ಕೊಪ್ಪಳ, ಡಿಸೆಂಬರ್ 24: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಬ್ಬರು ಸ್ವಾಮೀಜಿಗಳ ನಡುವೆ ಭಾರೀ ಗಲಾಟೆ ನಡೆದಿದೆ. ಆಂಜನೇಯ ಸ್ವಾಮಿಯ ಗರ್ಭಗುಡಿಯಲ್ಲಿಯೇ ಸ್ವಾಮೀಜಿಗಳ ಮಧ್ಯೆ ಮಾತಿನ ಚಕಮಕಿ ಆರಂಭವಾಗಿ ಬಳಿಕ ಹೊಡೆದಾಟದ ಮಟ್ಟಕ್ಕೆ ತಲುಪಿದೆ. ದೇವಸ್ಥಾನದ ಪೂಜಾ ಕಾರ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಅರ್ಚಕ ವಿದ್ಯಾದಾಸ ಬಾಬಾ ಸ್ವಾಮೀಜಿ, ಹಂಪಿ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪೂಜಾ ಸಮಯದಲ್ಲಿ ಅವಾಚ್ಯ ಪದವನ್ನು ಬಳಸಿ ನಿಂದನೆ ಎಂದು ವಿದ್ಯಾದಾಸ ಬಾಬಾ ಆರೋಪಿಸಿದ್ದಾರೆ.
ಇಬ್ಬರ ನಡುವೆ ವಾಗ್ವಾದ ತೀವ್ರಗೊಂಡಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರ ಸಮ್ಮುಖದಲ್ಲಿಯೇ ಇಬ್ಬರು ಸ್ವಾಮೀಜಿಗಳು ಹೊಡೆದಾಡಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.
ಈ ಘಟನೆಯಲ್ಲಿ ವಿದ್ಯಾದಾಸ ಬಾಬಾ ಸ್ವಾಮೀಜಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೂಜಾ ಕಾರ್ಯಕ್ಕೆ ಅಡ್ಡಿಪಡಿಸಿ ನಿಂದನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ