Headlines

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಇನ್ಮುಂದೆ ರೈಲಿಗೆ ಹೆಚ್ಚು ಹೊತ್ತು ಕಾಯಬೇಕಿಲ್ಲ

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಇನ್ಮುಂದೆ ರೈಲಿಗೆ ಹೆಚ್ಚು ಹೊತ್ತು ಕಾಯಬೇಕಿಲ್ಲ


ಬೆಂಗಳೂರು, ಡಿಸೆಂಬರ್ 22: ನಾಳೆಯಿಂದ ಅಂದರೆ ಡಿಸೆಂಬರ್ 23 ರಿಂದ 6ನೇ ಹೊಸ ಮೆಟ್ರೋ (ನಮ್ಮ ಮೆಟ್ರೋ) ರೈಲು ಟ್ರ್ಯಾಕಿಗಿಳಿಯಲಿದೆ. ಆ ಮೂಲಕ ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಗುಡ್ ನ್ಯೂಸ್ ನೀಡಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಆರನೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಆದ್ದರಿಂದ ಹೆಚ್ಚು ಹೊತ್ತು ರೈಲಿಗಾಗಿ ಕಾಯುವಿಕೆಗೆ ಬ್ರೇಕ್ ಬೀಳಲಿದೆ. ಈ ಬಗ್ಗೆ ಬಿಎಂಆರ್ ಸಿಎಲ್ (BMRCL)ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹಳದಿ ಮಾರ್ಗದಲ್ಲಿ 6ನೇ ಮೆಟ್ರೋ ರೈಲನ್ನು ಡಿಸೆಂಬರ್ 23 ರಿಂದ (ಮಂಗಳವಾರ) ಪ್ರಯಾಣಿಕರ ಸೇವೆಯನ್ನು ಪ್ರಾರಂಭಿಸಲಾಗುತ್ತಿದೆ. ಈ ರೈಲಿನ ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಜನದಟ್ಟಣೆಯ ಅವಧಿಯಲ್ಲಿ ಮೆಟ್ರೋ ಸೇವೆಗಳು ಪ್ರಸ್ತುತ ಇರುವ 15 ನಿಮಿಷಗಳ ಅಂತರದ ಬದಲಿಗೆ 13 ನಿಮಿಷಗಳು ಸಂಚರಿಸಲಿವೆ. ಭಾನುವಾರದಂದು ಪೀಕ್ ಅವಧಿಯ ಸೇವಾ ಅವಧಿ 15 ನಿಮಿಷ ಇರಲಿದೆ.

ನಮ್ಮ ಮೆಟ್ರೋ ಟ್ವೀಟ್

ಆರ್.ವಿ. ರಸ್ತೆ ಮತ್ತು ಬೊಮ್ಮಸಂದ್ರ ನಿಲ್ದಾಣಗಳೆರಡೂ ಟರ್ಮಿನಲ್‌ಗಳಿಂದ ಮೊದಲ ಮತ್ತು ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಮೇಲ್ಕಂಡ ಬದಲಾವಣೆಗಳನ್ನು ಗಮನಿಸಿ, ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಲು ಬಿಎಂಆರ್ ಸಿಎಲ್ ಕೋರಿದೆ.

ಇದನ್ನೂ ಓದಿ: ಹೊಸ ವರ್ಷಕ್ಕೆ ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ

ಇತ್ತೀಚೆಗೆ ನವೆಂಬರ್ 18 ರಂದು ಕೊಲ್ಕತ್ತಾದ ಟಿಟಾಗರ್ ನಿಂದ ಹೊರಟು ಆರನೇ ಡ್ರೈವರ್ ಲೆಸ್ ಮೆಟ್ರೋ ರೈಲು ಸೆಟ್ ಡಿಸೆಂಬರ್ 3 ರಂದು ಸಂಜೆ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ಬಂದು ತಲುಪಿತ್ತು. ಈ ಹೊಸ ರೈಲು ಸೇರ್ಪಡೆಯಿಂದ ರೈಲುಗಳ ನಡುವಿನಾಟದ ಸಮಯದಲ್ಲಿ ಇಳಿಕೆಯಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 8:12 pm, ಸೋಮ, 22 ಡಿಸೆಂಬರ್ 25





Source link

Leave a Reply

Your email address will not be published. Required fields are marked *