ಬೆಂಗಳೂರು: ಬಹುನಿರೀಕ್ಷಿತ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಟೂರ್ನಿಗೆ ಈಗಾಗಲೇ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದೆ. ಈ ಟೂರ್ನಿಯಲ್ಲಿ ಭಾರತ ತಂಡವು ಅಪರೂಪದಲ್ಲೇ ಅಪರೂಪದ ದಾಖಲೆ ಬರೆಯಲು ರೆಡಿಯಾಗಿದೆ. ಏನದು ಎನ್ನುವ ಕುತೂಹಲಕ್ಕೆ ಇಲ್ಲಿದೆ ಉತ್ತರ.

2024ರಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದೀಗ ಚಾಂಪಿಯನ್ ಪಟ್ಟ ಉಳಿಸಿಕೊಳ್ಳಲು ಸೂರ್ಯಕುಮಾರ್ ಪಡೆ ತುದಿಗಾಲಿನಲ್ಲಿ ನಿಂತಿದೆ.

ಇದೀಗ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಐಸಿಸಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡ ಎನ್ನುವ ಅಪರೂಪದ ದಾಖಲೆ ಬರೆಯಲು ರೆಡಿಯಾಗಿದೆ.

2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ಹಾಗೂ ಶ್ರೀಲಂಕಾ ಜಂಟಿ ಆತಿಥ್ಯ ವಹಿಸಿವೆ. ಇದೀಗ ತವರಿನ ಮೈದಾನದಲ್ಲಿ ಚಾಂಪಿಯನ್ ಆಗಲು ಸೂರ್ಯಕುಮಾರ್ ಯಾದವ್ ಪಡೆ ಎದುರು ನೋಡುತ್ತಿದೆ.

ಇದುವರೆಗೂ ಆತಿಥ್ಯ ವಹಿಸಿದ ಯಾವುದೇ ದೇಶವು ಟಿ20 ವಿಶ್ವಕಪ್ ಟ್ರೋಫಿ ಜಯಿಸಿಲ್ಲ. ಭಾರತ ತಂಡವು ಇದೀಗ ಟ್ರೋಫಿ ಗೆದ್ದು ಹೊಸ ಇತಿಹಾಸ ಬರೆಯಲು ಸುವರ್ಣಾವಕಾಶ ಒದಗಿ ಬಂದಿದೆ.

ಭಾರತ ತಂಡವು ಫೆಬ್ರವರಿ 07ರಂದು ಯುಎಸ್‌ಎ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಪಂದ್ಯಕ್ಕೆ ಮುಂಬೈನ ವಾಂಖೇಡೆ ಮೈದಾನ ಆತಿಥ್ಯ ವಹಿಸಿದೆ.

ಭಾರತ ತಂಡವು ಈಗಾಗಲೇ 2007 ಹಾಗೂ 2024ರಲ್ಲಿ ಟಿ20 ವಿಶ್ವಕಪ್ ಚಾಂಪಿಯನ್ ಆಗಿದ್ದು, ಈ ಬಾರಿಯೂ ಚಾಂಪಿಯನ್ ಆದರೇ ಮೂರು ಬಾರಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡ ಎನ್ನುವ ಅಪರೂಪದ ಹೆಗ್ಗಳಿಕೆ ಟೀಂ ಇಂಡಿಯಾ ಪಾಲಾಗಲಿದೆ.

Source link
2026ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಎರಡು ಅಪರೂಪದಲ್ಲೇ ಅಪರೂಪದ ದಾಖಲೆ ಬರೆಯಲು ರೆಡಿಯಾದ ಟೀಂ ಇಂಡಿಯಾ!