಬರ್ 20 ರಂದು ಆದೇಶ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ವಿಜಯಪುರದಲ್ಲಿ ದಾಖಲಾಯ್ತು 7 ಡಿಗ್ರಿ ಸೆಲ್ಸಿಯಸ್ ತಾಪಮಾನ; ಮೂರು ಜಿಲ್ಲೆಗಳಿಗೆ ಎಲ್ಲೋ ಎಚ್ಚರಿಕೆ

ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಖಾಸಗಿ ಶಾಲೆಗಳು ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗುವ ಆದೇಶದಲ್ಲಿ ನಮೂದಿಸಲಾಗಿದೆ. ಆದೇಶ ಜಾರಿಯಾಗಿ ಎರಡು ದಿನವಾದರೂ ಹಲವು ಶಾಲೆಗಳು ಈ ಮುಂಚೆ ಇದ್ದ ಸಮಯದಂತೆ ಬೆಳಿಗ್ಗೆ ಬೇಗ ಶಾಲೆಗಳನ್ನು ಆರಂಭಿಸಿವೆ. ಇದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಿದರೆ ಯಾರು ಹೊಣೆ?

ಡಿಸಿ ಆದೇಶಕ್ಕೆ ಬೆಲೆ ಇಲ್ಲವೇ. ತೀವ್ರ ಚಳಿಯ ಕಾರಣ ಸಮಯ ಬದಲಾವಣೆ ಮಾಡಿದರೂ ಅದನ್ನು ಏಕೆ ಪಾಲಿಸುತ್ತಿಲ್ಲ. ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಿದರೆ ಯಾರು ಹೊಣೆ ಎಂದು ಕಳ್ಳಿಮನಿ, ನಗರದ ನಿವಾಸಿ ಸೋಮನಾಥ್ ಎಂಬುವವರು ಕಿಡಿ ಕಾರಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ 1,939 ಸರ್ಕಾರಿ ಶಾಲೆಗಳಿದ್ದು, 2,26,260 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಶಾಲೆಯ ಸರ್ಕಾರಿ ಬೆಳಿಗ್ಗೆ 10 ಗಂಟೆಯಿಂದ ಪ್ರಾರಂಭವಾಯಿತು, ಯಾವುದೇ ಸಮಸ್ಯೆಯಾಗಿಲ್ಲ. 347 ಅನುದಾನಿತ ಶಾಲೆಗಳಿದ್ದು, 72,457 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಜೊತೆಗೆ ಖಾಸಗಿಯಾಗಿ 1,158 ಶಾಲೆಗಳಿದ್ದು 1,89,308 ವಿದ್ಯಾರ್ಥಿಗಳು ಓದುತ್ತಿದ್ದಾರೆ.

ಆದೇಶ ಪಾಲನೆ ಮಾಡದ ಶಾಲೆಗಳು

ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಶಾಲೆಗಳ ಆರಂಭಿಕ ಸಮಯ ಬೇರೆ ಬೇರೆಯಾಗಿದೆ. ಒಂದೊಂದು ಸಂಸ್ಥೆಯ ಸಮಯ ಬೇರೆ ಬೇರೆ ಆಗಿರುತ್ತದೆ. ಆದರೆ ಸದ್ಯ ಚಳಿ ಎಲ್ಲಾ ಶಾಲೆಗಳು ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಡಿಸಿ ಆದೇಶ ಹೊರಡಿಸಿದೆ. ಇದು ಮುಂದೆ ಸಮಸ್ಯೆಗೆ. ಅನುದಾನಿತ ಹಾಗೂ ಖಾಸಗಿ ಶಾಲೆಗಳ ಆದೇಶ ಪಾಲನೆ ಮಾಡುತ್ತಿಲ್ಲ. ಎಲ್ಲಾ ಶಾಲೆಗಳಿಗೆ ಡಿಸಿ ಆದೇಶ ನಿನ್ನೆಯೇ ತಲುಪಿದೆ ಎಂದು ಡಿಡಿಪಿಐ ವೀರಯ್ಯ ಸಾಲೀಮಠ ಮಾಹಿತಿ ತಿಳಿಸಿದೆ. ಆದರೆ ಡಿಡಿಪಿಐ ಕಚೇರಿಯಿಂದ ಯಾವುದೇ ಆದೇಶ ಬಂದಿಲ್ಲ, ಆದೇಶ ಬಂದ ಕೂಡಲೇ ಪಾಲಿಸಬೇಕೆಂದು ಅನುದಾನಿತ ಹಾಗೂ ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ಪ್ರಾರಂಭಿಸಿದರು. ಈ ವಿಚಾರಕ್ಕೂ ಅಸಮಾಧಾನ ತೋಡಿದೆ.

ಇದನ್ನೂ ಓದಿ: ಅಬ್ಬಬ್ಬಾ ಏನ್ ಚಳಿ ಗುರು: ಥಂಡಾ ಹೊಡೆದ ಉತ್ತರ ಕರ್ನಾಟಕ; ವಾಕಿಂಗ್ ತೆರಳದಂತೆ ಮನವಿ

ನಾಳೆಯಿಂದಾದರೂ ಎಲ್ಲಾ ಶಾಲೆಗಳು ಡಿಸಿ ಆದೇಶದಂತೆ ಆರಂಭಿಕ ವೇಳಾಪಟ್ಟಿಯನ್ನು ಬದಲಾಯಿಸಬೇಕಾಗಿದೆ. ಇಲ್ಲವಾದರೆ ತಮ್ಮ ಮನಸ್ಸಿಗೆ ಬಂದಂತೆ ಸಮಯ ನಿಗದಿಯಿಂದ ಚಳಿಯಿಂದಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದ ಚಳಿ ಇರುವ ಸಾಧ್ಯತೆ ಹೆಚ್ಚಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 5:03 pm, ಸೋಮ, 22 ಡಿಸೆಂಬರ್ 25



Source link

Leave a Reply

Your email address will not be published. Required fields are marked *