ಬೆಂಗಳೂರು, ಡಿಸೆಂಬರ್ 24: ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ನಿವಾಸ ಸೇರಿದಂತೆ ಹತ್ತು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಅಕ್ರಮ ಆಸ್ತಿ ಗಳಿಕೆ ಆರೋಪದ ಸಂಬಂಧ ಈ ದಾಳಿ ನಡೆದಿದೆ. ಬೆಂಗಳೂರಿನ ಹಲಸೂರು ನಿವಾಸ, ಇತರ ಆರು ಮನೆಗಳು ಸೇರಿದಂತೆ ಒಟ್ಟು ಏಳು ಮನೆಗಳು, ಕೊಡಗಿನ ಎರಡು ಕಾಫಿ ಎಸ್ಟೇಟ್‌ಗಳು ಮತ್ತು ಹೆಚ್.ಡಿ.ಕೋಟೆಯ ಒಂದು ರೆಸಾರ್ಟ್ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಸರ್ದಾರ್ ಸರ್ಫರಾಜ್ ಖಾನ್ ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಅಧಿಕಾರಿ, ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆಯ ಕುರಿತು ಪ್ರಕರಣ ದಾಖಲಾಗಿದೆ. ಈ ಬುಧವಾರ ಬೆಳ್ಳಂಬೆಳಿಗ್ಗೆ 50ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ದಾಳಿಯನ್ನು ಸೂಚಿಸಿದ್ದಾರೆ. ಎಲ್ಲಾ 10 ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಆಸ್ತಿ ವಿವರಗಳ ಸಂಗ್ರಹ ಕಾರ್ಯ ಮುಂದುವರೆದಿದೆ.
ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ