ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗುತ್ತದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗುತ್ತದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 23 ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)
ಮನೆಯಲ್ಲಿ ಖುಷಿಯ ವಾತಾವರಣ ಇರುತ್ತದೆ. ಅಲಂಕಾರದ ದೃಷ್ಟಿಯಿಂದ ಏನೇನು ಬದಲಾವಣೆ ಮಾಡಬೇಕು ಅಂದುಕೊಂಡಿರುತ್ತೀರೋ ಆ ಎಲ್ಲವನ್ನು ಮಾಡಲು ಸಾಧ್ಯ ಆಗಲಿದೆ. ನಿಮಗೆ ಇರುವಂಥ ಬದ್ಧತೆಯನ್ನು ಮಾಡಿಸಿಕೊಳ್ಳಲು ಅವಕಾಶಗಳು ಉದ್ಭವ ಆಗಲಿವೆ. ಕೆಲವು ಹಣಕಾಸಿನ ವಿಚಾರದ ನಿರ್ಧಾರಗಳು ಮುಂದಕ್ಕೆ ಹಾಕಿಕೊಳ್ಳುತ್ತವೆ. ಮೆಡಿಕಲ್ ಶಾಪ್ ನಡೆಸುತ್ತಾ ಇರುವವರು ಇದಕ್ಕೆ ಪೂರಕವಾಗಿ ಕೆಲವು ಹೊಸ ವ್ಯವಹಾರ ನಡೆಸುವ ಚಿಂತನೆ ನಡೆಸುತ್ತೀರಿ. ಉದ್ಯೋಗ ಸ್ಥಳದಲ್ಲಿ ನೀವು ಯಾವುದನ್ನು ಕೊನೆಗೆ ಆಯ್ಕೆ ಮಾಡಿಕೊಳ್ಳುತ್ತೀರಿ ಎಂದು ಭಾವಿಸಿರುತ್ತೀರೋ ಅದನ್ನೇ ಆರಿಸಿಕೊಳ್ಳುವಂತೆ ಆಗಲಿದೆ. ನಾಲಗೆ ಹುಣ್ಣು, ಗಂಟಲು ನೋವಿನ ಸಮಸ್ಯೆ ಈ ದಿನ ವಿಪರೀತ ಬಾಧಿಸಬಹುದು. ಆಹಾರ ಪಥ್ಯವನ್ನು ಯಾವುದೇ ಕಾರಣಕ್ಕೂ ತಪ್ಪಿಸಬೇಡಿ. ಆಕಸ್ಮಿಕವಾಗಿ ನಿಮಗೆ ಸಿಗುವಂಥ ಅವಕಾಶಗಳನ್ನು ಹೇಗೆ ಬಳಸಿಕೊಳ್ಳಬೇಕು ಎಂಬ ಕಡೆಗೆ ಗಮನ ನೀಡಿ.
ಜನ್ಮಸಂಖ್ಯೆ 2 (ಯಾವುದೇ ತಿಂಗಳ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)
ನಿಮ್ಮ ಪಾಲಿನ ಜವಾಬ್ದಾರಿಯನ್ನು ಶ್ರದ್ಧೆಯಿಂದ ಮಾಡಿದ್ದರ ಉತ್ತಮ ಫಲಿತವನ್ನು ಪಡೆದುಕೊಳ್ಳಲಾಗಿದೆ. ನಿಮ್ಮಲ್ಲಿ ಹೆಚ್ಚಿನ ಬಡ್ಡಿದರಕ್ಕೆ ತಂದಿದ್ದ ಸಾಲವನ್ನು ಹಿಂತಿರುಗಿಸಲು ಪ್ರಯತ್ನ ಮಾಡಬೇಕಾಗಿದೆ. ಮಿನರಲ್ ವಾಟರ್ ವಿತರಣೆಯ ವ್ಯವಹಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚು ಆಗಲಿದೆ. ಉದ್ಯೋಗ ಸ್ಥಳದಲ್ಲಿ ಸವಾಲು ಎನಿಸಿದ ಕೆಲವು ಕೆಲಸಗಳನ್ನು ನೀವಾಗಿಯೇ ಮುಂದೆ ಹೋಗಿ ವಹಿಸಿಕೊಳ್ಳುತ್ತಿದ್ದೇನೆ. ಇದರಿಂದ ಯಶಸ್ಸು ಹಾಗೂ ಭವಿಷ್ಯದಲ್ಲಿ ಬಡ್ತಿ ಇತ್ಯಾದಿ ವಿಷಯಗಳಿಗೆ ಅನುಕೂಲ ಒದಗಿ ಬರುತ್ತದೆ. ಯಾವುದೇ ಮುಖ್ಯ ಕಾಗದ- ಪತ್ರಗಳಿಗೆ ಸಹಿ ಮಾಡುವುದಕ್ಕೆ ಹೋಗಬೇಡಿ. ಅಣ್ಣ- ತಮ್ಮ, ಅಕ್ಕ- ತಂಗಿಯರ ಮಕ್ಕಳ ಮದುವೆಗಾಗಿ ಹಣಕಾಸಿನ ನೆರವು ಕೇಳಿಕೊಂಡು ಬರಲಿದ್ದಾರೆ. ನಿಮ್ಮ ಒಳಮನಸ್ಸಿಗೆ ಹೇಗೆ ನಡೆದುಕೊಳ್ಳಬೇಕು ಅನ್ನಿಸುತ್ತದೆಯೋ ಅದರಂತೆಯೇ ನಡೆದುಕೊಳ್ಳಿ.
ಜನ್ಮಸಂಖ್ಯೆ 3 (ಯಾವುದೇ ತಿಂಗಳ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)
ಇತರರ ವೈಯಕ್ತಿಕ ಅಭಿಪ್ರಾಯಗಳನ್ನು ತೆಗೆದುಹಾಕಲು ಹೋಗಬೇಡಿ. ಉದ್ಯೋಗ, ವೃತ್ತಿ- ವ್ಯವಹಾರಗಳಲ್ಲಿ ನೀಡುವಂಥ ಎಚ್ಚರಿಕೆಯನ್ನು ತೆಗೆದುಕೊಳ್ಳಲಾಗಿದೆ. ದೂರ ಪ್ರಯಾಣಕ್ಕೆ ಅಚಾನಕ್ ಆಗಿ ತೆರಳಲೇ ಬೇಕಾದ ಸನ್ನಿವೇಶ ಸೃಷ್ಟಿ ಆಗಲಿದೆ. ಹಳೇ ಒಪ್ಪಂದಗಳನ್ನು ಮುಂದುವರಿಸುವುದು ಬೇಡ ಎಂದುಕೊಳ್ಳಲಾಗಿದೆ. ತರಕಾರಿ- ಹಣ್ಣುಗಳ ಸರಬರಾಜು ವಾಹನವನ್ನು ಚಾಲನೆ ಮಾಡುವವರು ಅದರೊಂದಿಗೆ ವ್ಯಾಪಾರವನ್ನು ಪ್ರಾರಂಭಿಸುವ ಆಲೋಚನೆ ಮೂಡಲಿದೆ. ದುಡಿಮೆಯು ನಿರೀಕ್ಷೆಯ ಮಟ್ಟದಲ್ಲಿ ಇಲ್ಲ ಎಂಬುದು ಬಹಳವಾಗಿ ಕೊರೆಯಲು ಆರಂಭವಾಗುತ್ತದೆ. ಸ್ನೇಹಿತರ ಯಾರೋ ನಿಮ್ಮ ಉದ್ದೇಶಕ್ಕೆ ಕೈ ಜೋಡಿಸಲು ಮುಂದೆ ಬರಲಿದ್ದಾರೆ. ಒಂದು ಕೆಲಸವನ್ನು ಮುಗಿಸಲು ಇತರರಿಗೆ ಒಪ್ಪಿಸುವುದರಿಂದ ಅವರಿಗೆ ಸಲಹೆ- ಸೂಚನೆ, ಮಾರ್ಗದರ್ಶನ ನೀಡುವುದಕ್ಕೆ ಹೆಚ್ಚಿನ ಸಮಯವನ್ನು ಮೀಸಲಿಡುವಂತೆ ಆಗಲಿದೆ.
ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)
ಈ ದಿನ ಚಂಚಲತೆ ವಿಪರೀತ ಕಾಡುತ್ತದೆ. ಆತುರದಲ್ಲಿ ನಿಮ್ಮ ತೀರ್ಮಾನವನ್ನು ಹೇಳಲು ಹೋಗಬೇಡಿ. ಇನ್ನು ನಿಮ್ಮ ಬಳಿ ಇರುವ ಹಣಕ್ಕೆ ಎಷ್ಟು ಅಷ್ಟಕ್ಕೆ ಮಾತ್ರ ಯೋಜನೆ ಹಾಕಿಕೊಳ್ಳಿ. ಏನನ್ನಾದರೂ ದಕ್ಕಿಸಿಕೊಳ್ಳಲು ಬಲ್ಲೆ ಎಂಬ ಆಲೋಚನೆ ಅಪಾಯಕಾರಿ ಆಗಲಿದೆ. ಸರ್ಕಾರಿ ಮಟ್ಟದಲ್ಲಿ ಆಗಬೇಕಾದ ಕೆಲಸಗಳನ್ನು ಮುಗಿಸಿಕೊಳ್ಳುವುದಕ್ಕೆ ಎಲ್ಲ ಪ್ರಯತ್ನ ಮಾಡಿದ ನಂತರವೂ ಕೊನೆಗೆ ಅದು ನಿಂತು ಬಿಡುತ್ತದೆ. ಬೆನ್ನು ನೋವು ವಿಪರೀತವಾಗಿ ಕಾಡಬಹುದು. ಅದರಲ್ಲಿಯೂ ದ್ವಿಚಕ್ರ ವಾಹನವನ್ನು ಹೆಚ್ಚಾಗಿ ಬಳಸುತ್ತೀರಿ ಅಂತಾ ವೈದ್ಯರ ಬಳಿ ತೆರಳಿ, ಸಲಹೆ ತೆಗೆದುಕೊಳ್ಳುವುದು ಕ್ಷೇಮ. ಯಾವುದಕ್ಕೂ ಇರಲಿ ಎಂದು, ಬಹಳ ಹಿಂದೆ ಸಣ್ಣ ಪ್ರಮಾಣದಲ್ಲಿ ಮಾಡಿದ್ದ ಹೂಡಿಕೆಯೊಂದು ಈಗ ಭಾರೀ ದೊಡ್ಡ ಲಾಭ ತಂದುಕೊಡಲಿದೆ ಎಂಬುದು ನಿಮ್ಮ ಗಮನಕ್ಕೆ ಬರಲಿದೆ. ಆದರೆ ಈ ಬಗ್ಗೆ ಎಲ್ಲ ಕಡೆ ಹೇಳಿಕೊಂಡು ಬರಬೇಡಿ.
ಜನ್ಮಸಂಖ್ಯೆ 5 (ಯಾವುದೇ ತಿಂಗಳ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)
ಕೆಲವು ಕೃಷಿಯಲ್ಲಿ ತೊಡಗಿಸಿಕೊಂಡವರು ಜಮೀನಿನಲ್ಲಿ ದೀರ್ಘಾವಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಿದ್ದಾರೆ. ಕೊಟ್ಟಿಗೆ, ಗೋದಾಮು, ಇತರೆ ನಿಮ್ಮ ಚಟುವಟಿಕೆಗೆ ಅನುಕೂಲ ಆಗುವ ರೀತಿ ಯೋಜನೆ ಮಾಡಿಕೊಳ್ಳಬೇಕು. ಕುಟುಂಬದ ಸದಸ್ಯರು ನಿಮ್ಮ ಆಲೋಚನೆಗಳಿಗೆ ಆರ್ಥಿಕವಾಗಿ ನೆರವು ನೀಡಲಿದ್ದಾರೆ. ತಕ್ಷಣಕ್ಕೆ ಬೇಡ ಅಂದುಕೊಂಡಂಥ ಕೆಲವು ಕೆಲಸಗಳನ್ನು ನಿರ್ಧಾರ ಬದಲಿಸಿ, ಆರಂಭ ಮಾಡಿಬಿಡುತ್ತೀರಿ. ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದವರು ಅದನ್ನು ಹಿಂತೆಗೆದುಕೊಳ್ಳುವ ಆಲೋಚನೆ ಬಂದರೆ ಅದರಂತೆಯೇ ನಡೆದುಕೊಳ್ಳುವುದು ಉತ್ತಮ. ನಿಮಗೆ ಉದ್ಯೋಗ ಸ್ಥಳದಲ್ಲಿ ಭರವಸೆಗಳನ್ನು ಮೇಲಧಿಕಾರಿಗಳು ನೀಡುತ್ತಿರುವ ಸೂಚನೆ ದೊರೆಯಲಿದೆ. ಇಂಥ ಸಮಯದಲ್ಲಿ ಮನಸ್ಸಿಗೆ ಬೇಸರ ಆಗುವಂಥ ಹಳೇ ಘಟನೆಗಳನ್ನು ನೆನಪಿಸಿಕೊಂಡು, ಸಿಟ್ಟು ಮಾಡಿಕೊಳ್ಳುವುದಕ್ಕೆ ಹೋಗಬೇಡಿ.
ಜನ್ಮಸಂಖ್ಯೆ 6 (ಯಾವುದೇ ತಿಂಗಳ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)
ತುಂಬ ಉತ್ಸಾಹದಿಂದ ಕೆಲಸ- ಕಾರ್ಯಗಳಲ್ಲಿ ತೊಡಗಿಕೊಳ್ಳುವುದಕ್ಕೆ ಆಗಲ್ಲ. ಮುಖ್ಯವಾಗಿ ಮೈ- ಕೈ ನೋವು, ತಲೆನೋವು ಇಂತಹವು ನಿಮ್ಮನ್ನು ಈ ದಿನ ಬಹುವಾಗಿ ಕಾಡಲಿವೆ. ಯಾಕೆ- ಏನು ವಿಚಾರಿಸದೆ ಸ್ನೇಹಿತರು ಹೇಳುವಂತಹ ಕೆಲಸಗಳನ್ನು ಮಾಡುವುದಕ್ಕೆ ಒಪ್ಪಿಕೊಳ್ಳಬೇಡಿ. ಸಂಘ- ಸಂಸ್ಥೆಗಳನ್ನು ಮುನ್ನಡೆಸುತ್ತಾ ಇರುವವರಿಗೆ ದೊಡ್ಡ ಜವಾಬ್ದಾರಿಯೊಂದು ಹೆಗಲು ಏರಲಿದೆ. ಇನ್ನು ಬಿಡಿ ಬಿಡಿಯಾಗಿ ಕೆಲಸ ಮುಗಿಸುವ ಬದಲು ಒಂದೇ ಸಲಕ್ಕೆ ಎಲ್ಲವನ್ನೂ ಮಾಡಿಬಿಡೋಣ ಎಂದು ಮುಂದಕ್ಕೆ ಹಾಕಿಕೊಂಡು ಹೋಗಬೇಡಿ. ಕಾಂಡಿಮೆಂಟ್ಸ್, ಚಾಟ್ಸ್ ಮಾರಾಟದ ವ್ಯವಹಾರ ಮಾಡುತ್ತಾ ಇರುವವರಿಗೆ ಹೊಸ ಅವಕಾಶಗಳು ಕಾಣಿಸಿಕೊಳ್ಳಲು ಶುರುವಾಗುತ್ತವೆ. ಮಳಿಗೆ ರಿನೋವೇಷನ್ ಮಾಡಿಸಬೇಕು ಎಂದುಕೊಳ್ಳುತ್ತಾ ಇದ್ದರೆ ಅದಕ್ಕೆ ಬೇಕಾದ ಆರ್ಥಿಕ ವ್ಯವಸ್ಥೆ ಆಗಲಿದೆ, ಇದರಿಂದ ಸಾಧ್ಯ.
ಇದನ್ನೂ ಓದಿ: ಸಂಖ್ಯಾಶಾಸ್ತ್ರದ ಪ್ರಕಾರ ಜನ್ಮಸಂಖ್ಯೆಗೆ ಡಿಸೆಂಬರ್ 21 ರಿಂದ 27 ರ ತನಕ ವಾರಭವಿಷ್ಯ
ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)
ಬಂದದ್ದು ಬರಲಿ ಎಂದು ಧೈರ್ಯವಾಗಿ ನೀವು ತೆಗೆದುಕೊಂಡ ತೀರ್ಮಾನಗಳು ಲಾಭದಾಯಕ ಆಗಲಿದೆ. ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸುವುದಕ್ಕಾಗಿ ವಿರೋಧಿಗಳು ಮಾಡುವ ಪ್ರಯತ್ನಗಳು ಅವರಿಗೇ ಉಲ್ಟಾ ಹೊಡೆಯಲಿದೆ. ನಿಧಾನವಾಗಿ ಬದಲಾವಣೆಗೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ಉದ್ಯೋಗ ಸ್ಥಳದಲ್ಲಿ ಕೆಲವು ತಾಂತ್ರಿಕ ತರಬೇತಿಗಳನ್ನು ಅನಿವಾರ್ಯವಾಗಿ ಕಲಿಯಬೇಕು ಎಂಬ ಸ್ಥಿತಿ ನಿರ್ಮಾಣ ಆಗಲಿದೆ. ಆದರೆ ಇದರಿಂದ ಭವಿಷ್ಯದಲ್ಲಿ ನಿಮಗೆ ಅನುಕೂಲ ಆಗಲಿದೆ. ವೈದ್ಯರಿಗೆ ಪ್ರಾಯೋಜಕರು ದೊರೆಯುವಂಥ ಯೋಗವಿದೆ. ಪ್ರತಿಷ್ಠಿತ ಸಂಸ್ಥೆ ಅಥವಾ ವ್ಯಕ್ತಿಗಳು ಅವರಾಗಿಯೇ ಭೇಟಿ ಆಗುವಂತೆ ತಿಳಿಸಿದಲ್ಲಿ ನಿಧಾನ ಮಾಡಬೇಡಿ. ಇನ್ನು ಯುಪಿಐ ಮೂಲಕ ದೊಡ್ಡ ಮೊತ್ತದ ಪಾವತಿ ಮಾಡುವ ಸನ್ನಿವೇಶದಲ್ಲಿ ಸರಿಯಾದ ಸಂಖ್ಯೆಯನ್ನು ಬಳಸಲಾಗಿದೆಯೇ ಎಂದು ಪರಿಶೀಲಿಸಲು ಕ್ಷೇಮ.
ಜನ್ಮಸಂಖ್ಯೆ 8 (ಯಾವುದೇ ತಿಂಗಳ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)
ನೀವು ನಂಬಿದ ವ್ಯವಹಾರ ಬೆಳವಣಿಗೆಗೆ ಸಹಕಾರಿ ಆಗುವ ಸುಳಿವು ನೀಡಲಿದೆ. ಸಂಗಾತಿ ಕುಟುಂಬದ ಕಡೆಯಿಂದ ದೊಡ್ಡ ಮಟ್ಟದಲ್ಲಿ ಬೆಂಬಲ ದೊರೆಯಲಿದೆ. ನಿಮ್ಮ ಜೊತೆಗೆ ಓದಿದಂಥ ಸ್ನೇಹಿತರ ಸಲಹೆಯಿಂದ ಆಲೋಚನಾ ಚಿಕಿತ್ಸೆಯ ಬದಲಾವಣೆ ಮಾಡಿಕೊಳ್ಳಲಾಗಿದೆ. ನಿಮಗೆ ಗೊತ್ತಿರುವ ಕೌಶಲಕ್ಕೆ ಬೇಡಿಕೆ ಹೆಚ್ಚಾಗಲಿದೆ, ಕೆಲವು ಪ್ರಾಜೆಕ್ಟ್‌ಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣ ಮಾಡಿಕೊಟ್ಟಲ್ಲಿ ಈ ಮೊತ್ತದ ಹೆಚ್ಚಿನ ಮೊತ್ತವನ್ನು ನೀಡುವುದಾಗಿ ಪ್ರಸ್ತಾವನೆ ಇಡಲಿದೆ. ನೀವು ಹಾಕಿದ್ದ ಪ್ಲಾನ್ ಗೆ ಇರುವ ಅನಿಶ್ಚಿತತೆ ದೂರ ಆಗಲಿದೆ, ಕುಟುಂಬದ ಎಲ್ಲ ಸದಸ್ಯರ ಬೆಂಬಲವನ್ನು ನೀಡಲಿದ್ದಾರೆ. ಸೆಕೆಂಡ್ ಹ್ಯಾಂಡ್ ವಸ್ತುಗಳು ಬಹಳ ಕಡಿಮೆಗೆ ಸಿಗುತ್ತಿವೆ, ಅದು ನಿಮಗೆ ಬಹಳ ಅಗತ್ಯವಾದ ವಸ್ತುಗಳು ಎಂದಾದಲ್ಲಿ ಖರೀದಿಸಲು ಯಾವುದೇ ರೀತಿಯ ಹಿಂಜರಿಕೆ ಮಾಡಬೇಡಿ.
ಜನ್ಮಸಂಖ್ಯೆ 9 (ಯಾವುದೇ ತಿಂಗಳ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)
ನಿಮ್ಮ ಬುದ್ಧಿವಂತಿಕೆ ಹಾಗೂ ಚೌಕಾಶಿ ಮಾಡುವ ಸಾಮರ್ಥ್ಯ ಅತ್ಯುತ್ತಮವಾದ ಫಲ ನೀಡುವ ದಿನ ಇದಾಗಿದೆ. ನಿಮ್ಮ ಜಮೀನು, ಸೈಟು ಅಥವಾ ಯಾವುದಾದರೂ ಆಸ್ತಿಗೆ ಸಂಬಂಧಿಸಿದ ಕಾಗದ ಪತ್ರದ ವ್ಯವಹಾರಕ್ಕೆ ಬಹಳ ಸಮಯದಿಂದ ದೂರ ಇದ್ದೀರಿ ಅಂತಾದರೆ ಅದು ಪೂರ್ಣಗೊಳ್ಳುವ ಯೋಗವಿದೆ. ನಿಮ್ಮಿಂದ ಸಾಲ ಪಡೆದು ಬಹಳ ಸಮಯದಿಂದ ಹಿಂತಿರುಗಿಸುವುದಿಲ್ಲ ಅಂತಾದಲ್ಲಿ ಅದನ್ನು ವಸೂಲಿ ಮಾಡುವಂಥ ಯೋಗ ಈ ದಿನ ಇದೆ. ಬೇಕರಿ ಪದಾರ್ಥಗಳಿಂದ ದೂರ ಇರುವುದು ಒಳ್ಳೆಯದು. ಇತ್ತೀಚೆಗೆ ನಿಮಗೆ ಹೊಟ್ಟೆನೋವಿನ ಸಮಸ್ಯೆ ತೀವ್ರವಾಗಿದೆ ಎಂದಾದಲ್ಲಿ ಈ ಸಲಹೆಯನ್ನು ಕಡ್ಡಾಯವಾಗಿ ಪಾಲಿಸಿ. ಸಂಗಾತಿಯೊಂದಿಗೆ ಮುಖ್ಯವಾದ ಸಂಗತಿಯನ್ನು ಚರ್ಚಿಸಲಾಗಿದೆ. ಮಕ್ಕಳ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ತೃಪ್ತಿ, ಸಮಾಧಾನ ಹಾಗೂ ನೆಮ್ಮದಿಯನ್ನು ನೀಡಲಿದೆ.
ಲೇಖನ- ಎನ್.ಕೆ.ಸ್ವಾತಿ
ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ