ಪೇಪರ ಪಾರಿವಾಳ ತಂದ ಅವಾಂತರ: ಮೊದಲ ಮಹಡಿಯಿಂದ ಬಿದ್ರೂ ಬದುಕುಳಿದ 5ರ ಬಾಲಕ

ಪೇಪರ ಪಾರಿವಾಳ ತಂದ ಅವಾಂತರ: ಮೊದಲ ಮಹಡಿಯಿಂದ ಬಿದ್ರೂ ಬದುಕುಳಿದ 5ರ ಬಾಲಕ


ಕೊಪ್ಪಳ, ಡಿಸೆಂಬರ್ 22: ಐದು ವರ್ಷ ಬಾಲಕ (ಮಗು) ಮನೆಯ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದು (ಪತನ) ಗಂಭೀರವಾದ ಘಟನೆ ಕೊಪ್ಪಳ ನಗರದ ಹಮಾಲರ ಕಾಲೋನಿಯಲ್ಲಿ ನಡೆದಿದೆ. ಪವಾಡಸದೃಶವೆಂಬಂತೆ ಬಾಲಕ ಪಾರಾಗಿದ್ದಾನೆ. ಮಹಮ್ಮದ್ ಹ್ಯಾರಿಸ್ ಸಾವು ಗೆದ್ದುಬಂದ ಬಾಲಕ. ಕೊಪ್ಪಳ ಖಾಸಗಿ ಆಸ್ಪತ್ರೆಗೆ ಕಡ್ಡಾಯವಾಗಿ ದಾಖಲಿಸಿದ್ದರು. ಆದರೆ ವೈದ್ಯರ ಪರೀಕ್ಷೆ ವೇಳೆ ಮಹಮ್ಮದ್ ಹ್ಯಾರಿಸ್ ತಲೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಬಾಲಕ ಮೊದಲನೇ ಮಹಡಿಯಿಂದ ಕೆಳೆಗ ಬಿಳ್ಳುವ ದೃಶ್ಯ ಸೆರೆ ಹಿಡಿದ, ಎದೆ ಝಲ್ ಅನ್ನಿಸುತ್ತದೆ.

ನಡೆದದ್ದೇನು?

ಕೊಪ್ಪಳ ನಗರದ ಹಮಾಲರ ಕಾಲೋನಿಯಲ್ಲಿ ಐದು ವರ್ಷದ ಬಾಲಕ ಮಹಮ್ಮದ್ ಹ್ಯಾರಿಸ್ ನಿನ್ನೆ ಮಧ್ಯಾಹ್ನ ಮೊದಲನೇ ಮಹಡಿಯಲ್ಲಿ ಪೇಪರ್ನಿಂದ ಪಾರಿವಾಳ ಮಾಡಿ ಆಟವಾಡುತ್ತಿದ್ದ. ಅದನ್ನು ಗಾಳಿ ತೂರಿ ಹಿಡಿಯಲು ಹೋದಾಗ ಮೊದಲನೇ ಮಹಡಿಯಿಂದ ಕೆಳಗಡೆ ಬಿದ್ದಿದ್ದಾನೆ. ಮಹಮ್ಮದ್ ಕೆಳಗಡೆ ಬಿಳ್ಳುವ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಆಟವಾಡುತ್ತಿದ್ದ ಬಾಲಕನ ಮೇಲೆ ಇದೆಂತಾ ವಿಕೃತಿ?: ವಿಡಿಯೋ ನೋಡಿದ್ರೆ ರಕ್ತ ಕುಡಿಯುತ್ತೆ

ಮನೆಯ ಕೆಳಗಡೆ ಮಹಮ್ಮದ್ ಹ್ಯಾರಿಸ್ ಸಹೋದರಿ ಕೂಡ ಆಟವಾಡುತ್ತಿದ್ದರು, ಮಹಮ್ಮದ್ ಬಿದ್ದ ತಕ್ಷಣ ಮೇಲೆ ಎತ್ತಿದ್ದಾಳೆ. ಒಳಗಡೆಯಿಂದ ಉಡುಗೊರೆ ಕಿರುಚುತ್ತಾ ಓಡೋಡಿ ಬಂದಿದ್ದಾರೆ. ಕೆಳಗಡೆ ಬಿದ್ದ ಮಗುವನ್ನು ಕೂಡಲೇ ಕೊಪ್ಪಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಮಹಮ್ಮದ್ ಅವರಿಗೆ 2 ಗಂಟೆಯೊಳಗೆ ಆಪರೇಷನ್ ಮಾಡಲಾಗಿದೆ. ಸದ್ಯ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದರೆ, ಚಿಕಿತ್ಸೆ ಪಡೆಯುತ್ತಿದ್ದಾನೆ.

ಇದನ್ನೂ ಓದಿ: ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿಯಿಂದ ಹಲ್ಲೆ: ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯ

ಒಟ್ಟಾರೆ ಮೊದಲನೇ ಮಹಡಿಯಿಂದ ಬಾಲಕ ಬಿದ್ದರೂ ಪವಾಡಸದೃಶವಾಗಿ ಬದುಕುಳಿದ್ದಾನೆ. ಆತನ ಹಣೆ ಬರಹ ಗಟ್ಟಿಯಿರುವ ಕಾರಣ ಬದುಕಿದಿದ್ದಾನೆ. ಸದ್ಯ ಮಹಮ್ಮದ್‌ಗೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *