Headlines

ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್‌ನ್ಯೂಸ್‌ ನೀಡಿದ ಇಲಾಖೆ, ಋತುಚಕ್ರ ರಜೆಗೆ ಗ್ರೀನ್‌ ಸಿಗ್ನಲ್‌! | Ksrtc Bmtc Menstrual Leave For Women Employees Transport Department San

ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್‌ನ್ಯೂಸ್‌ ನೀಡಿದ ಇಲಾಖೆ, ಋತುಚಕ್ರ ರಜೆಗೆ ಗ್ರೀನ್‌ ಸಿಗ್ನಲ್‌! | Ksrtc Bmtc Menstrual Leave For Women Employees Transport Department San



ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್‌ನ್ಯೂಸ್‌ ನೀಡಿದ ಇಲಾಖೆ, ಋತುಚಕ್ರ ರಜೆಗೆ ಗ್ರೀನ್‌ ಸಿಗ್ನಲ್‌! | Ksrtc Bmtc Menstrual Leave For Women Employees Transport Department San

ಕರ್ನಾಟಕ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್ಆರ್ಟಿಸಿ, ಬಿಎಂಟಿಸಿ, NWKRTC, ಮತ್ತು KKRTCಯ ಮಹಿಳಾ ನೌಕರರಿಗೆ ರಾಜ್ಯ ಸರ್ಕಾರವು ಋತುಚಕ್ರ ರಜೆಯನ್ನು ಮಂಜೂರು ಮಾಡಿದೆ. ಜನವರಿ 1 ರಿಂದ ಜಾರಿಗೆ ಬರುವ ಈ ಆದೇಶದ ಅಡಿಯಲ್ಲಿ, ಅರ್ಹ ಮಹಿಳಾ ನೌಕರರು ಪ್ರತಿ ತಿಂಗಳು ಒಂದು ದಿನದ ರಜೆಯನ್ನು ಪಡೆಯಬಹುದು.

ಬೆಂಗಳೂರು (ಡಿ.23): ರಾಜ್ಯ ಸರ್ಕಾರದ ಅತ್ಯಂತ ಮಹತ್ವದ ಕ್ರಮದಲ್ಲಿ ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ನೀಡುವ ನಿರ್ಧಾರ ಮಾಡಲಾಗಿತ್ತು. ಇದನ್ನು ಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗಿತ್ತಾದರೂ, ಅಲ್ಲಿಯೂ ಕೂಡ ರಾಜ್ಯ ಸರ್ಕಾರ ಗೆಲುವು ಕಂಡಿದೆ. ಇದರ ಬೆನ್ನಲ್ಲಿಯೇ ನಾಲ್ಕು ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಇಲಾಖೆ ಗುಡ್‌ನ್ಯೂಸ್‌ ನೀಡಿದೆ. ಸಾರಿಗೆ ನಿಗಮದ ಮಹಿಳಾ ನೌಕರರಿಗೂ ಋತುಚಕ್ರದ ರಜೆ ನೀಡಲು ಇಲಾಖೆ ಗ್ರೀನ್‌ ಸಿಗ್ನಲ್‌ ನೀಡಿದೆ.

ಕೆಎಸ್ಆರ್ಟಿಸಿ, ಬಿಎಂಟಿಸಿ,NWKRTC, KKRTCಯಲ್ಲಿ ಈ ಆದೇಶ ಜಾರಿಗೆ ಬರಲಿದೆ ಎಂದು ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2026ರ ಜನವರಿ 1 ರಿಂದ ಮಹಿಳಾ ಡ್ರೈವರ್, ಕಂಡಕ್ಟರ್ ಸೇರಿದಂತೆ ಮಹಿಳಾ ನೌಕರರು ಋತುಚಕ್ರದ ರಜೆ ತೆಗೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.

ಕರ್ನಾಟಕ ಸರ್ಕಾರವು ಉಲ್ಲೇಖಿತ ಸರ್ಕಾರದ ಆದೇಶಗಳಲ್ಲಿ ಮಹಿಳಾ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಿ ಷರತ್ತು ಮತ್ತು ನಿಬಂಧನೆಗೊಳಪಟ್ಟು ರಜೆ ಮಂಜೂರು ಮಾಡಲು ಆದೇಶಿಸಿರುತ್ತದೆ ಎಂದು ತಿಳಿಸಲಾಗಿದೆ.

ಸದರಿ ಆದೇಶವನ್ನು ನಿಗಮದಲ್ಲಿ ಅಳವಡಿಸಿಕೊಂಡಿದ್ದು, ಅದರಂತೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ 2026ರ ಜನವರಿ 1 ರಿಂದ ಜಾರಿಗೆ ಬರುವಂತೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಷರತ್ತಿಗೆ ಒಳಪಟ್ಟು ಮಂಜೂರು ಮಾಡಬಹುದು ಎನ್ನಲಾಗಿದೆ.

ಇರುವ ಷರತ್ತುಗಳೇನು?

ಋತುಚಕ್ರ ಹೊಂದಿರುವ, 18 ರಿಂದ 52 ವಯಸ್ಸಿನ ನಿಗಮದ ಮಹಿಳಾ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋತುಚಕ್ರ ರಜೆ ಮಂಜೂರು ಮಾಡಬಹುದು. ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ.

ಈ ರಜೆಯನ್ನು ರಜೆ/ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸತಕ್ಕದ್ದು, ಋತುಚಕ್ರ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸತಕ್ಕದ್ದಲ್ಲ. ಸದರಿ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು ಹಾಗೂ ಮುಂದಿನ ತಿಂಗಳಿಗೆ ವಿಸ್ತರಿಸಲು (Carry over) ಅವಕಾಶವಿರುವುದಿಲ್ಲ ಎಂದು ತಿಳಿಸಲಾಗಿದೆ.



Source link

Leave a Reply

Your email address will not be published. Required fields are marked *