ಹುಬ್ಬಳ್ಳಿ, ಡಿಸೆಂಬರ್ 23: ಪ್ರೀತಿಸಿ ಅಂತರ್ಜಾತಿ ವಿವಾಹವಾಗಲು ತಂದೆಯಿಂದಲೇ ಮಗಳು ಮರ್ಯಾದಾ ಹತ್ಯೆ ಪ್ರಕರಣಕ್ಕೆ ನಡೆದ ಘಟನೆ 2 ದಿನ ಕಳೆದರೂ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತು ವಿರೋಧದ ವಿರುದ್ಧ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕುಟುಂಬದ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಂತ್ರಸ್ತ ಕುಟುಂಬವು ಆಸ್ಪತ್ರೆ ಬಿಲ್ ಪಾವತಿಸಲು ಪರದಾಡುವಂತಾಗಿದೆ. ಡಿಸಿ ಸೇರಿದಂತೆ ಅಧಿಕಾರಿಗಳು ಕುಟುಂಬಕ್ಕೆ ನೆರವು ನೀಡುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪ ಕೇಳಿಬಂದಿದೆ. ಸರ್ಕಾರವೇ ಆಸ್ಪತ್ರೆ ಬಿಲ್ ಭರಿಸಬೇಕು ಎಂದು ಸೂಚಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.