ಬಳ್ಳಾರಿ,ಡಿ.24: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ನಡೆದ 4.5 ಕೆಜಿ ಚಿನ್ನಾಭರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ವಿಶೇಷ ತನಿಖಾ ತಂಡ (ಎಸ್ಐಟಿ) ಬಳ್ಳಾರಿಯ ರೊದ್ದಂ ಜುವೆಲರ್ಸ್ ಮೇಲೆ ದಾಳಿ ನಡೆಸಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದೆ. ಕೇರಳದ ಐವರು ಅಧಿಕಾರಿಗಳು ಜುವೆಲರಿ ಅಂಗಡಿಯನ್ನು ಸಂಪೂರ್ಣವಾಗಿ ಮುಚ್ಚಿ ಪರಿಶೀಲನೆಯನ್ನು ಹೊಂದಿದೆ. ಈ ಅಂಗಡಿಯ ಮಾಲೀಕ ಗೋವರ್ಧನ್ ಅವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಗೋವರ್ಧನ್ ಅವರು ಕದ್ದ ಚಿನ್ನದಲ್ಲಿ ಸುಮಾರು 475 ಗ್ರಾಂ ಖರೀದಿಸಿದ್ದರು ಎಂಬ ಮಾಹಿತಿ ಎಸ್ಐಟಿಗೆ ಲಭ್ಯವಾಗಿದೆ. ಈ ಹಿಂದೆ 2019ರಲ್ಲಿ ಅಯ್ಯಪ್ಪ ದೇಗುಲದ ದ್ವಾರಪಾಲಕ ಮೂರ್ತಿಗಳಿಗೆ ಚಿನ್ನ ಲೇಪನ ಮಾಡುವ ಜವಾಬ್ದಾರಿಯನ್ನು ಉನ್ನಿಕೃಷ್ಣನ್ ಅವರಿಗೆ ವಹಿಸಲಾಗಿದೆ. ಆದರೆ ಹಿಂದಿರುಗಿಸುವಾಗ ಚಿನ್ನದ ತೂಕದಲ್ಲಿ ವ್ಯತ್ಯಾಸ ಕಂಡುಬಂದಿದೆ. ಈ ಪ್ರಕರಣ ಇದೀಗ ತೀವ್ರಗೊಂಡಿದೆ. ಎಸ್ಐಟಿ ಅಧಿಕಾರಿಗಳು ಗೋವರ್ಧನ್ ಅವರ ಹೇಳಿಕೆಗಳು ಮತ್ತು ಜ್ಯೂವೆಲರಿ ಅಂಗಡಿಯಲ್ಲಿನ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಜೊತೆಗೆ, ಅಂಗಡಿಯಲ್ಲಿ ಕೆಲಸ ಮಾಡುವ ಹತ್ತಕ್ಕೂ ಹೆಚ್ಚು ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ರೊದ್ದಂ ಜುವೆಲರ್ಸ್ ಮೇಲೆ ಇದೆ, ಗೋವರ್ಧನ್ ಅವರ ಮನೆ ಮೇಲೂ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ನ್ಯಾಯಾಲಯದ ಸೂಚನೆಯ ನಂತರ ಎಸ್ಐಟಿ ತಂಡವು ತನಿಖೆಯನ್ನು ಚುರುಕುಗೊಳಿಸಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ