ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಬಂಧನ
ಬೆಂಗಳೂರು, ಡಿಸೆಂಬರ್ 24: ಇನ್ಸ್ಟಾಗ್ರಾಮ್ ಸಿಕ್ಕ ಯುವಕನೊಬ್ಬನ ಪ್ರೀತಿ ವಿಚಾರವಾಗಿ ನಡು ರಸ್ತೆಯಲ್ಲೇ ಯುವತಿಯ ಮೇಲೆ ಹಲ್ಲೆ ನಡೆಸಿರುವ ಬೆಂಗಳೂರಿನ ಘಟನೆ (ಬೆಂಗಳೂರು) ಜ್ಞಾನಭಾರತಿ ಪೊಲೀಸ್ ಠಾಣಾ ಸಂಭವಿಸಿದೆ. ಪಿ.ಜಿ ಬಳಿ ಕಾರಿನಲ್ಲಿ ಬಂದ ಯುವಕ, ಯುವತಿಗೆ ಹಲವು ಬಾರಿ ಥಳಿಸಿದ್ದು, ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾಹಿತಿ ಪಡೆದ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ.
ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದಿದ್ದ ಯುವಕ
ಆರೋಪಿಯನ್ನು ನವೀನ್ ಕುಮಾರ್ ಎಂದು ಗುರುತಿಸಲಾಗಿದೆ, ಸಂತ್ರಸ್ತ ಯುವತಿಯು 2024 ರಲ್ಲಿ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಪರಿಚಯದ ಬಳಿಕ ಇಬ್ಬರ ನಡುವೆ ಫೋನ್ ಕರೆ ಮತ್ತು ಮೆಸೇಜ್ ಮೂಲಕ ಸಂಪರ್ಕ ಮುಂದುವರಿದಿತ್ತು. ಆದರೆ ನವೀನ್ ಕುಮಾರ್ ಯುವತಿಯನ್ನು ಪ್ರೀತಿಸಬೇಕು ಎಂದು ಬಲವಂತ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಇವರಿಬ್ಬರ ನಡುವೆ ಪ್ರೀತಿ ಹಾಗೂ ಹಣಕಾಸಿನ ವಿಚಾರವಾಗಿ ವೈಮನಸ್ಸು ಉಂಟಾಗಿತ್ತು.
ಸಿಸಿ ಟಿವಿ ದೃಶ್ಯ ಇಲ್ಲಿದೆ
ಇದನ್ನೂ ಓದಿ ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಪರಾರಿಯಾಗಿರುವ ಆರೋಪಿಯ ಬಂಧನ
ಸೋಮವಾರ ಜ್ಞಾನಭಾರತಿಯಲ್ಲಿರುವ ಯುವತಿಯ ಪಿ.ಜಿ ಬಳಿ ಕಾರಿನಲ್ಲಿ ಬಂದ ನವೀನ್, ಹಾರನ್ ಹೊಡೆದು ಯುವತಿಯನ್ನು ಕರೆಯಲು ಯತ್ನಿಸಿದ್ದಾನೆ. ಈ ವೇಳೆ ಯುವತಿಯ ಸ್ನೇಹಿತೆ ಪೊಲೀಸರಿಗೆ ಕರೆ ಮಾಡಿರುವುದಾಗಿ ಹೇಳಿದ್ದು, ಯುವತಿ ಹಿಂದಕ್ಕೆ ಸರಿಯಲು ಯತ್ನಿಸಿದ್ದಾಳೆ. ಆದರೆ ನವೀನ್ ಆಕೆಯ ವ್ಯಾನಿಟಿ ಬ್ಯಾಗ್ ಅದರೊಳಗೆ ಹುಡುಕಾಟ ನಡೆಸಿ, ಯುವತಿಯ ಹಿಂದೆ ಓಡಿ ಹಿಡಿದು ಎಳೆದಾಡಿ ಹಲ್ಲೆ ನಡೆಸಿದ್ದಾನೆ. ಎರಡು ಬಾರಿಗೂ ಹೆಚ್ಚು ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಘಟನೆಯ ನಂತರ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದರೂ, ಜ್ಞಾನಭಾರತಿ ತ್ವರಿತ ಕಾರ್ಯಾಚರಣೆ ನಡೆಸಿ ನವೀನ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಪ್ರದೀಪ್, ಟಿವಿ9 ಬೆಂಗಳೂರು
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 12:48 pm, ಬುಧವಾರ, 24 ಡಿಸೆಂಬರ್ 25