
ದಾವಣಗೆರೆ, ಡಿಸೆಂಬರ್ 23: ಅಕ್ರಮವಾಗಿ ಮಾದಕ ವಸ್ತು ಮಾರಾಟ ಹಾಗೂ ಸೇವನೆ ಮಾಡುತ್ತಿರುವ ದಾವಣಗೆರೆ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದ ಶಾಮನೂರ ವೇದಮೂರ್ತಿ(53) ಬಂಧಿತ ವ್ಯಕ್ತಿ. ಬಂಧಿತರಿಂದ ಅಂದಾಜು 10 ಲಕ್ಷ ರೂ ಮೌಲ್ಯದ 90 ಗ್ರಾಂ ಎಂ.ಡಿ.ಎಂ.ಎ ಹಾಗೂ 200 ಗ್ರಾಂ ಓಪಿಯಂ ಎಂಬ ಮಾದಕ ವಸ್ತು ಹಾಗೂ ಮಾದಕ ವಸ್ತುಗಳನ್ನು ಮಾರಾಟ ಮಾಡಿದ ಒಂದು ಲಕ್ಷ ರೂ. ನಗದು ಹಣ ಸೇರಿದಂತೆ 11 ಲಕ್ಷ ರೂ ಮೌಲ್ಯದ ಸ್ವತ್ತು ವಶಕ್ಕೆ ಪಡೆಯಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.