ಭಾರತದ ವಿರುದ್ಧ ಸರಣಿಗಾಗಿ ನ್ಯೂಝ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಜನವರಿ 11 ರಿಂದ ಶುರುವಾಗಲಿರುವ ಏಕದಿನ ಸರಣಿಯಲ್ಲಿ ನ್ಯೂಝಿಲೆಂಡ್ ತಂಡವನ್ನು ಮೈಕೆಲ್ ಬ್ರೇಸ್ ಮುನ್ನಡೆಸಲಿದ್ದಾರೆ. ಇನ್ನು ಟಿ20 ಸರಣಿಯಲ್ಲಿ ಮಿಚೆಲ್ ಸ್ಯಾಂಟ್ನರ್ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.
ವಿಶೇಷ ಎಂದರೆ ಈ ಎರಡು ತಂಡ ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ ಕೆನ್ ವಿಲಿಯಮ್ಸನ್ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಬರುವ ಟಿ20 ಗೆ ವಿಲಿಯಮ್ಸನ್ ಆಯ್ಕೆಯಾಗುವುದು ಅನುಮಾನ ಎನ್ನಬಹುದು.
ಇನ್ನು ಏಕದಿನ ಸರಣಿ ವೇಳೆ ಮ್ಯಾಟ್ ಹೆನ್ರಿಮಾರ್ಕ್ ಚಾಪ್ಮನ್, ರಚಿನ್ ರವೀಂದ್ರ ಮತ್ತು ನಾಯಕ ಮಿಚೆಲ್ ಸ್ಯಾಂಟ್ನರ್ಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿಯೇ ಮೂರು ಪಂದ್ಯಗಳ ಸರಣಿಯಲ್ಲಿ ಬ್ರೆಸ್ವೆಲ್ ತಂಡವು ಮುನ್ನಡೆಯುತ್ತಿದೆ. ಅದರಂತೆ ವಿರುದ್ಧ ಏಕದಿನ ಮತ್ತು ಟಿ20 ಸರಣಿಯ ತಂಡಗಳು ಈ ಕೆಳಗಿನಂತಿವೆ…
ನ್ಯೂಝಿಲೆಂಡ್ ಏಕದಿನ ತಂಡ: ಮೈಕೆಲ್ ಬ್ರೆಸ್ವೆಲ್ (ನಾಯಕ), ಆದಿ ಅಶೋಕ್, ಕ್ರಿಶ್ಚಿಯನ್ ಕ್ಲಾರ್ಕ್, ಜೋಶ್ ಕ್ಲಾರ್ಕ್ಸನ್, ಡೆವೊನ್ ಕಾನ್ವೆ, ಝ್ಯಾಕ್ ಫೌಲ್ಕ್ಸ್, ಮಿಚ್ ಹೇ (ಮತ್ತು ಕೀಪರ್), ಕೈಲ್ ಜೇಮಿಸನ್, ನಿಕ್ ಕೆಲ್ಲಿ, ಜೇಡನ್ ಲೆನಾಕ್ಸ್, ಡೇರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರೇವಿಲ್ ಯಂಗ್.
ನ್ಯೂಝಿಲೆಂಡ್ ಟಿ20 ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೆಸ್ವೆಲ್ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ (ಮತ್ತು ಕೀಪರ್), ಜೇಕಬ್ ಡಫಿ,ಝ್ಯಾಕೆ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಬೆವೊನ್ ಜೇಕಬ್ಸ್, ಡೇರಿಲ್ ಮಿಚೆಲ್ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಟಿಮ್ ರಾಬಿನ್ಸನ್, ಇಶ್ ಸೋಧಿ.
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ಸಿಂಗ್ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾಶನ್, ವಾಷಿಂಗ್ಟನ್ ಸುಂದರ್, ಕುಲ್ದೀಪ್.
ಭಾರತ ಏಕದಿನ ತಂಡ: ಇನ್ನೂ ಘೋಷಣೆಯಾಗಿಲ್ಲ.
ಭಾರತ vs ನ್ಯೂಝಿಲೆಂಡ್ ಏಕದಿನ ಸರಣಿ
- ಮೊದಲ ಏಕದಿನ ಪಂದ್ಯ – ಜನವರಿ 11 – ವಡೋದರಾ – ಮಧ್ಯಾಹ್ನ 1:30
- ಎರಡನೇ ಏಕದಿನ ಪಂದ್ಯ – ಜನವರಿ 14 – ರಾಜ್‌ಕೋಟ್ – ಮಧ್ಯಾಹ್ನ 1:30
- ಮೂರನೇ ಏಕದಿನ ಪಂದ್ಯ – ಜನವರಿ 18 – ಇಂದೋರ್ – ಮಧ್ಯಾಹ್ನ 1:30
ಇದನ್ನೂ ಓದಿ: ಆಸ್ಟ್ರೇಲಿಯಾ ದಾಂಡಿಗರ ಸಿಡಿಲಬ್ಬರ… ಟಿ20 ದಾಖಲೆಗಳು ಧೂಳೀಪಟ
ಭಾರತ vs ನ್ಯೂಝಿಲೆಂಡ್ ಟಿ20 ಸರಣಿ
- ಮೊದಲ ಟಿ20 ಪಂದ್ಯ – ಜನವರಿ 21 – ನಾಗ್ಪುರ – ರಾತ್ರಿ 7:00
- ಎರಡನೇ ಟಿ20 ಪಂದ್ಯ – ಜನವರಿ 23 – ರಾಯಪುರ – ರಾತ್ರಿ 7:00
- ಮೂರನೇ ಟಿ20 ಪಂದ್ಯ – ಜನವರಿ 25 – ಗುವಾಹಟಿ – ರಾತ್ರಿ 7:00
- ನಾಲ್ಕನೇ ಟಿ20 ಪಂದ್ಯ – ಜನವರಿ 28 – ವಿಶಾಖಪಟ್ಟಣ – ರಾತ್ರಿ 7:00
- ಐದನೇ ಟಿ20 ಪಂದ್ಯ – ಜನವರಿ 31 – ತಿರುವನಂತಪುರಂ – ರಾತ್ರಿ 7:00